ಬ್ರೇಕಿಂಗ್ ನ್ಯೂಸ್
11-04-22 02:17 pm HK Desk news ಕರ್ನಾಟಕ
ಬೆಳಗಾವಿ, ಎ.11: ಹಿಂದು ಸಂಘಟನೆಗಳು ರಾಜ್ಯದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹಾಕುತ್ತಿರುವ ವಿಚಾರದ ಬಗ್ಗೆ ಸಚಿವ ಜೆ.ಸಿ. ಮಾಧುಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ. ಎಲ್ಲರಿಗೂ ವ್ಯಾಪಾರ ಮಾಡುವ ಹಕ್ಕು ಇದೆ. ಅದನ್ನ ನಾವು ಕಿತ್ತುಕೊಳ್ಳೋಕೆ ಆಗಲ್ಲ ಎಂದು ಮಾಧುಸ್ವಾಮಿ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಡನಿ ಗ್ರಾಮದಲ್ಲಿ ಸಚಿವ ಜೆ.ಸಿ. ಮಾಧುಸ್ವಾಮಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು ಹಿಂದು ಪರ ಸಂಘಟನೆಗಳು ಯಾಕೆ ಈ ರೀತಿ ಮಾಡುತ್ತಿವೆಯೋ ಗೊತ್ತಿಲ್ಲ. ಸಂಘಟನೆಗಳ ವರ್ತನೆ ಮಿತಿ ಮೀರಿದರೆ ಅವರ ಮೇಲೆ ಸರಕಾರ ಕ್ರಮ ಕೈಗೊಳ್ಳುತ್ತೆ. ಈ ದೇಶ ಎಲ್ಲರಿಗೂ ಸೇರಿದ್ದು,
ಸ್ವಾತಂತ್ರ್ಯದ ಹೊತ್ತಿನಲ್ಲಿ ಯಾರೆಲ್ಲ ಭಾರತದಲ್ಲಿ ಉಳಿದಿದ್ದಾರೋ ಎಲ್ಲರೂ ಭಾರತೀಯರೇ. ಈಗ ವಿವಾದ ಸೃಷ್ಟಿ ಮಾಡುವುದರಲ್ಲಿ ಅರ್ಥವಿಲ್ಲ. ಇಂತಹದಕ್ಕೆಲ್ಲ ಸರಕಾರ ಹೆಚ್ಚು ಮಹತ್ವ ಕೊಡಲ್ಲ ಎಂದಿದ್ದಾರೆ.
ರಾಜ್ಯದಲ್ಲಿ ಕಾನೂನು ಪಾಲನೆ ಆಗುತ್ತಿಲ್ಲ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು ಉಡುಪಿ ಕಾಲೇಜಿನಲ್ಲಿ ಹಿಜಾಬ್ ಗಲಾಟೆನೇ ಇರಲಿಲ್ಲ. ಆರು ಹೆಣ್ಣು ಮಕ್ಕಳಿಂದ ಶುರುವಾದ ಗಲಾಟೆ ಒಂದೊಂದು ದಿಕ್ಕಿನಲ್ಲಿ ಸಾಗುತ್ತಿದೆ. ಇದನ್ನ ಹತೋಟಿಗೆ ತರಲು ಪ್ರಯತ್ನ ಮಾಡುತ್ತೇವೆ.
ಎಲ್ಲೆಲ್ಲೋ ಆಗುವ ಘಟನೆಗಳಿಗೆ ಸರಕಾರ ದಿಢೀರ್ ಸ್ಪಂದನೆ ಮಾಡಲು ಆಗೊದಿಲ್ಲ. ಗಮನಕ್ಕೆ ಬಂದ ಮೇಲೆ ಒಂದೊಂದೇ ಸಮಸ್ಯೆಯನ್ನು ಖಂಡಿತ ಬಗೆ ಹರಿಸುತ್ತೇವೆ ಎಂದು ಹೇಳಿದ್ದಾರೆ.
Everyone has the right to do business. we can't take it away," madhuswamy said. This country belongs to all and all those who remained in india at the time of independence are indians.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 01:58 pm
HK News Desk
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm