ಬ್ರೇಕಿಂಗ್ ನ್ಯೂಸ್
24-09-20 11:51 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟಂಬರ್ 24: 'ಕರ್ನಾಟಕದಲ್ಲಿ ಖಾಸಗಿ ಕ್ಷೇತ್ರದಲ್ಲಿ ಸೃಷ್ಟಿಯಾಗುವ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಖಾತರಿಪಡಿಸಲು ಆಂಧ್ರಪ್ರದೇಶದ ಮಾದರಿಯಲ್ಲಿ ಜಿಲ್ಲಾಮಟ್ಟದ ಮೇಲುಸ್ತುವಾರಿ ಸಮಿತಿಗಳನ್ನು ಅಸ್ತಿತ್ವಕ್ಕೆ ತರಲಾಗುವುದು' ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.
ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ವಯ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸಲು ಸಿದ್ಧಪಡಿಸಿರುವ ಮಸೂದೆಯನ್ನು ಸದನದಲ್ಲಿ ಮಂಡಿಸುವಂತೆ ವಿಧಾನ ಪರಿಷತ್‌ನಲ್ಲಿ ಬುಧವಾರ ಜೆಡಿಎಸ್ ನಾಯಕ ಬಸವರಾಜ ಹೊರಟ್ಟಿ ಅವರು ನಿಯಮ 330ರಡಿ ಪ್ರಸ್ತಾಪಿಸಿದ ವಿಷಯದ ಮೇಲೆ ನಡೆದ ಚರ್ಚೆಗೆ ಉತ್ತರಿಸಿದ ಸಚಿವರು, ಈ ಭರವಸೆ ನೀಡಿದರು.
ಉದ್ಯಮ ಸ್ಥಾಪನೆಗೆ ಕನ್ನಡದ ನೆಲ, ಜಲವನ್ನು ಬಳಸಿಕೊಳ್ಳುವ ಕಂಪನಿಗಳು ಸ್ಥಳೀಯರಿಗೆ ಉದ್ಯೋಗ ನೀಡುವುದಿಲ್ಲ.
ಕೆಳಹಂತದ ಕೆಲವು ಉದ್ಯೋಗಗಳನ್ನು ನೀಡಿ ವಂಚಿಸುತ್ತವೆ. ಸರ್ಕಾರದ ಸೌಲಭ್ಯ ಪಡೆದ ಉದ್ದಿಮೆಗಳಷ್ಟೇ ಅಲ್ಲ, ಸೌಲಭ್ಯ ಪಡೆಯದ ಉದ್ದಿಮೆಗಳೂ ಸ್ಥಳೀಯರಿಗೆ ಉದ್ಯೋಗ ನೀಡುವುದನ್ನು ಕಡ್ಡಾಯಗೊಳಿಸಲಾಗುವುದು. ಇದಕ್ಕಾಗಿ ಆಂಧ್ರಪ್ರದೇಶ ಮಾದರಿ ಅನುಷ್ಠಾನ ಮಾಡಲಾಗುವುದು' ಎಂದರು.
ವಿಷಯ ಪ್ರಸ್ತಾಪಿಸಿದ ಹೊರಟ್ಟಿ, 'ನೆರೆಯ ಆಂಧ್ರ, ತಮಿಳುನಾಡು, ಮಹಾರಾಷ್ಟ್ರದಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ ಮೀಸಲಾತಿ ಲಭಿಸಿದೆ. ಪರಿಣಾಮವಾಗಿ ರಾಜ್ಯದಲ್ಲಿ ಪರ ಭಾಷಿಕರ ಸಂಖ್ಯೆ ಹೆಚ್ಚುತ್ತಿದೆ. ಬೆಂಗಳೂರನ್ನು ಪರಭಾಷಿಕ ಶಾಸಕರೇ ಆಳುವ ದಿನಗಳು ಬಂದರೂ ಅಚ್ಚರಿ ಇಲ್ಲ. ಕನ್ನಡಿಗರಿಗೆ ಮೀಸಲಾತಿ ಖಾತರಿಪಡಿಸುವ ಮೂಲಕ ನ್ಯಾಯ ಒದಗಿಸಬೇಕು' ಎಂದರು.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 02:54 pm
HK News Staffer
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm