ಬ್ರೇಕಿಂಗ್ ನ್ಯೂಸ್
09-04-22 01:30 pm Bengaluru Correspondent ಕರ್ನಾಟಕ
ಬೆಂಗಳೂರು, ಎ.9: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಸೇರಿ ರಾಜಕಾರಣಿಗಳು, ಸಾಹಿತಿಗಳು ಸೇರಿದಂತೆ 61 ಮಂದಿಯನ್ನು ಕೊಲ್ಲುವುದಾಗಿ ಹೇಳಿ ಅನಾಮಧೇಯ ಪತ್ರವೊಂದನ್ನು ಹಿರಿಯ ಸಾಹಿತಿ ಕುಂ. ವೀರಭದ್ರಪ್ಪ ಅವರ ಮನೆಗೆ ಪೋಸ್ಟ್ ಮಾಡಲಾಗಿದೆ.
ಕೈಬರಹದಲ್ಲಿ ಬರೆದಿರುವ ಎರಡು ಪುಟಗಳ ಪತ್ರ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕೊಟ್ಟೂರಿನಲ್ಲಿರುವ ಸಾಹಿತಿ ವೀರಭದ್ರಪ್ಪ ಅವರ ಮನೆಗೆ ಎ.6ರಂದು ಪತ್ರ ಬಂದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಿಂದ ಪತ್ರ ಪೋಸ್ಟ್ ಮಾಡಲಾಗಿದೆ. ಪತ್ರ ಬರೆದವರ ಬಗ್ಗೆ ವಿವರ ಇಲ್ಲ. ಸಹಿಷ್ಣು ಹಿಂದು ಎಂದಷ್ಟೇ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಕುಂ. ವೀರಭದ್ರಪ್ಪ, ಸಿದ್ದರಾಮಯ್ಯ, ಕುಮಾರಸ್ವಾಮಿ ಹಾಗೂ 61 ಜನ ಎಡಬಿಡಂಗಿ ಬುದ್ಧಿಜೀವಿ ಸಾಹಿತಿಗಳೇ, ಹಿಜಾಬ್, ಮುಸ್ಲಿಮರ ಪರವಾಗಿ, ಭಗವದ್ಗೀತೆ ವಿರುದ್ಧವಾಗಿ ಸರಕಾರಕ್ಕೆ ಪತ್ರ ಬರೆದಿದ್ದೀರಿ. ನೀವು ನಮ್ಮ ದೇಶದ ಅನ್ನ ಉಂಡು, ದೇಶದ ಗಾಳಿ ತೆಗೆದುಕೊಂಡು ದೇಶಕ್ಕೆ ದ್ರೋಹ ಮಾಡುತ್ತಿದ್ದೀರಿ. ನಿಮ್ಮ ಸರ್ವನಾಶ ಖಚಿತ. ನಿಮ್ಮೆಲ್ಲರ ಸಾವು ಹತ್ತಿರವಿದೆ. ಅದು ಯಾವ ರೂಪದಲ್ಲಾದರೂ ಬರಬಹುದು, ಅದಕ್ಕೆ ಸಿದ್ಧರಾಗಿ. ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಿ ಎಂದು ಪತ್ರದಲ್ಲಿ ಬೆದರಿಕೆ ಒಡ್ಡಲಾಗಿದೆ.

ಮೊದಲಿನಿಂದಲೂ ನನಗೆ ಬೆದರಿಕೆ ಪತ್ರಗಳು ಬರುತ್ತಿದ್ದವು. ಈಗ ನನ್ನ ಸೇರಿದಂತೆ 61 ಜನರನ್ನು ಉಲ್ಲೇಖಿಸಿ ಪತ್ರ ಬರೆಯಲಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ್ದು ಜಿಲ್ಲಾ ಪೊಲೀಸ್ ವರಿಷ್ಠರಿಗೆ ದೂರು ನೀಡುತ್ತೇನೆ ಎಂದು ಸಾಹಿತಿ ಕುಂ. ವೀರಭದ್ರಪ್ಪ ತಿಳಿಸಿದ್ದಾರೆ.
Former CMs (Ex-CM) A total of 61 people have received a life threatening letter, including HD Kumaraswamy and Siddaramaiah. Sahitya Kum in Bellary Kottur. This life threatening letter has been sent to Veerabhadrappa's residence. In the letter, the names of 61 people, including the names of HDK and Siddaramaiah, along with fighters, fighters in the Hijab Controversy are mentioned. “ Your destruction is certain. The death of you all is near. It can come in any form. Get ready for it, prepare for the funeral, ”the letter threatened. Where did the life threatening letter come from?
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am