ಬ್ರೇಕಿಂಗ್ ನ್ಯೂಸ್
12-03-22 08:00 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.12 : ವಿಧಾನ ಪರಿಷತ್ ಸದಸ್ಯ, ಹಿರಿಯ ಕಾಂಗ್ರೆಸ್ ನಾಯಕ ಸಿ.ಎಂ. ಇಬ್ರಾಹಿಂ ಕೊನೆಗೂ ಕಾಂಗ್ರೆಸ್ ತೊರೆದಿದ್ದಾರೆ. ಶನಿವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು ಪರಿಷತ್ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.
ಈ ಬಗ್ಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದು ಪಕ್ಷದಲ್ಲಿ ತಮ್ಮನ್ನು ಕಡೆಗಣಿಸುತ್ತಿರುವ ಕಾರಣಕ್ಕೆ ಕಾಂಗ್ರೆಸ್ ಬಿಡುತ್ತಿರುವುದಾಗಿ ತಿಳಿಸಿದ್ದಾರೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಈ ಪತ್ರವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದರು.
ವಿಧಾನ ಪರಿಷತ್‌ನಲ್ಲಿ 18 ಸದಸ್ಯರ ಬೆಂಬಲ ನನಗೆ ಇತ್ತು. ಆದರೆ, ಪರಿಷತ್ ಸದಸ್ಯರಲ್ಲೇ ಕಿರಿಯರಾದ ಬಿ.ಕೆ. ಹರಿಪ್ರಸಾದ್ ಅವರನ್ನು ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ನೇಮಿಸಲಾಗಿದೆ. ಪಕ್ಷದ ಬೆಳವಣಿಗೆಗಳ ಕುರಿತು ತಮ್ಮನ್ನು ಭೇಟಿಯಾಗಿ ಚರ್ಚಿಸಲು ಅವಕಾಶವೇ ದೊರೆಯಲಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯತ್ವಕ್ಕೂ ರಾಜೀನಾಮೆ ಪತ್ರವನ್ನು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮುಖಾಂತರ ಸಭಾಪತಿಯವರಿಗೆ ಕಳುಹಿಸಿದ್ದೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸ್ವಾಭಿಮಾನಕ್ಕೆ ಜಾಗವಿಲ್ಲ. ಆದ್ದರಿಂದ ರಾಜೀನಾಮೆ ನೀಡಿದ್ದೇನೆ. ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿದೆ ಎಂದು ಧ್ವನಿ ಎತ್ತಿದ ಬಳಿಕ ಯು.ಟಿ. ಖಾದರ್ ಅವರಿಗೆ ವಿಧಾನಸಭೆ ವಿರೋಧಪಕ್ಷದ ಉಪ ನಾಯಕನ ಸ್ಥಾನ ನೀಡಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.
‘ಸಿದ್ದರಾಮಯ್ಯ ಅವರಿಗಾಗಿ ಕಾಂಗ್ರೆಸ್ ಸೇರಿದ್ದೆ. ಅವರೇ ನಡು ನೀರಿನಲ್ಲಿ ಕೈಬಿಟ್ಟರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೂ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡುವುದಿಲ್ಲ. ನಾನು ದೇವೇಗೌಡರ ಮನೆಗೆ ಹೋದರೆ ಇವರಿಗೆ ಉರಿಯುತ್ತದೆ. ಶಾಮನೂರು ಶಿವಶಂಕರಪ್ಪ, ಬಿ.ಎಸ್. ಯಡಿಯೂರಪ್ಪ ಪರ ಹೇಳಿಕೆ ಕೊಟ್ಟರೆ ಆಗೋದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
Senior Congress leader and MLC CM Ibrahim on Saturday said he has resigned from the primary membership of the party, and was inclined to join the JD(S). The senior politician, however, said he will announce his decision to join the regional party after discussing with the JD(S) leadership, including former Prime Minister HD Deve Gowda, in a couple of days.
30-10-24 07:54 pm
Bangalore Correspondent
ರಾಕಿ ಭಾಯ್ ಸಿನಿಮಾ 'ಟಾಕ್ಸಿಕ್'ಗಾಗಿ ನೂರಾರು ಮರಗಳ ಮ...
30-10-24 02:02 pm
Chikkamagaluru accident, Hassan: ಚಿಕ್ಕಮಗಳೂರು...
30-10-24 12:18 pm
Actor Darshan Bail, Released, Murder: ಕೊನೆಗೂ...
30-10-24 11:55 am
ರೈತರ ಜಮೀನಿಗೆ ವಕ್ಫ್ ನೋಟಿಸ್ ; ವಿಜಯಪುರದಲ್ಲಿ ತೀವ್...
29-10-24 11:02 pm
29-10-24 08:23 pm
HK News Desk
ಕಾಞಂಗಾಡ್ ; ತೈಯ್ಯಂ ಉತ್ಸವಕ್ಕೂ ಮುನ್ನ ಪಟಾಕಿ ದುರಂತ...
29-10-24 12:01 pm
ಕೇರಳದ ಯೂಟ್ಯೂಬರ್ ದಂಪತಿ ಸಾವಿಗೆ ಶರಣು ; ಕೊನೆಯ ವಿ...
28-10-24 08:38 pm
ಇಸ್ರೇಲಿಗೆ ನಮ್ಮ ಸಾಮರ್ಥ್ಯ ತೋರಿಸುತ್ತೇವೆ ಎಂದು ಪೋಸ...
28-10-24 05:56 pm
Cyber fraud, Digital arrest, Modi: "ಡಿಜಿಟಲ್ ಅ...
28-10-24 11:47 am
30-10-24 06:32 pm
Mangalore Correspondent
Mangalore Fire, Pilikula: ಪಿಲಿಕುಳ ನಿಸರ್ಗಧಾಮದಲ...
30-10-24 04:28 pm
Mangalore Rajyotsava Award 2024: ಜಿಲ್ಲಾ ರಾಜ್ಯ...
28-10-24 10:51 pm
Leopard, pilar, Deralakatte; ದೇರಳಕಟ್ಟೆ ಪ್ರದೇಶ...
28-10-24 03:53 pm
MLA Harish Poonja, B K Harishprasad: ಪುಡಿ ರಾಜ...
28-10-24 01:00 pm
30-10-24 10:43 pm
HK News Desk
IIFL Securities, share market, Mangalore cybe...
29-10-24 01:01 pm
Mangalore Murder, Crime, Kateel: ಕಟೀಲು ಬಳಿ ಮನ...
29-10-24 12:38 pm
Mangalore Crime, Drugs: ಪಣಂಬೂರಿನಲ್ಲಿ ಡ್ರಗ್ಸ್...
28-10-24 11:12 pm
Bangalore Crime, Blackmail: ಪತ್ನಿ ಮತ್ತು ಆಕೆಯ...
28-10-24 02:47 pm