ಹಲಾಲ್ ದಂಗಲ್ ; ಬಜರಂಗದಳದವ್ರು ಸಮಾಜಘಾತುಕರು, ಇವ್ರಿಗೆ ರೈತರ ಬದುಕು ಗೊತ್ತಿದ್ಯಾ..?  ಬೊಮ್ಮಾಯಿಗೆ ಗಂಡಸ್ತನ ಇದ್ದರೆ ಕ್ರಮ ಕೈಗೊಳ್ಳಿ ! 

31-03-22 09:38 pm       HK Desk news   ಕರ್ನಾಟಕ

ಹಿಂದು ಸಂಘಟನೆಗಳು ಹಲಾಲ್ ಬ್ಯಾನ್ ಅಭಿಯಾನ ಆರಂಭಿಸಿರುವುದಕ್ಕೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ವಿಶ್ವ ಹಿಂದು ಪರಿಷತ್, ಬಜರಂಗದಳದವರು ಕಿಡಿಗೇಡಿಗಳು, ಸಮಾಜಘಾತುಕರು. ಅವರಿಗೆ ರೈತರ ಬದುಕು ಗೊತ್ತಿದೆಯಾ..

ರಾಮನಗರ, ಮಾ.31: ಹಿಂದು ಸಂಘಟನೆಗಳು ಹಲಾಲ್ ಬ್ಯಾನ್ ಅಭಿಯಾನ ಆರಂಭಿಸಿರುವುದಕ್ಕೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ವಿಶ್ವ ಹಿಂದು ಪರಿಷತ್, ಬಜರಂಗದಳದವರು ಕಿಡಿಗೇಡಿಗಳು, ಸಮಾಜಘಾತುಕರು. ಅವರಿಗೆ ರೈತರ ಬದುಕು ಗೊತ್ತಿದೆಯಾ.. ನಮ್ಮ ರೈತರು ಕಟ್ ಮಾಡುವ ಮಾಂಸ ಕ್ಲೀನ್ ಮಾಡಲು ಅದೇ ಸಮಾಜದವರೇ ಬರಬೇಕು ಎಂದು ತಿರುಗೇಟು ನೀಡಿದ್ದಾರೆ. 

ಈಗ ಹಲಾಲ್ - ಜಟ್ಕಾ ಕಟ್ ಅಂತಿದ್ದೀರಲ್ಲ ನೀವು. ನಿಮ್ಮ ಜಟ್ಕಾ ಮಾಡೋಕು, ಇನ್ನೊಂದು ಮಾಡೋಕು ಅವರೇ ಬೇಕು.‌ ರೇಷ್ಮೆ, ಮಾವು ಬೆಳೆ ಮಾರಾಟಕ್ಕೆ ಈ ಪೋಲಿಗಳು ಬರ್ತಾವಾ.. ಅಕಾಲಿಕ ಮಳೆಯಿಂದಾಗಿ ಮಾವು ನಷ್ಟವಾಗಿದೆ. ಅದನ್ನ ಖರೀದಿ ಮಾಡಲು ಆ ಸಮಾಜದವರೇ ಬರಬೇಕು. ಇವ ಯಾವ್ಯೋ ವಿಶ್ವ ಹಿಂದೂ ಪರಿಷತ್ ನವರು ಭಜರಂಗದಳದವರು. ಇವರ ಹೊಟ್ಟೆಪಾಡಿಗೆ, ದೇಶ ಹಾಳು ಮಾಡೋಕೆ ಇಂತಹ ವಿಚಾರ ಇಟ್ಟುಕೊಂಡು ಬಂದಿದ್ದಾರೆ‌. ಇದಕ್ಕೆಲ್ಲ ನಾನು ಕೇರ್ ಮಾಡುವುದಿಲ್ಲ.‌ ಇಷ್ಟು ವರ್ಷ ಹಲಾಲ್ ತಿಂದಿದ್ದೇವೆ, ಏನಾಗಿದೆ ಚೆನ್ನಾಗಿದ್ದೀವಲ್ಲಾ.. 

ಈಗ ಹಲಾಲ್ ತಿಂದರೆ ತೊಂದರೆ ಆಯ್ತದ, ನಮ್ಮ ದೇವರು ಮೆಚ್ಚಲ್ವಾ.. ನಮ್ಮ ಹಿಂದೂ ದೇವರು ಕನಸಲ್ಲಿ ಬಂದು ಹೇಳಲಿಲ್ಲವಲ್ಲ, ಹಲಾಲ್ ತಿಂದಾಗ. ಹಲವಾರು ವರ್ಷಗಳಿಂದ ಹಲಾಲ್ ನಡೆಯುತ್ತಿದೆ, ಈಗಿನದ್ದಲ್ಲ. ಆಸ್ಪತ್ರೆಯಲ್ಲಿ ಆಕ್ಸಿಜನ್ ಇಲ್ಲದೇ ಜನ ಸತ್ತರೂ, ಬಿಜೆಪಿ ಸರ್ಕಾರದ ಯೋಗ್ಯತೆಗೆ ಆಸ್ಪತ್ರೆ ನಿರ್ವಹಣೆ ಮಾಡಲು ಅಗಲಿಲ್ಲ. ಆಗ ಎಲ್ಲಿದ್ದರು ಈ ವಿಶ್ವ ಹಿಂದೂ ಪರಿಷತ್,  ಬಜರಂಗದಳದವರು ಎಂದು ಎಚ್ಡಿಕೆ ಪ್ರಶ್ನೆ ಮಾಡಿದ್ದಾರೆ. ‌

Not Bhagavad Gita, students need to be taught Constitution, writers urge  Karnataka CM Bommai in open letter | Cities News,The Indian Express

ಸಿಎಂ ಬೊಮ್ಮಾಯಿಗೆ ಗಂಡಸ್ತನ ಇದ್ದರೆ ಕ್ರಮ ಕೈಗೊಳ್ಳಿ!  

ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ, ಸಿಎಂ ಬೊಮ್ಮಾಯಿಗೆ ಗಂಡಸ್ತನ ಇದ್ದರೆ ಏನೂ ಗೊತ್ತಿಲ್ಲದಂತೆ ಮೌನವಾಗಿರಬಾರದು, ಇವರು ಮೌನ ಆಗಿರುವುದರ ಅರ್ಥ ಏನು ? ಸಮಾಜ ಒಡೆಯುವ ಶಕ್ತಿಗಳು ಹ್ಯಾಂಡ್ ಬಿಲ್ ಹಂಚುತ್ತಿದ್ದಾರೆ. ಯಾವ ಸಂವಿಧಾನಕ್ಕೆ ಗೌರವಿಸುತ್ತಿದ್ದೀರಿ, ಯಾಕೆ ಅಂಬೇಡ್ಕರ್ ಜಯಂತಿ ಆಚರಿಸುತ್ತೀರಿ.. ನನಗೆ ಓಟ್ ಮುಖ್ಯವಲ್ಲ, ಈ ನಾಡು ಶಾಂತಿಯಿಂದ ಬದುಕಬೇಕು. ನಾನು ಮೌನವಾಗಿರಲು ಸಾಧ್ಯವಿಲ್ಲ. 

ಕಾಂಗ್ರೆಸ್ ನವರಿಗೆ ಮಾತನಾಡಲು ತಾಕತ್ತಿಲ್ಲ. ಹಿಂದೂಗಳು ಓಟ್ ಹಾಕ್ತಾರೋ ಇಲ್ಲವೋ ಎಂಬ ಭಯ. ಉತ್ತರ ಪ್ರದೇಶದಲ್ಲಿ ನಿಮ್ಮ ಆಟ ಆಡಿಕೊಳ್ಳಿ, ಇಲ್ಲಿ ಬೇಡ ಎಂದು ಬಿಜೆಪಿ ಮತ್ತು ಹಿಂದು ಸಂಘಟನೆಗಳ ವಿರುದ್ಧ ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಕೆಂಡಾಮಂಡಲರಾಗಿ ವಾಗ್ದಾಳಿ ನಡೆಸಿದ್ದಾರೆ. ‌

Bajarang dal is a anti social organisation do they know the pain of farmes, slam farmers. If CM Bommai is a real man then let him ban this organisation they slammed.