ಬ್ರೇಕಿಂಗ್ ನ್ಯೂಸ್
10-04-22 05:28 pm Bengaluru Correspondent ಕರ್ನಾಟಕ
ಬೆಂಗಳೂರು, ಎ.10: ಕರ್ನಾಟಕದ ಬಿಟ್ ಕಾಯಿನ್ ಹಗರಣದಲ್ಲಿ ಅಮೆರಿಕದ ತನಿಖಾ ಸಂಸ್ಥೆ ಎಫ್ ಬಿಐ ಅಧಿಕಾರಿಗಳು ಬೆಂಗಳೂರಿಗೆ ಬಂದು ತನಿಖೆ ನಡೆಸಿದ್ದಾರೆ ಎಂಬ ವದಂತಿಯನ್ನು ಸಿಬಿಐ ಅಧಿಕಾರಿಗಳು ಅಲ್ಲಗಳೆದಿದ್ದಾರೆ. ಅಂತಹ ಯಾವುದೇ ಸಂಸ್ಥೆ ತನಿಖೆಗೆ ಭಾರತಕ್ಕೆ ಬಂದಿಲ್ಲ ಎಂದು ಸಿಬಿಐ ಹೇಳಿಕೆಯೊಂದರಲ್ಲಿ ತಿಳಿಸಿದೆ.
ಕರ್ನಾಟಕದ ರಾಜಕಾರಣಿಗಳು ಮತ್ತು ಪೊಲೀಸ್ ಹಿರಿಯ ಅಧಿಕಾರಿಗಳು ಶಾಮೀಲಾಗಿದ್ದಾರೆ ಎನ್ನಲಾಗಿರುವ ಬಿಟ್ ಕಾಯಿನ್ ಹಗರಣದ ಬಗ್ಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್ ಬಿಐ) ತಂಡದ ಅಧಿಕಾರಿಗಳು ಬೆಂಗಳೂರಿಗೆ ಬಂದು ತನಿಖೆ ನಡೆಸಿದ್ದಾರೆ ಎಂಬುದಾಗಿ ವದಂತಿಗಳಿದ್ದವು. ಕರ್ನಾಟಕದ ಪೊಲೀಸರು ಮತ್ತು ಸಿಬಿಐ ಅಧಿಕಾರಿಗಳ ಜೊತೆಗೂ ಸಂಪರ್ಕದಲ್ಲಿದ್ದಾರೆ ಎನ್ನಲಾಗಿತ್ತು.

ಆದರೆ ಈ ಎಲ್ಲ ವದಂತಿಗಳನ್ನು ಸಿಬಿಐ ಅಧಿಕಾರಿಗಳು ನಿರಾಕರಿಸಿದ್ದಾರೆ. ಎಫ್ ಬಿಐ ಸಂಸ್ಥೆಯಿಂದ ಯಾವುದೇ ತಂಡ ಭಾರತಕ್ಕೆ ಆಗಮಿಸಿಲ್ಲ. ಅಲ್ಲದೆ, ಭಾರತಕ್ಕೆ ತನಿಖೆಗೆ ಬರುವ ಬಗ್ಗೆ ಬೇಡಿಕೆಯನ್ನೂ ಸಲ್ಲಿಸಿಲ್ಲ ಎಂದು ಸಿಬಿಐ ಹೇಳಿಕೆ ನೀಡಿದೆ. ಸಿಬಿಐ ತನಿಖಾ ತಂಡವು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುವ ಗಂಭೀರ ಪ್ರಕರಣಗಳನ್ನು ತನಿಖೆ ನಡೆಸುತ್ತಿದ್ದು ಇಂಟರ್ ಪೋಲ್ ವ್ಯವಸ್ಥೆಯನ್ನೂ ನೋಡಿಕೊಳ್ಳುತ್ತಿದೆ. ಹೀಗಾಗಿ ವಿದೇಶಿ ತನಿಖಾ ತಂಡವು ಭಾರತಕ್ಕೆ ಆಗಮಿಸಿದಲ್ಲಿ ಸಿಬಿಐಗೆ ತಿಳಿಯುತ್ತದೆ.

2020ರಲ್ಲಿ ಬಿಟ್ ಕಾಯಿನ್ ಹಗರಣ ಬೆಳಕಿಗೆ ಬಂದಿದ್ದು, ಅದೇ ವರ್ಷದ ನವೆಂಬರ್ ತಿಂಗಳಲ್ಲಿ ಪ್ರಮುಖ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು. ಆನಂತರ ಕರ್ನಾಟಕದ ರಾಜಕಾರಣಿಗಳು ಮತ್ತು ಪೊಲೀಸ್ ಅಧಿಕಾರಿಗಳು ಶ್ರೀಕಿಯಿಂದ ಕಿಕ್ ಬ್ಯಾಕ್ ಪಡೆದು ಆತನನ್ನು ಬಚಾವ್ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಶ್ರೀಕಿ ಅಮೆರಿಕದ ಬ್ಯಾಂಕಿಗೆ ಸಂಬಂಧಪಟ್ಟ ಬಿಟ್ ಕಾಯಿನ್ ಎಕ್ಸ್ ಚೇಂಜ್ ಒಂದನ್ನು ಹ್ಯಾಕ್ ಮಾಡಿದ್ದು ಸಾವಿರಾರು ಬಿಟ್ ಕಾಯಿನ್ ಗಳನ್ನು ಕದ್ದಿದ್ದು ಆನಂತರ ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ. ಈ ಬಗ್ಗೆ ಅಮೆರಿಕದಲ್ಲಿ ತನಿಖೆ ನಡೆದಿದ್ದು ಇಸ್ರೇಲ್ ಮೂಲದ ಇಬ್ಬರನ್ನು ಬಂಧಿಸಿದ್ದರು. ಶ್ರೀಕಿ ವಿರುದ್ಧವೂ ಅಲ್ಲಿ ಆರೋಪಗಳಿದ್ದು, ವಶಕ್ಕೆ ಪಡೆಯಲು ಎಫ್ ಬಿಐ ಅಧಿಕಾರಿಗಳು ಮುಂದಾಗಿದ್ದಾರೆ ಎನ್ನಲಾಗಿತ್ತು.
Denying media reports that a Federal Bureau of Investigation (FBI) team has come to India to investigate a Bitcoin case of Karnataka police, the Central Bureau of Investigation (CBI) clarified on Sunday that the American agency has not sent any team to India for conducting a probe into the matter nor has any request been made by the FBI to the CBI for carrying out investigation in the case in India."Accordingly, the question of according any permission for the probe by competent authority in India does not arise. CBI as the National Central Bureau for INTERPOL in India coordinates closely with international law enforcement agencies including FBI," CBI said in a statement.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am