ಬ್ರೇಕಿಂಗ್ ನ್ಯೂಸ್
18-04-22 07:22 pm Bengaluru Correspondent ಕರ್ನಾಟಕ
ಬೆಂಗಳೂರು, ಎ.18: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪರ್ಸೆಂಟೇಜ್ ವ್ಯವಹಾರದ ಪಿತಾಮಹ. ಮುಖ್ಯಮಂತ್ರಿಯಾಗಿದ್ದಾಗ ಆಪ್ತ ಶಾಸಕರಿಗೆ ಅನುದಾನ ಕೊಟ್ಟು ಕಮಿಷನ್ ಹೊಡೆದಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ಟೀಕಿಸಿ ಸರಣಿ ಟ್ವೀಟ್ ಮಾಡಿರುವ ಅವರು, ನಿಮ್ಮ ಕಮಿಷನ್ ಕತೆ ಕಾದಂಬರಿ ಬರೆಯುವಷ್ಟಿದೆ. ಅರ್ಕಾವತಿ ಬಡಾವಣೆಯ ರೀಡೂ ಹಗರಣದಲ್ಲಿ ಕೆಂಪಣ್ಣ ಆಯೋಗದ ಕೃಪೆಯಿಂದ ಪಾರಾದ ನಿಮ್ಮ ಯೋಗ್ಯತೆ ನಮಗೆ ಗೊತ್ತಿಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.
2008-09ರಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನದಿಂದ ಕೆಳಕ್ಕಿಳಿಸಲು ಬಿಜೆಪಿ ಜೊತೆ ವ್ಯವಹಾರ ಕುದುರಿಸಿದ್ದು, ಆಪರೇಷನ್ ಕಮಲದಲ್ಲಿ ತನ್ನ ಆಪ್ತ ಶಾಸಕರನ್ನು ಬಿಜೆಪಿ ಕಮಿಷನ್ ಪಡೆದಿದ್ದೂ ಗೊತ್ತಿದೆ. ಕೋಟಿಗಳ ಲೆಕ್ಕದ ಗಂಟು ಪಡೆಯಲು ಯಾರು ಹೋಗಿದ್ದರು ? ಎಲ್ಲಿಗೆ ತಲುಪಿಸಿದರು ಅನ್ನೋದೂ ಗೊತ್ತಿದೆ. ಹಣ ತಂದುಕೊಟ್ಟಿದ್ದ ನಿಮ್ಮ ಹಳೆಯ ಸ್ನೇಹಿತರೇ ನನಗೆ ತಿಳಿಸಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಮುಖ್ಯಮಂತ್ರಿಯಾಗಿದ್ದಾಗ ಕದ್ದ ವಾಚ್ ಕಟ್ಟಿಕೊಂಡಿದ್ದು ನಿಜವಲ್ಲವೇ.. ಆ ವಾಚ್ ತಂದುಕೊಟ್ಟಿದ್ದ ಪೊಲೀಸ್ ಅಧಿಕಾರಿಗೆ ಕೇಳಿದ ಜಾಗಕ್ಕೆ ವರ್ಗಾವಣೆ ಮಾಡಿದ್ದೂ ಸತ್ಯವಲ್ಲವೇ ಎಂದು ಕೇಳಿರುವ ಕುಮಾರಸ್ವಾಮಿ, ಈಶ್ವರಪ್ಪ ವಿಷಯದಲ್ಲಿ ಡಿವೈಎಸ್ಪಿ ಗಣಪತಿ ಪ್ರಕರಣ ಎಳೆದು ತಂದಿದ್ದೀರಿ. ನಾನು ಕೇಳಿದ್ದು ಕಲ್ಲಪ್ಪ ಹಂಡಿಭಾಗ್ ಬಗ್ಗೆ. ಹಿಂದುಳಿದ ಸಮುದಾಯಕ್ಕೆ ಸೇರಿದ ಆ ಪ್ರಾಮಾಣಿಕ ಅಧಿಕಾರಿಗೆ ಇನ್ನಿಲ್ಲದ ಕಿರುಕುಳ ಕೊಟ್ಟು ಮುಗಿಸಿದ್ದೀರಿ. ಇಲಾಖೆಯಲ್ಲಿ ಒಳ್ಳೆ ಭವಿಷ್ಯವಿದ್ದ ಅವರ ಸಾವಿಗೆ ಎರವಾದಿರಿ. ಅವರ ಸಾವಿಗೆ ನಿಮ್ಮ ಸರಕಾರ ಕಾರಣವಾಗಿಲ್ಲವೇ ಎಂದು ಪ್ರಶ್ನೆ ಮಾಡಿದ್ದಾರೆ.
ಸುಳ್ಳುಶೂರ, ಸಿದ್ದಸೂತ್ರದಾರ, ಸಿದ್ದಕಲಾ ನಿಪುಣ, ರಾಜಕೀಯ ಊಸರವಳ್ಳಿಗೆ ಚುನಾವಣೆಗೆ ಮುನ್ನವೇ ʼಜೆಡಿಎಸ್ ಜ್ವರʼ ಬಂದುಬಿಟ್ಟಿದೆ. ಹಾಸನದಲ್ಲಿ ವೃಥಾ ಹರಿಬಿಟ್ಟ ʼಸತ್ಯಭಕ್ಷʼ ನಾಯಕನ ಆಚಾರಹೀನ ಅರಿವುಗೆಟ್ಟ ನಾಲಗೆ ಮತ್ತೆ ಹುಚ್ಚುಕುಣಿತ ಮಾಡುತ್ತಿದೆ. ನಾನು ಕೇಳಿದ ಪ್ರಶ್ನೆಗಳಿಗೆ ಉತ್ತರವೇ ಇಲ್ಲ, ಮತ್ತೆಮತ್ತೆ ಕೆಣಕುವ ದುಸ್ಸಾಹಸ ಬೇರೆ. 1/14
— H D Kumaraswamy (@hd_kumaraswamy) April 18, 2022
ಆಪರೇಷನ್ ಕಮಲ ಬಿಜೆಪಿ ಪಾಪದ ಕೂಸು. ಆ ಕೂಸಿಗೆ ಹಾಲೆರೆದವರು ಯಾರಯ್ಯ #ಸುಳ್ಳುರಾಮಯ್ಯ?
— H D Kumaraswamy (@hd_kumaraswamy) April 18, 2022
ಇಂಥ ಅನೈತಿಕ ಕೂಸಿಗೆ ಹಾಲೆರೆದು ಬೆಳೆಸಿ, ದೊಡ್ಡದು ಮಾಡಿದ ನೀವು, ಜೆಡಿಎಸ್ ಪಕ್ಷ ಬಿಜೆಪಿ ಬೀ ಟಿಂ ಎಂದು ಹಾದಿಬೀದಿಯಲ್ಲಿ ಜಾಗಟೆ ಹೊಡೆಯುತ್ತಿದ್ದೀರಲ್ಲ? ಇದ್ಯಾವ ಸೀಮೆ ರಾಜಕೀಯ? 2/14
ಬಹಿರಂಗದಲ್ಲಿ ಮಾತ್ರ ಬಿಜೆಪಿ ಕೋಮುವಾದಿ! ಅಂತರಂಗದಲ್ಲಿ ಅದಕ್ಕೆ ನೀವು ಅಡ್ಜಸ್ಟ್ʼಮೆಂಟ್ʼವಾದಿ!! ರಾಜಕೀಯ ಊಸರವಳ್ಳಿ, ಸಿದ್ದಕಲಾ ನಿಪುಣನೇ.. ನಿಮ್ಮ ರಾಜಕೀಯ ಲೀಲೆಗಳು ಒಂದಾ ಎರಡಾ? 3/14
— H D Kumaraswamy (@hd_kumaraswamy) April 18, 2022
2008-2009; ಶಾಸಕರ ಖರೀದಿ ಚಾಪ್ಟರ್ 1. ಆಗ 8 ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ. ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರತಿಪಕ್ಷ ನಾಯಕ ಸ್ಥಾನದಿಂದ ಕಿತ್ತೆಸೆಯಲು ಬಿಜೆಪಿ ಜತೆ ಡೀಲ್ ಕುದುರಿಸಿಕೊಂಡು ಡಿಂಗ್ ಡಾಂಗ್ ಹಾಡಿದ್ದು ಯಾರಯ್ಯ?
— H D Kumaraswamy (@hd_kumaraswamy) April 18, 2022
ಹೆಸರಿನಲ್ಲಿ ʼರಾಮʼ! ಉಂಡ ಮನೆಗೆ ಪಂಗನಾಮ!! ಸ್ವಯಂ ಘೋಷಿತ ಸತ್ಯಹರಿಶ್ಚಂದ್ರ..4/14
ಆಪರೇಷನ್ ಕಮಲಕ್ಕೆ ಕೈ ಜೋಡಿಸಿದ್ದಕ್ಕೆ ದಕ್ಷಿಣೆಯಾಗಿ ಮುಟ್ಟಿದ ಹಣವೆಷ್ಟು? ಕೋಟಿಗಳ ಗಂಟು ತರಲು ಯಾರನ್ನು ಕಳಿಸಿದ್ದಿರಿ? ಆ ಹಣ ಏನಾಯಿತು? ಎಲ್ಲಿಗೆ ಹೋಯಿತು? ಚುನಾವಣೆಗೆ ಖರ್ಚು ಮಾಡಿದಿರಾ, ಇಲ್ಲಾ.. ಜೇಬಿಗಿಳಿಸಿ ಜಲ್ಸಾ ಮಾಡಿದಿರಾ? ಅದು ರಾಮನ ಲೆಕ್ಕದಲ್ಲಿದಿಯಾ? ಅಥವಾ..ಕೃಷ್ಣನ ಲೆಕ್ಕದಲ್ಲಿಯಾ? 5/14
— H D Kumaraswamy (@hd_kumaraswamy) April 18, 2022
ʼಆಪರೇಷನ್ ಕಮಲ ಹಣದ ಕಥಾಪ್ರಸಂಗʼ ರೋಚಕ ʼಸಿದ್ದಸಿನಿಮಾʼ ಎಂಬ ಬಗ್ಗೆ ಅನುಮಾನ ಇಲ್ಲ. ಅದಕ್ಕೆ ಕಥೆ, ಚಿತ್ರಕಥೆ, ನಿರ್ದೇಶನ, ಹಿಮ್ಮೇಳ-ಮುಮ್ಮೇಳ ಎಲ್ಲವೂ ನಿಮ್ಮದೆ?
— H D Kumaraswamy (@hd_kumaraswamy) April 18, 2022
ಧೈರ್ಯವಿ ದ್ದರೆ ಅದರ ಬಗ್ಗೆ ಮಾತನಾಡಿ. ಕನ್ನಡಿಗರೆಲ್ಲರಿಗೂ ನಿಮ್ಮ ಕಪಟತನದ ಪರಿಚಯವಾಗಲಿ. 6/14
ಆಪರೇಷನ್ ಕಮಲದ ಬಾಬ್ತಿನ ಹಣ ಸ್ವೀಕರಿಸಿ ನಿಮಗೆ ತಂದುಕೊಟ್ಟ ನಿಮ್ಮ ಆ ಹಳೆಯ ಸ್ನೇಹಿತರೇ ಸ್ವತಃ ನನ್ನ ಬಳಿ ಬಿಚ್ಚಟ್ಟ ಕಟುಸತ್ಯವಿದು! ಎಷ್ಟೇ ಆದರೂ, ಸತ್ಯ ನಿಮಗೆ ಅಪಥ್ಯ ಅಲ್ಲವೇ? ಕಳ್ಳಬೆಕ್ಕು ಕದ್ದು ಹಾಲು ಕುಡಿದರೆ ಗೊತ್ತಾಗುವುದಿಲ್ಲ ಎಂಬ ಹುಂಬುತನವೇ? ಅಬ್ಬಬ್ಬಾ.. ನಿಮಗೆ ನೀವೇ ಸಾಟಿ!! 7/14
— H D Kumaraswamy (@hd_kumaraswamy) April 18, 2022
ಪಾಪ.. ಕಾಂಗ್ರೆಸ್!!
— H D Kumaraswamy (@hd_kumaraswamy) April 18, 2022
ಸುಳ್ಳುರಾಮಯ್ಯನ ಸುಳ್ಳುಗಳ ಸುಪ್ಪತ್ತಿಗೆಯ ಮೇಲೆ ಮೈಮರೆತು ತೇಲುತ್ತಿದೆ. ಮುಳುಗುವೆ ಎನ್ನುವ ಅರಿವೂ ಆ ಪಕ್ಷಕ್ಕಿಲ್ಲ. ಮುಳುಗುವ ಹಡಗಿನ ಕ್ಯಾಪ್ಟನ್ʼಗೆ ಬಿಜೆಪಿ ಬಾಲಂಗೋಚಿ ʼಸಿದ್ದಹಸ್ತನʼ ಅಡ್ಜೆಸ್ಟ್ʼಮೆಂಟ್ ರಾಜಕಾರಣ & ಹಣಕ್ಕೆ ಮಾರಿಕೊಂಡ ಆ ಸುಪಾರಿ ಆಟಗಾರ ತನ್ನ ಕೈಕಚ್ಚುತ್ತಿದ್ದಾನೆ ಎಂಬ ಅರಿವೇ ಇಲ್ಲ. 8/14
"ಈ ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನ ಉಳಿಯಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಯಬೇಕು" ಎಂದಿದ್ದು ಯಾರಪ್ಪಾ?
— H D Kumaraswamy (@hd_kumaraswamy) April 18, 2022
ಇದು ಮಾತೃಪಕ್ಷದ ಟರ್ಮಿನೇಟರಯ್ಯನ ʼಮನ್ ಕೀ ಬಾತ್ʼ!! ಹೃದಯದಲ್ಲೇ ಹೆಪ್ಪುಗಟ್ಟಿದ್ದ ಕಾರ್ಕೋಟಕ ವಿಷವನ್ನೇ ಸ್ವಪಕ್ಷದ ಮೇಲೆ ಕಾರಿಕೊಂಡ ನೀವು ಈಗ ಯಾವ ಟೀಮು? ಬಿಜೆಪಿ ಬೀ ಟೀಮು ತಾನೇ? 9/14
ದೇವೇಗೌಡರ ನೈತಿಕತೆ ಬಗ್ಗೆ ಪ್ರಶ್ನಿಸುವ ಸಿದ್ದಹಸ್ತನೇ, ನೀವೇ ʼಪರ್ಸಂಟೇಜ್ ವ್ಯವಹಾರದ ಪಿತಾಮಹʼ.
— H D Kumaraswamy (@hd_kumaraswamy) April 18, 2022
ಆಪ್ತಶಾಸಕರಿಗೆ ಮೀಟಿಂಗ್ʼಗೆ ಇಂತಿಷ್ಟು ಎಂದು ಕೊಟ್ಟು ಕಮೀಷನ್ ಹೊಡೆದ ಕಥೆ, ಕಾದಂಬರಿ ಬರೆಯುವಷ್ಟಿದೆ. ಅರ್ಕಾವತಿ ರೀಡೂ ರಿಂಗ್ʼಮಾಸ್ಟರ್ ಆಗಿ ಅಡ್ಡಡ್ಡ ನುಂಗಿ ಕೆಂಪಣ್ಣ ಆಯೋಗದ ಕೃಪೆಯಿಂದ ಪಾರಾದ ನಿಮ್ಮ ಯೋಗ್ಯತೆ ನನಗೆ ಗೊತ್ತಿಲ್ಲವೇ? 10/14
2018ರಲ್ಲಿ ಒಳ್ಳೇ ಆಡಳಿತ ನಡೆಸಲೆಂದು ಕುಮಾರಸ್ವಾಮಿಗೆ ಅಧಿಕಾರ ಕೊಟ್ಟೆವು ಎಂದಿದ್ದೀರಿ. ಆ ಮುನ್ನ 5 ವರ್ಷ ಕೆಟ್ಟ ಆಡಳಿತ ಕೊಟ್ಟೆ ಎಂದು ನೀವೇ ಒಪ್ಪಿಕೊಂಡ ಹಾಗಾಯಿತಲ್ಲ.
— H D Kumaraswamy (@hd_kumaraswamy) April 18, 2022
ಜೆಡಿಎಸ್ 30 ಸೀಟಿನ ಪಕ್ಷವಲ್ಲ,123 ಕ್ಷೇತ್ರಗಳ ಸವಾಲು ಸ್ವೀಕರಿಸಿ ಹೊರಟ ಪಕ್ಷ. ಇದು ಗೊತ್ತಾಗಿಯೇ ಪಕ್ಷವಾತ ಬಂದ ಹಾಗೆ ನೀವು ಚಡಪಡಿಸುತ್ತಿದ್ದೀರಿ!! 11/14
ಕದ್ದಮಾಲು ಕೈಗೆ ಕಟ್ಟಿ ಸಿಎಂ ಕುರ್ಚಿಯಲ್ಲಿ ನಿರ್ಲಜ್ಜವಾಗಿ ಮೆರೆದ ನಿಮ್ಮ #ಕತ್ತಲೆಚಾರಿತ್ರ್ಯ ಕೊಳೆತು ನಾರುತ್ತಿದೆ. ನಿಮ್ಮ ಕೈಲಿ ಮಿರಮಿರ ಮಿಂಚಿದ #ಹ್ಯೂಬ್ಲೆಟ್_ವಾಚ್ ಎಲ್ಲಿಂದಾ ಬಂತು? ಕಳ್ಳಮಾಲು ಮಾಲೀಕನಿಗೆ ಸೇರದೆ ನಿಮ್ಮ ಅಮೃತಹಸ್ತ ಅಲಂಕರಿʼಸಿದ್ದುʼ ಹೇಗೆ? ಆ ವಾಚ್ ತಂದ್ಕೊಟ್ಟ ಪೊಲೀಸಯ್ಯನಿಗೆ ವರ್ಗಾವಣೆ ಕೃಪೆ ಕರುಣಿಸಿದಿರಾ? 12/14
— H D Kumaraswamy (@hd_kumaraswamy) April 18, 2022
ಈಶ್ವರಪ್ಪ ವಿಷಯದಲ್ಲಿ ಡಿವೈಎಸ್ಪಿ ಗಣಪತಿ ಅವರ ಹೆಸರು ಎಳೆದು ತಂದಿದ್ದೀರಿ. ನಾನು ಹೇಳಿದ್ದು ಕಲ್ಲಪ್ಪಹಂಡೀಭಾಗ್ ಬಗ್ಗೆ. ಹಿಂದುಳಿದ ಸಮುದಾಯಕ್ಕೆ ಸೇರಿದ್ದ ಆ ಪ್ರಾಮಾಣಿಕ ಅಧಿಕಾರಿಗೆ ಇನ್ನಿಲ್ಲದ ಕಿರುಕುಳ ಕೊಟ್ಟು ಮುಗಿಸಿದಿರಿ. ಇಲಾಖೆಯಲ್ಲಿ ಒಳ್ಳೇ ಭವಿಷ್ಯವಿದ್ದ ಅವರ ಜೀವಕ್ಕೆ ಎರವಾದಿರಿ. ಅವರ ಸಾವಿಗೆ ನಿಮ್ಮ ಸರಕಾರ ಕಾರಣ.ಅಲ್ಲವೇ? 13/14
— H D Kumaraswamy (@hd_kumaraswamy) April 18, 2022
ನಿಮ್ಮ ಕತ್ತಲೆ ಮುಖವಾಡ & ʼಪರ್ಸಂಟೇಜ್ ಪಲ್ಲಕ್ಕಿʼಯಲ್ಲಿ ಪವಡಿಸಿದ ನಿಮ್ಮ ನಿಜಬಣ್ಣ ಇನ್ನೇನು ಕಳಚಿಬೀಳಲಿದೆ. ನಿಮ್ಮ ಸುಳ್ಳು ನಿಮ್ಮನ್ನೇ ಸುಡುವ ಕಾಲ ಸನಿಹದಲ್ಲಿದೆ. 14/14#ವಿನಾಶಕಾಲೇವಿಪರೀತಸುಳ್ಳು
— H D Kumaraswamy (@hd_kumaraswamy) April 18, 2022
Assembly opposition leader is the father of Siddaramaiah Percetage business. The JDS Legislative Party leader H.D.kumaraswamy has accused the commission to the close legislature when the Chief Minister has hit the Commission.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 01:58 pm
HK News Desk
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm