ಬ್ರೇಕಿಂಗ್ ನ್ಯೂಸ್
15-03-22 11:44 am Bengalore Correspondent ಕರ್ನಾಟಕ
ಬೆಂಗಳೂರು, ಮಾ.15: ರಾಷ್ಟ್ರಮಟ್ಟದಲ್ಲಿ ತೀವ್ರ ವಿವಾದ ಎಬ್ಬಿಸಿದ್ದ ಹಿಜಬ್ ವಿವಾದಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ್ದು ಹಿಜಬ್ ನಿಷೇಧಿಸುವ ರಾಜ್ಯ ಸರಕಾರದ ಆದೇಶವನ್ನು ಎತ್ತಿಹಿಡಿದಿದೆ.
ಉಡುಪಿ ಸರಕಾರಿ ಕಾಲೇಜಿನಲ್ಲಿ ಆರಂಭವಾದ ಹಿಜಬ್ ವಿವಾದ ಬಳಿಕ ಇಡೀ ರಾಜ್ಯಕ್ಕೆ ಹಬ್ಬಿತ್ತು. ವಿವಾದ ನ್ಯಾಯಾಲಯದ ಮೆಟ್ಟಿಲೇರಿದ ಸತತ 13 ದಿನಗಳ ಕಾಲ ವಿಚಾರಣೆ ನಡೆಸಿದ ಹೈಕೋರ್ಟ್ ತ್ರಿಸದಸ್ಯ ಪೀಠ ಇಂದು ತೀರ್ಪು ನೀಡಿದೆ. ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದ ಪೀಠ, ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂಬ ಸಾರ್ವಜನಿಕ ಹಿತಾಸಕ್ತಿ ಆಧರಿತ ಮನವಿಗಳನ್ನು ಹೈಕೋರ್ಟ್ ಸಾರಾಸಗಟಾಗಿ ತಿರಸ್ಕರಿಸಿದೆ.
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಜೈಬುನ್ನೀಸಾ ಮೊಹಿಯುದ್ದೀನ್ ಖಾಜಿ ಅವರನ್ನು ಒಳಗೊಂಡ ವಿಸ್ತೃತ ನ್ಯಾಯಪೀಠ ತೀರ್ಪು ನೀಡಿದೆ. ಹಿಜಾಬ್ ಅಗತ್ಯ ಧಾರ್ಮಿಕ ಆಚರಣೆ ಅಲ್ಲ. ಅಂತೆಯೇ ಕುರಾನ್ ನಲ್ಲಿ ಹಿಜಾಬ್ ಅವಶ್ಯಕ ಆಚರಣೆ ಎಂಬ ಉಲ್ಲೇಖಕ್ಕೆ ಯಾವುದೇ ಆಧಾರವಿಲ್ಲ” ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಅಲ್ಲದೆ, ವಿಧ್ಯಾರ್ಥಿನಿಯರು ಸಲ್ಲಿಸಿದ್ದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದೆ.
ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ, ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡಲು ಅವಕಾಶ ಇಲ್ಲ. ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶವಿಲ್ಲ ಎಂದು ಸರ್ಕಾರದ ಆದೇಶವನ್ನು ಎತ್ತಿಹಿಡಿದು ತ್ರಿಸದಸ್ಯ ಪೀಠ ಐತಿಹಾಸಿಕ ತೀರ್ಪು ನೀಡಿದೆ.
In an important verdict on Tuesday, the Karnataka High Court dismissed various petitions challenging a ban on Hijab in education institutions. The full bench of the HC concluded its hearing in the Hijab case saying that wearing the Hijab is not a part of essential religious practices in Islam.
30-10-24 07:54 pm
Bangalore Correspondent
ರಾಕಿ ಭಾಯ್ ಸಿನಿಮಾ 'ಟಾಕ್ಸಿಕ್'ಗಾಗಿ ನೂರಾರು ಮರಗಳ ಮ...
30-10-24 02:02 pm
Chikkamagaluru accident, Hassan: ಚಿಕ್ಕಮಗಳೂರು...
30-10-24 12:18 pm
Actor Darshan Bail, Released, Murder: ಕೊನೆಗೂ...
30-10-24 11:55 am
ರೈತರ ಜಮೀನಿಗೆ ವಕ್ಫ್ ನೋಟಿಸ್ ; ವಿಜಯಪುರದಲ್ಲಿ ತೀವ್...
29-10-24 11:02 pm
29-10-24 08:23 pm
HK News Desk
ಕಾಞಂಗಾಡ್ ; ತೈಯ್ಯಂ ಉತ್ಸವಕ್ಕೂ ಮುನ್ನ ಪಟಾಕಿ ದುರಂತ...
29-10-24 12:01 pm
ಕೇರಳದ ಯೂಟ್ಯೂಬರ್ ದಂಪತಿ ಸಾವಿಗೆ ಶರಣು ; ಕೊನೆಯ ವಿ...
28-10-24 08:38 pm
ಇಸ್ರೇಲಿಗೆ ನಮ್ಮ ಸಾಮರ್ಥ್ಯ ತೋರಿಸುತ್ತೇವೆ ಎಂದು ಪೋಸ...
28-10-24 05:56 pm
Cyber fraud, Digital arrest, Modi: "ಡಿಜಿಟಲ್ ಅ...
28-10-24 11:47 am
30-10-24 06:32 pm
Mangalore Correspondent
Mangalore Fire, Pilikula: ಪಿಲಿಕುಳ ನಿಸರ್ಗಧಾಮದಲ...
30-10-24 04:28 pm
Mangalore Rajyotsava Award 2024: ಜಿಲ್ಲಾ ರಾಜ್ಯ...
28-10-24 10:51 pm
Leopard, pilar, Deralakatte; ದೇರಳಕಟ್ಟೆ ಪ್ರದೇಶ...
28-10-24 03:53 pm
MLA Harish Poonja, B K Harishprasad: ಪುಡಿ ರಾಜ...
28-10-24 01:00 pm
30-10-24 10:43 pm
HK News Desk
IIFL Securities, share market, Mangalore cybe...
29-10-24 01:01 pm
Mangalore Murder, Crime, Kateel: ಕಟೀಲು ಬಳಿ ಮನ...
29-10-24 12:38 pm
Mangalore Crime, Drugs: ಪಣಂಬೂರಿನಲ್ಲಿ ಡ್ರಗ್ಸ್...
28-10-24 11:12 pm
Bangalore Crime, Blackmail: ಪತ್ನಿ ಮತ್ತು ಆಕೆಯ...
28-10-24 02:47 pm