ಬ್ರೇಕಿಂಗ್ ನ್ಯೂಸ್
09-04-22 09:21 pm HK Desk news ಕರ್ನಾಟಕ
ತುಮಕೂರು, ಎ.9: ಮುಸ್ಲಿಮರ ವಿರುದ್ಧ ಹಿಂದು ಸಂಘಟನೆ ಕಾರ್ಯಕರ್ತರ ಅಭಿಯಾನದಿಂದ ಬೇಸತ್ತ ತುಮಕೂರಿನಲ್ಲಿ ಸಾಮಾಜಿಕ ಕಾರ್ಯಕರ್ತನಾಗಿರುವ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ. ಸಾಮಾಜಿಕ ಕಾರ್ಯಕರ್ತ ಸಾದಿಕ್ ಪಾಷಾ ಎಂಬ ವ್ಯಕ್ತಿ ತನ್ನ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಶಾಂತಿ ವಾತಾವರಣಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಏಪ್ರಿಲ್ 11 ರಂದು ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ತುಮಕೂರಿನ ಎಸ್ಪಿ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ನನ್ನ ಸಾವಿಗೆ ಬಿಜೆಪಿ ಸರ್ಕಾರವೇ ನೇರಹೊಣೆ ಎಂದು ಟ್ವೀಟ್ ಮಾಡಿದ್ದು, ಸಿಎಂ ಬಸವರಾಜ ಬೊಮ್ಮಾಯಿ, ಹೆಚ್.ಡಿ. ಕುಮಾರಸ್ವಾಮಿ, ಸಿದ್ದರಾಮಯ್ಯ, ಡಿಜಿ & ಐಜಿಪಿ, ಎಸ್ಪಿಗೆ ಟ್ಯಾಗ್ ಮಾಡಿ ಸಾದಿಕ್ ಪಾಷಾ ಟ್ವೀಟ್ ಮಾಡಿದ್ದಾರೆ.

ನಾನು ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಧೈರ್ಯವಂತನಲ್ಲ. ಆದರೆ ಇದಕ್ಕೆ ಕಾರಣ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವುದು. ಸೂಕ್ತ ಕ್ರಮ ಕೈಗೊಳ್ಳದೆ ಅಧಿಕಾರಕ್ಕಾಗಿ ಮೌನದಲ್ಲಿರುವ ಮಾನ್ಯ ಬಸವರಾಜ ಬೊಮ್ಮಾಯಿ ಮತ್ತು ಆರಗ ಜ್ಞಾನೇಂದ್ರ ತಾವು ಗೃಹ ಸಚಿವರು ಎಂಬ ಪರಿಜ್ಞಾನವಿಲ್ಲದೆ ಅವೈಜ್ಞಾನಿಕ ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ಬೇಸತ್ತು ಈ ನಿರ್ಧಾರ ಮಾಡಿದ್ದೇನೆ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
Tumkuru Muslim Social worker threatens CM Bommai of suicide due to Hindu outfits campaign against Muslims. He has tweeted this directly to CM Bommai.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm