ಬ್ರೇಕಿಂಗ್ ನ್ಯೂಸ್
26-03-22 10:55 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.26: ರಾತ್ರಿ ಪಾಳಿಯಲ್ಲಿ ಕೆಲಸ ನಿರ್ವಹಿಸಿ ಬಂದು ಬೆಳಗ್ಗೆ ಮತ್ತೆ ಜಿಮ್ ಸೆಂಟರಿನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಯುವತಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಮಲ್ಲೇಶಪಾಳ್ಯದಲ್ಲಿ ನಡೆದಿದೆ.
ಮಂಗಳೂರು ಮೂಲದ ಯುವತಿ ವಿನಯ ಕುಮಾರಿ(30) ಮೃತ ಯುವತಿ. ಈಕೆಯ ಕುಟುಂಬಸ್ಥರು ಮಂಗಳೂರಿನಲ್ಲಿ ವಾಸವಿದ್ದಾರೆ. ಬೆಂಗಳೂರಿನಲ್ಲಿ ಐಡಿಸಿ ಕಂಪನಿಯಲ್ಲಿ ಬ್ಯಾಗ್ರೌಂಡ್ ವೆರಿಫಯರ್ ಆಗಿ ಕೆಲಸ ಮಾಡುತ್ತಿದ್ದು ಒಬ್ಬಂಟಿಯಾಗೇ ವಾಸವಿದ್ದರು. ಶುಕ್ರವಾರ ರಾತ್ರಿ ನೈಟ್ ಶಿಫ್ಟ್ ಮುಗಿಸಿಕೊಂಡು ಬಂದಿದ್ದರು. ಎಂದಿನಂತೆ ಜಿಮ್ ನಲ್ಲಿ ವರ್ಕೌಟ್ ಮಾಡಲು ಹೋಗಿದ್ದು, ಅಲ್ಲಿ ಅಭ್ಯಾಸ ನಿರತವಾಗಿದ್ದಾಗಲೇ ಹಿಂಭಾಗಕ್ಕೆ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಯುವತಿ ಅವಿವಾಹಿತರಾಗಿದ್ದರು.
ಮನೆ ಮಾಲೀಕ ಮಹಿಳೆ ಜಯಮ್ಮ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಎರಡು ವರ್ಷಗಳಿಂದ ನಮ್ಮಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ಯಾವುದೋ ಕಂಪನಿಯಲ್ಲಿ ಕೆಲಸ ಮಾಡ್ತೀನಿ ಎನ್ನುತ್ತಿದ್ದರು. ದಿನವೂ ಬೆಳಗ್ಗೆ ಆರು ಗಂಟೆಗೆ ಜಿಮ್ ಹೋಗಿ ಎಂಟು ಗಂಟೆಗೆ ಬರುತ್ತಿದ್ದರು. ಇವತ್ತು ಕೂಡ ಜಿಮ್ ಹೋಗಿದ್ದರು. ಹೀಗಾಗಿದೆ ಅಂತ ಸುದ್ದಿ ಬಂತು. ವಿಷಯ ತಿಳಿದು ಆಸ್ಪತ್ರೆಗೆ ನೋಡೋಕೆ ಬಂದೀನಿ ಎಂದು ಹೇಳಿದ್ದಾರೆ.
Mangalorean 30 year old woman dies at gym during workout in Bangalore. The deceased has been identified as Vinayakumari.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm