ಬ್ರೇಕಿಂಗ್ ನ್ಯೂಸ್
28-03-22 08:07 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.28 : ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಭೂಕಂಟಕ ಎದುರಾಗಿದೆ. ತಮ್ಮ ಪ್ರಭಾವ ಬಳಸಿಕೊಂಡು ಕಾನೂನು ಬಾಹಿರವಾಗಿ 116 ಎಕ್ರೆ ಸರ್ಕಾರಿ ಜಮೀನನ್ನು ಖಾಸಗಿ ಶಿಕ್ಷಣ ಸಂಸ್ಥೆಗೆ ಮಾರಾಟ ಮಾಡಿರುವ ಆರೋಪ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ಕೇಳಿಬಂದಿದೆ. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಕೆ.ಸಿ. ರಾಜಣ್ಣ ಹಾಗೂ ವಕೀಲರ ತಂಡ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ದೂರು ನೀಡಿದೆ.
ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ದೇವನಹಳ್ಳಿಯ ಹರಳೂರು ಮತ್ತು ಪೂಲನಹಳ್ಳಿಯ ಕೆಐಎಡಿಬಿಗೆ ಸೇರಿದ 116 ಎಕರೆ ಜಮೀನನ್ನ ಯಾವುದೇ ಅರ್ಹತೆ ಹೊಂದಿರದ ಸಿಇಎಸ್ಎಸ್ ಎನ್ನುವ ಹೆಸರಿನ ಖಾಸಗಿ ಶಿಕ್ಷಣ ಸಂಸ್ಥೆಗೆ ಮಂಜೂರು ಮಾಡಿರುವ ಆರೋಪ ಕೇಳಿಬಂದಿದೆ. ಅರ್ಜಿ ಸಲ್ಲಿಸಿದ 30 ದಿನಗಳಲ್ಲಿ ಜಮೀನು ಮಂಜೂರು ಮಾಡಿಕೊಟ್ಟಿದ್ದಾರೆ ಎನ್ನಲಾಗ್ತಿದೆ. 25 ಎಕರೆಗಿಂತ ಹೆಚ್ಚು ಜಮೀನು ಮಂಜೂರು ಮಾಡುವಾಗ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಲ್ಲಿ ಮೊದಲು ಮನವಿ ಸಲ್ಲಿಸಬೇಕು. ಆದರೆ ಈ ನಿಯಮವನ್ನ ಗಾಳಿಗೆ ತೂರಿ ಅಧಿಕಾರ ದುರುಪಯೋಗ ಮಾಡಿಕೊಂಡು ಖಾಸಗಿ ವಿವಿ ಸ್ಥಾಪಿಸಲು ಜಮೀನು ಮಂಜೂರು ಮಾಡಿದ್ದಾರೆ ಎಂದು ದೂರುದಾರರು ಹೇಳಿದ್ದಾರೆ.

ಹಿಂದಿನ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಪ್ರತಿ ಎಕರೆಗೆ 1.61 ಕೋಟಿ ದರ ನಿಗದಿ ಪಡಿಸಿದ್ದರು. ಆದರೆ, 116.16 ಎಕರೆ ಜಾಗವನ್ನ 50 ಕೋಟಿಗೆ ಮಂಜೂರು ಮಾಡಿದ್ದಾರೆ. ನಿಗದಿ ಪಡಿಸಿರುವ ಮಾರ್ಗಸೂಚಿ ದರದಂತೆ 186.76 ಕೋಟಿಗೆ ನೀಡದೆ ಕೇವಲ 50 ಕೋಟಿ ರೂಪಾಯಿಗೆ ಭೂಮಿ ಮಂಜೂರು ಮಾಡಲಾಗಿದೆ. ಸಿಎಂ ಆಗಿದ್ದ ಅವಧಿಯಲ್ಲಿ ಬಿಎಸ್ವೈ ಅವರು ಅಧಿಕಾರ ದುರುಪಯೋಗ ಪಡಿಸಿಕೊಂಡು ಜಮೀನು ಮಂಜೂರು ಮಾಡುವ ಮೂಲಕ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಅಕ್ರಮವಾಗಿ ಸದರಿ ಜಮೀನನ್ನು ಮಂಜೂರು ಮಾಡುವಂತೆ ಸರಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶ ಮಾಡಿದ್ದರು ಎಂಬ ಆರೋಪ ಯಡಿಯೂರಪ್ಪ ಮೇಲಿದೆ. ಮುಖ್ಯ ಕಾರ್ಯದರ್ಶಿ ಸೂಚನೆಯಂತೆ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಭೂಮಿ ಮಂಜೂರಾತಿಗೆ ಆದೇಶ ಮಾಡಿದ್ದರು. ಸರಕಾರದ ಮಾರ್ಗಸೂಚಿಯಂತೆ ನಡೆದುಕೊಳ್ಳದ ಕಾರಣ ಸರಕಾರದ ಬೊಕ್ಕಸಕ್ಕೆ 136 ಕೋಟಿ ನಷ್ಟವಾಗಿತ್ತು. ಇಲ್ಲಿ ಶಿಕ್ಷಣದ ಉದ್ದೇಶ ಬದಿಗಿಟ್ಟು ರಿಯಲ್ ಎಸ್ಟೇಟ್ ವ್ಯಾಪಾರದ ಉದ್ದೇಶಕ್ಕಾಗಿ ಭೂಮಿ ಪಡೆಯಲಾಗಿದೆ ಎಂದು ದೂರುದಾರ ರಾಜಣ್ಣ ದೂರಿದ್ದಾರೆ.
Former chief minister BS Yeddyurappa is back in a quake. Former CM BS Yeddyurappa has been accused of illegally selling state land using his influence. This relationship is related to social worker K.C. Rajanna and his team of lawyers have lodged a complaint with the Corruption Prevention Squad (ACB).
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm