ಬ್ರೇಕಿಂಗ್ ನ್ಯೂಸ್
08-03-22 10:36 pm Bengalore Correspondent ಕರ್ನಾಟಕ
ಬೆಂಗಳೂರು, ಮಾ.8: ಇತ್ತೀಚೆಗೆ ರಾಜಕೀಯ ದ್ವೇಷದ ಕಾರಣಕ್ಕೆ ಅತಿ ಹೆಚ್ಚು ಹತ್ಯೆಗಳು ನಡೆಯುತ್ತಿವೆ. ತನ್ನ ದಾರಿಗೆ ಅಡ್ಡಿ ಎಂಬ ಕಾರಣಕ್ಕಾಗಿ ಇನ್ನೊಬ್ಬನ ಹತ್ಯೆ ನಡೆಯುತ್ತಿರುವುದು ಅತ್ಯಂತ ಅಪಾಯಕಾರಿ ಮತ್ತು ಆಘಾತಕಾರಿ ಬೆಳವಳಣಿಗೆ ಎಂದು ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ.
ಕೊಲೆ ಆರೋಪ ಪ್ರಕರಣದಲ್ಲಿ ಜೈಲು ಪಾಲಾಗಿರುವ ಗ್ರಾಮ ಪಂಚಾಯಿತಿ ಸದಸ್ಯನಿಗೆ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ. ಶ್ರೀಶಾನಂದ ರಾಜಕೀಯ ಕಾರಣಗಳಿಗೆ ಹತ್ಯೆ ನಡೆಯುತ್ತಿರುವ ಕುರಿತು ಕಳವಳ ವ್ಯಕ್ತಪಡಿಸಿದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ಅಭಿಯೋಜಕರಿಗೆ ಸೂಚಿಸಿ ವಿಚಾರಣೆ ಮುಂದೂಡಿದರು. ಈ ವೇಳೆ ಮಧ್ಯಪ್ರವೇಶಿಸಿದ ಆರೋಪಿ ಪರ ವಕೀಲರು, ಅರ್ಜಿದಾರರು ಗ್ರಾಮ ಪಂಚಾಯತಿ ಸದಸ್ಯರಾಗಿದ್ದಾರೆ ಎಂಬ ಕಾರಣಕ್ಕೆ ವಿಚಾರಣಾ ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಪ್ರಕರಣದ ತನಿಖೆ ಈಗಾಗಲೇ ಪೂರ್ಣಗೊಂಡಿದ್ದು, ದೋಷಾರೋಪ ಪಟ್ಟಿಯೂ ಸಲ್ಲಿಕೆಯಾಗಿದೆ. ಆದರೆ ಅರ್ಜಿದಾರರನ್ನು ಅನಗತ್ಯವಾಗಿ ಬಂಧಿಸಿಡಲಾಗಿದೆ. ಆದ್ದರಿಂದ ಆರೋಪಿಗೆ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿದ ನ್ಯಾಯಾಧೀಶರು, ಯಾವುದೇ ಪ್ರಕರಣದಲ್ಲಿ ಸುಖಾಸುಮ್ಮನೆ ಯಾರನ್ನೂ ಬಂಧಿಸುವುದಿಲ್ಲ. ಹಾಗೆ ಬಂಧಿಸಿದರೆ ಅದು ಅಕ್ರಮ ಬಂಧನವಾಗುತ್ತದೆ. ಈ ಪ್ರಕರಣದಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ನಾವು ಎಷ್ಟೇ ಪ್ರಯತ್ನಿಸಿದರೂ ಆತನನ್ನು ಬದುಕಿಸಲಾಗದು. ಇತ್ತೀಚೆಗೆ ಹೆಚ್ಚು ಕೊಲೆಗಳು ನಡೆಯುತ್ತಿರುವುದೇ ಮೂರು ಕಾರಣಗಳಿಗೆ. ಅನೈತಿಕ ಸಂಬಂಧ, ಯಾವುದಾದರೂ ಲಾಭಕ್ಕಾಗಿ, ಇಲ್ಲವೇ ರಾಜಕೀಯ ದ್ವೇಷಕ್ಕೆ. ಈ ಕಾರಣ ಇರದಿದ್ದರೆ ಅಷ್ಟು ಸುಲಭದಲ್ಲಿ ಹತ್ಯೆಗಳು ನಡೆಯುವುದಿಲ್ಲ.
ಓರ್ವ ವ್ಯಕ್ತಿ ತನ್ನ ಬೆಳವಣಿಗೆಗೆ ಅಡ್ಡಿಯಾಗಿದ್ದಾನೆ. ಆತನನ್ನು ಮುಗಿಸಿದರೆ ಸರಿಹೋಗುತ್ತದೆ ಎಂಬುದು ಮನಸ್ಸಿಗೆ ಬಂದರೆ, ಕೊಲೆಗಳು ನಡೆದು ಹೋಗುತ್ತವೆ. ಜೈಲಿನಿಂದ ಬಂದ ನಂತರವೂ ನನ್ನ ಎದುರು ಹಾಕಿಕೊಂಡವನ ಕಥೆ ಏನಾಯಿತು ನೋಡು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಾನೆ. ಈ ಕಾರಣಕ್ಕೆ ಗ್ರಾಮ ಪಂಚಾಯಿತಿ ಹಂತದಲ್ಲಿ ರಾಜಕೀಯ ಪಕ್ಷಗಳನ್ನು ಹೊರಗಿಡಲಾಗಿದೆ. ಹಾಗಿದ್ದರೂ ಇಂದು ಗ್ರಾಮಗಳಲ್ಲಿ ರಾಜಕೀಯ ತಲುಪಿದ್ದು ದ್ವೇಷ ರಾಜಕಾರಣವೂ ಹೆಚ್ಚುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
The High Court is deeply concerned that the killing of another is a very dangerous and traumatic day for the disruption of its path.
16-07-25 07:05 pm
Bangalore Correspondent
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
16-07-25 01:01 pm
Mangalore Correspondent
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
16-07-25 04:37 pm
HK News Desk
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm