ಬ್ರೇಕಿಂಗ್ ನ್ಯೂಸ್
18-04-22 10:30 pm HK Desk news ಕರ್ನಾಟಕ
ಸುಳ್ಯ, ಎ.18 : ಅನಿಯಮಿತ ವಿದ್ಯುತ್ ಕಡಿತ ಆಗುತ್ತಿದ್ದ ಬಗ್ಗೆ ಕಳೆದ ಬಾರಿ ಸಿದ್ದರಾಮಯ್ಯ ಸರಕಾರದಲ್ಲಿ ಇಂಧನ ಸಚಿವರಾಗಿದ್ದ ಡಿಕೆ ಶಿವಕುಮಾರ್ ಅವರಿಗೆ ಫೋನಾಯಿಸಿ ಬೈದಿದ್ದ ಆರೋಪದಲ್ಲಿ ಪ್ರಕರಣ ಎದುರಿಸುತ್ತಿದ್ದ ಸುಳ್ಯ ತಾಲೂಕಿನ ಬೆಳ್ಳಾರೆಯ ಕೃಷಿಕರೊಬ್ಬರಿಗೆ ನ್ಯಾಯಾಲಯ ಜೈಲು ಶಿಕ್ಷೆ ನೀಡಿದೆ.
ಬೆಳ್ಳಾರೆಯ ಸಾಯಿ ಗಿರಿಧರ್ ರೈ ಶಿಕ್ಷೆಗೊಳಗಾದವರು. 2016 ರ ಫೆ.28ರಂದು ಸಚಿವ ಡಿಕೆಶಿಗೆ ಫೋನ್ ಮಾಡಿ ಬೈದಿದ್ದ ಬಗ್ಗೆ ಸುಳ್ಯದ ಮೆಸ್ಕಾಂ ಅಧಿಕಾರಿಗಳು ಪೊಲೀಸ್ ದೂರು ನೀಡಿದ್ದರು. ಅವಾಚ್ಯ ಶಬ್ದಗಳಿಂದ ನಿಂದನೆ, ಜೀವ ಬೆದರಿಕೆ, ಸರಕಾರಿ ಕರ್ತವ್ಯಕ್ಕೆ ಅಡ್ಡಿ ಸೇರಿ ನಾಲ್ಕು ಆರೋಪಗಳಡಿ ಪೊಲೀಸರು ಪ್ರಕರಣ ದಾಖಲಿಸಿದ್ದು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಸಲ್ಲಿಸಿದ್ದರು. ವಿಚಾರಣೆ ನಡೆದು ಹಲವರನ್ನು ಸಾಕ್ಷಿಗಳನ್ನಾಗಿಸಿ ಕೋರ್ಟಿಗೆ ಸಾಕ್ಷ್ಯ ಹೇಳಲು ಕರೆಸಲಾಗಿತ್ತು. ಸಚಿವರಾಗಿದ್ದ , ಹಾಲಿ ಕೆಪಿಸಿಸಿ ಅಧ್ಯಕ್ಷನಾಗಿರುವ ಡಿಕೆಶಿ ಅವರನ್ನೂ ಸಾಕ್ಷ್ಯ ಹೇಳಲು ಬರುವಂತೆ ಸಮನ್ಸ್ ನೀಡಲಾಗಿತ್ತು.
ಮತ್ತೆ ಮತ್ತೆ ಸಮನ್ಸ್ ಕೊಟ್ಟ ಬಳಿಕ 2021ರ ಅಕ್ಟೋಬರ್ 5ರಂದು ಡಿಕೆಶಿ ಸುಳ್ಯದ ನ್ಯಾಯಾಲಯಕ್ಕೆ ಬಂದು ಸಾಕ್ಷಿ ಹೇಳಿ ಹೋಗಿದ್ದರು. ವಿಚಾರಣೆ ಪೂರ್ತಿಗೊಳಿಸಿದ ಸುಳ್ಯದ ಹಿರಿಯ ಸಿವಿಲ್ ಕೋರ್ಟ್ ಇಂದು ಶಿಕ್ಷೆ ಪ್ರಮಾಣ ಘೋಷಣೆ ಮಾಡಿದೆ. ನಾಲ್ಕು ಅಪರಾಧಗಳು ಸಾಬೀತು ಆಗಿದ್ದರಿಂದ ಒಟ್ಟು ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ, 5 ಸಾವಿರ ದಂಡ ವಿಧಿಸಲಾಗಿದೆ. ದಂಡ ತೆರಲು ತಪ್ಪಿದಲ್ಲಿ ಒಂದು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ಅನುಭವಿಸಬೇಕು.
Sullia Man from Ballary sentenced to two years jail for conflict with DK Shivakumar.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm