ಬ್ರೇಕಿಂಗ್ ನ್ಯೂಸ್
16-04-22 03:08 pm Bengaluru Correspondent ಕರ್ನಾಟಕ
ಬೆಂಗಳೂರು, ಎ.16 : ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಎರಡು ದಿನಗಳ ರಾಜ್ಯ ಬಿಜೆಪಿ ಕಾರ್ಯಕಾರಿಣಿ ನಡೆಯಲಿದ್ದು ಪ್ರಮುಖವಾಗಿ ಈಶ್ವರಪ್ಪ ಪ್ರಕರಣ ಮತ್ತು ಪರ್ಸೆಂಟೇಜ್ ವಿಚಾರವೇ ಚರ್ಚೆಗೆ ಬರುವ ಸಾಧ್ಯತೆಯಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದು, 40 ಪರ್ಸೆಂಟ್ ಆರೋಪಕ್ಕೆ ಕೆ.ಎಸ್.ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅದರಿಂದಾಗಿ ಪಕ್ಷಕ್ಕೆ ರಾಜ್ಯದಲ್ಲಿ ಹಿನ್ನಡೆ ಆಗಿರುವುದು ಎಲ್ಲರ ಗಮನ ಸೆಳೆದಿದೆ.
ಗುತ್ತಿಗೆದಾರ ಸಂತೋಷ್ ಸಾಯುವ ಮುನ್ನ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಆರೋಪ ಮಾಡಿದ್ದಲ್ಲದೆ, ಡೆತ್ ನೋಟ್ ನಲ್ಲಿ ಈಶ್ವರಪ್ಪ ಮತ್ತು ಅವರ ಪಿಎ ಹೆಸರು ಉಲ್ಲೇಖ ಆಗಿರುವುದು, ಪ್ರತಿಪಕ್ಷ ಕಾಂಗ್ರೆಸ್ ಅದೇ ವಿಷಯವನ್ನು ಮುಂದಿಟ್ಟುಕೊಂಡು ಹೋರಾಟ ಕೈಗೆತ್ತಿಕೊಂಡಿದ್ದು ಸರ್ಕಾರವನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿದೆ. ಈ ಬೆಳವಣಿಗೆ ರಾಜ್ಯ ಬಿಜೆಪಿಗೆ ದೊಡ್ಡ ಸವಾಲಾಗಿ ಪರಿಣಮಿಸಿದ್ದು ಒಂದೆಡೆ ಸಂಪುಟ ಪುನಾರಚನೆ, ಮತ್ತೊಂದೆಡೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ನಾಯಕರ ಪ್ರವಾಸಕ್ಕೂ ಹಿನ್ನಡೆ ಆಗಿದೆ. ಇದೇ ವಿಚಾರದಲ್ಲಿ ಎರಡು ದಿನಗಳ ಕಾರ್ಯಕಾರಿಣಿಯಲ್ಲಿ ಗಂಭೀರ ಚರ್ಚೆ ನಡೆಯುವ ಸಾಧ್ಯತೆ ಇದ್ದು ಒಟ್ಟು ಬೆಳವಣಿಗೆಯನ್ನು ಎದುರಿಸುವ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರು ಸೂಚನೆ ನೀಡಲಿದ್ದಾರೆ. ಅಲ್ಲದೆ, ಈ ರೀತಿಯ ಪರಿಣಾಮಗಳಿಗೆ ಕಾರಣವೇನು ಎಂಬ ಬಗ್ಗೆ ರಾಜ್ಯ ನಾಯಕರಿಂದ ವರದಿಯನ್ನೂ ಪಡೆಯಲಿದ್ದಾರೆ.
ಇದೇ ವೇಳೆ ಪ್ರತಿಪಕ್ಷ ಕಾಂಗ್ರೆಸನ್ನು ಕಟ್ಟಿ ಹಾಕಲು ಹೊಸ ತಂತ್ರ ಹೆಣೆಯುವ ಕುರಿತಂತೆಯೂ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರವಾಗಲಿದೆ.
ಸಂಪುಟ ಪುನಾರಚನೆಗೆ ಗ್ರೀನ್ ಸಿಗ್ನಲ್ ನಿರೀಕ್ಷೆ
ಇದಲ್ಲದೆ, ಬಹುದಿನಗಳಿಂದ ಚರ್ಚೆಯಾಗುತ್ತಿರುವ ಸಂಪುಟ ಪುನಾರಚನೆ ಅಥವಾ ವಿಸ್ತರಣೆಯ ಕುರಿತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಇದೇ ವೇಳೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸೂಚನೆ ನೀಡುವ ನಿರೀಕ್ಷೆಯೂ ಹಲವರಲ್ಲಿದೆ. ಕಳೆದ ವಾರ ಸಿಎಂ ದೆಹಲಿಗೆ ಹೋಗಿದ್ದ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಿಣಿಯ ಬಳಿಕ ಈ ಬಗ್ಗೆ ತೀರ್ಮಾನ ಮಾಡುವುದಾಗಿ ಸ್ವತಃ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಹೇಳಿದ್ದರು ಎಂದು ಹೇಳಲಾಗಿತ್ತು. ಗೃಹ ಸಚಿವ ಅಮಿತ್ ಷಾ ಕೂಡ ಅದೇ ಮಾತನ್ನು ಹೇಳಿದ್ದಾರೆ ಎನ್ನಲಾಗಿತ್ತು. ಹೀಗಾಗಿ ಕಾರ್ಯಕಾರಿಣಿಯ ಕೊನೆಯಲ್ಲಿ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ಕುರಿತು ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.
ಸಂಪುಟದಲ್ಲಿ ಖಾಲಿ ಇರುವ ನಾಲ್ಕು ಸ್ಥಾನದ ಜೊತೆಗೆ ಈಗ ಕೆ.ಎಸ್. ಈಶ್ವರಪ್ಪ ಅವರ ರಾಜೀನಾಮೆಯಿಂದ ಮತ್ತೊಂದು ಸ್ಥಾನ ತೆರವಾಗಿದ್ದು, ಅದರ ಜೊತೆಗೆ ಒಂದಿಬ್ಬರು ಹಿರಿಯರನ್ನು ರಾಜಿನಾಮೆ ಕೊಡಿಸಿ ಹೊಸತಾಗಿ ಏಳೆಂಟು ಮಂದಿಯನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಚಿಂತನೆಗಳಿವೆ. ಈ ಬಗ್ಗೆ ಹಲವು ನಾಯಕರಿಂದ ಒತ್ತಡಗಳಿದ್ದು ಈ ಬಾರಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನೇ ಭೇಟಿಯಾಗಿ ಸಚಿವ ಸ್ಥಾನಕ್ಕಾಗಿ ಎಡತಾಕುವ ಸಾಧ್ಯತೆಗಳಿವೆ. ಹೀಗಾಗಿ ಪುನಾರಚನೆಗೆ ಅನುಮತಿ ನೀಡಿದರೆ, ಮುಂದಿನ ವಾರದಲ್ಲಿಯೇ ಹೊಸಬರ ಸೇರ್ಪಡೆ ಆಗುವ ಸಾಧ್ಯತೆಯಿದೆ.
With the ongoing political developments in Karnataka putting the party and government to embarrassment, the two-day BJP State Executive meeting beginning Saturday in Vijayanagar district, is expected to be stormy. Former minister KS Eshwarappa’s issue is likely to dominate the core committee meeting, which is part of the executive meeting. With the ongoing political developments in Karnataka putting the party and government to embarrassment, the two-day BJP State Executive meeting beginning Saturday in Vijayanagar district, is expected to be stormy. Former minister KS Eshwarappa’s issue is likely to dominate the core committee meeting, which is part of the executive meeting.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm