ಬ್ರೇಕಿಂಗ್ ನ್ಯೂಸ್
08-04-22 02:40 pm HK Desk news ಕರ್ನಾಟಕ
ಶಿವಮೊಗ್ಗ, ಎ.8: ರಾಜ್ಯದ ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಹರ್ಷ ಕೊಲೆ ಪ್ರಕರಣದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ನಿರ್ದೇಶನದಂತೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಶಿವಮೊಗ್ಗ ನಿವಾಸಿ ರಿಯಾಜ್ ಅಹ್ಮದ್ ದೂರಿನಂತೆ ಪ್ರಕರಣ ದಾಖಲಾಗಿದೆ. ಹರ್ಷ ಕೊಲೆ ಪ್ರಕರಣ ಸಂಬಂಧಿಸಿ ಸಚಿವ ಈಶ್ವರಪ್ಪ ಮುಸ್ಲಿಂ ಗೂಂಡಾಗಳು ಕೊಲೆ ಮಾಡಿದ್ದಾರೆಂದು ಹೇಳಿ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಳ್ಳಲು ಕಾರಣವಾಗಿದ್ದರು. ಈ ಹೇಳಿಕೆ ಸಂಬಂಧಿಸಿ ರಿಯಾಜ್ ಅಹ್ಮದ್ ದೊಡ್ಡಪೇಟೆ ಪೊಲೀಸ್ ಠಾಣೆಗೆ ದೂರು ನೀಡಿ ತನಿಖೆ ನಡೆಸಲು ಕೋರಿದ್ದರು. ಆದರೆ ಪೊಲೀಸರು ಎಫ್ಐಆರ್ ದಾಖಲಿಸಲು ನಿರಾಕರಿಸಿದ್ದರಿಂದ ರಿಯಾಜ್ ಅಹ್ಮದ್, ಹೈಕೋರ್ಟ್ ಮೊರೆ ಹೋಗಿದ್ದರು.

ಸಚಿವ ಸ್ಥಾನದಲ್ಲಿದ್ದು ಒಂದು ಸಮುದಾಯವನ್ನು ಗುರಿಯಾಗಿರಿಸಿ ಹೇಳಿಕೆ ನೀಡಿದ್ದರು. ಅಲ್ಲದೆ, ಈಶ್ವರಪ್ಪ ಹೇಳಿಕೆಯಿಂದಾಗಿ ಕೋಮು ಗಲಭೆ ನಡೆಯಲು ಕಾರಣವಾಗಿತ್ತು ಎಂದು ರಿಯಾಜ್ ಹೈಕೋರ್ಟ್ ನಲ್ಲಿ ವಾದಿಸಿದ್ದರು. ಇದರಂತೆ, ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಕೇಳಿಕೊಂಡಿದ್ದರು. ಕೋರ್ಟ್ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಪೊಲೀಸರಿಗೆ ಆದೇಶ ಮಾಡಿತ್ತು. ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾಗಿರುವ ಈಶ್ವರಪ್ಪ ತನ್ನದೇ ಮತಕ್ಷೇತ್ರದ ಜನರ ಮೇಲೆ ಆರೋಪ ಹೊರಿಸಿದ್ದು ಬಹಳಷ್ಟು ವಿರೋಧಕ್ಕೂ ಕಾರಣವಾಗಿತ್ತು.
ತನಿಖೆ ನಡೆಯೋ ಮೊದಲೇ ಮುಸಲ್ಮಾನ್ ಗೂಂಡಾಗಳು ಹರ್ಷನನ್ನು ಕೊಲೆ ಮಾಡಿದ್ದಾರೆಂದು ಈಶ್ವರಪ್ಪ ಹೇಳಿಕೆ ನೀಡಿದ್ದರು. ಆನಂತರ ಶವ ಮೆರವಣಿಗೆ ನಡೆಯುವ ಸಂದರ್ಭದಲ್ಲಿ ಬಹಳಷ್ಟು ಕಡೆ ಕಲ್ಲು ತೂರಾಟ ನಡೆದು ಕೋಮು ಉದ್ವಿಗ್ನ ಸ್ಥಿತಿ ಉಂಟಾಗಿತ್ತು. ಕೊಲೆ ಪ್ರಕರಣ ಸಂಬಂಧ ಪೊಲೀಸರು ಹತ್ತು ಮಂದಿಯನ್ನು ಬಂಧಿಸಿದ್ದು ಜೈಲಿಗೆ ತಳ್ಳಿದ್ದಾರೆ. ಘಟನೆ ಸಂಬಂಧಿಸಿ ಈಗ ಎನ್ಐಎ ತನಿಖೆ ನಡೆಯುತ್ತಿದ್ದು, ಇದೀಗ ಕೋಮು ಪ್ರಚೋದನೆ ಹಿನ್ನೆಲೆಯಲ್ಲಿ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದ್ದರಿಂದ ಎನ್ಐಎ ತನಿಖೆ ಇವರ ವಿರುದ್ಧವೂ ವಿಸ್ತರಣೆಯಾದರೆ ಅಚ್ಚರಿಯಿಲ್ಲ.
The Karnataka Police have lodged an FIR against state Minister for Rural Development and Panchayat Raj K.S. Eshwarappa for issuing provoking statements in connection with Bajrang Dal activist Harsha murder case in Shivamogga district, police said on Friday.The Doddapete police have lodged a complaint and taken up the investigation as per the direction of the High Court in this regard. The FIR has also been lodged against Shivamogga BJP corporator Channabasappa.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm