ಬ್ರೇಕಿಂಗ್ ನ್ಯೂಸ್
03-03-22 07:13 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.3: ಕಾಂಗ್ರೆಸ್ ಆಯೋಜಿಸಿದ್ದ ಮೇಕೆದಾಟು ಪಾದಯಾತ್ರೆಯಿಂದಾಗಿ ಬೆಂಗಳೂರು ನಗರದಲ್ಲಿ ಟ್ರಾಫಿಕ್ ಜಾಮ್ ಆಗಿ ಸಮಸ್ಯೆ ಅನುಭವಿಸಿದ ಹೈಕೋರ್ಟ್ ನ್ಯಾಯಮೂರ್ತಿಗಳು ಸರಕಾರವನ್ನು ತರಾಟೆಗೆ ಎತ್ತಿಕೊಂಡಿದ್ದಾರೆ.
ಪಾದಯಾತ್ರೆಯ ಕಾರಣ ಟ್ರಾಫಿಕ್ ಸಮಸ್ಯೆ ಉಂಟಾಗಿದ್ದರಿಂದ ನ್ಯಾಯಾಧೀಶರು ಒಂದು ಗಂಟೆ ತಡವಾಗಿ ಕೋರ್ಟಿಗೆ ಆಗಮಿಸಿದ್ದು ಕಲಾಪ ತಡವಾಗಿ ಆರಂಭಿಸುವಂತಾಗಿತ್ತು. ಇದರಿಂದ ಸಿಟ್ಟುಗೊಂಡ ನ್ಯಾಯಾಧೀಶರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಇಂದು ಹೈಕೋರ್ಟ್ ತಲುಪಲು ನಮಗೇ ಒಂದು ಗಂಟೆ ಬೇಕಾಯಿತು. ಇಂತದರಲ್ಲಿ ಜನಸಾಮಾನ್ಯರು ಓಡಾಡುವುದು ಹೇಗೆ..? ಇದಕ್ಕೆಲ್ಲಾ ನಿರ್ಬಂಧಗಳನ್ನು ವಿಧಿಸಬೇಕು ಎಂದು ಸರಕಾರಕ್ಕೆ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್ ಕೃಷ್ಣ ಕುಮಾರ್ ಅವರಿದ್ದ ವಿಭಾಗೀಯ ಪೀಠ ತಾಕೀತು ಮಾಡಿದೆ.
ಬೆಂಗಳೂರು ನಗರ ಭಾಗದಲ್ಲಿ ಇನ್ಮುಂದೆ ಯಾವುದೇ ಪ್ರತಿಭಟನೆಗಳನ್ನು ಕೈಗೊಳ್ಳಲು ಅವಕಾಶ ನೀಡಬಾರದು. ಪ್ರತಿಭಟನೆಗಳನ್ನು ಮಾಡುವುದಿದ್ದರೆ ಫ್ರೀಡಂ ಪಾರ್ಕ್ ನಲ್ಲಿ ಮಾತ್ರವೇ ನಡೆಸಲು ಅನುಮತಿ ನೀಡಬೇಕು. ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುವ ವೇಳೆಯೂ ನಗರದ ಸಂಚಾರ ಹಾಗೂ ದಿನನಿತ್ಯದ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರಕಾರಕ್ಕೆ ಆದೇಶ ಮಾಡಿದ್ದಾರೆ. ಈ ಆದೇಶ ಉಲ್ಲಂಘನೆ ಮಾಡಿದಲ್ಲಿ ಐಪಿಸಿ ಸೆಕ್ಷನ್ 188 ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ-1963ರ ಅಡಿ ಸಂಬಂಧಪಟ್ಟ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.
ಈ ಬಗ್ಗೆ ಸ್ವಯಂಪ್ರೇರಿತವಾಗಿ ಹೈಕೋರ್ಟ್ ನ್ಯಾಯಪೀಠ ಪ್ರಕರಣ ದಾಖಲಿಸಿಕೊಂಡು ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೆ, ಪ್ರತಿಭಟನೆ ನಿಷೇಧಿಸಿ ಆದೇಶ ಮಾಡಿದೆ
The Karnataka High Court on Thursday, March 3, objected to the padayatra organized by the opposition Congress demanding start of work on the Mekedatu project, which will provide drinking water to Bengaluru and surrounding areas. The court further ordered the Congress not to take up any protest in Bengaluru henceforth. The Division Bench headed by Chief Justice Ritu Raj Awasthi and Justice S R Krishnakumar gave this order.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm