ಸಿಎಂ ಕಚೇರಿಗೆ ಮುತ್ತಿಗೆ ಹಾಕಲು ಯತ್ನ ; ಸಿದ್ದರಾಮಯ್ಯ, ಡಿಕೆಶಿ, ಸುರ್ಜೇವಾಲಾ ಸೇರಿ 36 ಕಾಂಗ್ರೆಸ್ ನಾಯಕರ ವಿರುದ್ಧ ಪ್ರಕರಣ ದಾಖಲು 

18-04-22 01:45 pm       Bengaluru Correspondent   ಕರ್ನಾಟಕ

ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಪತ್ರಿಭಟನೆ ನೆಪದಲ್ಲಿ ಸಿಎಂ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ನಾಯಕರ ವಿರುದ್ಧ ಹೈ ಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 

ಬೆಂಗಳೂರು, ಎ.18 : ಮಾಜಿ ಸಚಿವ ಈಶ್ವರಪ್ಪ ವಿರುದ್ಧ ಪತ್ರಿಭಟನೆ ನೆಪದಲ್ಲಿ ಸಿಎಂ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ನಾಯಕರ ವಿರುದ್ಧ ಹೈ ಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 

ಏಪ್ರೀಲ್‌ 14 ರಂದು ರಾಜ್ಯ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕುವ ಕಾರ್ಯಕ್ರಮದಲ್ಲಿ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸೇರಿದಂತೆ ರಾಜ್ಯದ ನಾಯಕರು ಪಾಲ್ಗೊಂಡಿದ್ದರು. 

With Randeep Singh Surjewala's rise, Haryana Congress dynamics set to change

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಎ ವನ್, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎ ಟು, ರಣದೀಪ್ ಸಿಂಗ್ ಸುರ್ಜೆವಾಲ್ ಆರೋಪಿ ನಂಬರ್ ಮೂರು ಎಂದು ತೋರಿಸಲಾಗಿದೆ.‌ ಒಟ್ಟು 36 ಮಂದಿ ಕಾಂಗ್ರೆಸ್ ನಾಯಕರ ವಿರುದ್ದ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. 

ಅನುಮತಿ ಇಲ್ಲದೆ, ಅಕ್ರಮ ಕೂಟ ಸೇರಿ, ಸಂಚಾರಕ್ಕೆ ಅಡ್ಡಿಪಡಿಸಿದ್ದಾರೆಂದು ಪತ್ರಿಭಟನೆ ನಡೆಸಿದ್ದ ಕಾಂಗ್ರೆಸ್ ನಾಯಕರ ವಿರುದ್ಧ ಆರೋಪ ಹೊರಿಸಲಾಗಿದೆ.  ರೇಸ್ ಕೋರ್ಸ್ ರಸ್ತೆಯನ್ನು ಬ್ಲಾಕ್ ಮಾಡಿ ಪತ್ರಿಭಟನೆ ಮಾಡಲಾಗಿತ್ತು. ಹೈಗ್ರೌಂಡ್ ಠಾಣೆಯಲ್ಲಿ  IPC 143 ಮತ್ತು 341 ಅಡಿಯಲ್ಲಿ FIR ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

High grounds police have lodged an FIR against Congress leaders seeking to besiege the CM's residence.Former minister K.S. On April 14, Congress leaders staged a protest against Ishwarappa. The chief minister had tried to besiege the residence. Opposition leader Siddaramaiah, KPCC president A total of 36 FIRs have been lodged against Shivakumar and Ranieep Singh Surjewala.