ರಾಜ್ಯ ಮಟ್ಟದ ಕಂಬಳ ಅಸೋಸಿಯೇಷನ್ ರಚನೆಗೆ ನಿರ್ಣಯ ; ಮಂಜುನಾಥ ಭಂಡಾರಿ ಪ್ರಸ್ತಾಪಕ್ಕೆ ಪರಿಷತ್ ಸಭಾಪತಿ ಅಂಕಿತ

21-04-22 11:03 am       Bengaluru Correspondent   ಕರ್ನಾಟಕ

ರಾಜ್ಯದ ಕರಾವಳಿಯ ಜನಪದ ಕ್ರೀಡೆ, ಐತಿಹಾಸಿಕ ಹಿನ್ನೆಲೆಯಿರುವ ಕಂಬಳ ಕ್ರೀಡೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹೊಸತಾಗಿ ಕಂಬಳ ಅಸೋಸಿಯೇಷನ್ ರಚಿಸಲು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. 

ಬೆಂಗಳೂರು, ಎ.21: ರಾಜ್ಯದ ಕರಾವಳಿಯ ಜನಪದ ಕ್ರೀಡೆ, ಐತಿಹಾಸಿಕ ಹಿನ್ನೆಲೆಯಿರುವ ಕಂಬಳ ಕ್ರೀಡೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಹೊಸತಾಗಿ ಕಂಬಳ ಅಸೋಸಿಯೇಷನ್ ರಚಿಸಲು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. 

ಮಾರ್ಚ್ ತಿಂಗಳಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಹಾಗೂ ಇತರ ಸದಸ್ಯರು ಈ ವಿಷಯ ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಸಭಾಪತಿ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿತ್ತು. ಕಂಬಳ ಕ್ರೀಡೆಯನ್ನು ಹೆಚ್ಚು ಸಂಘಟಿತವಾಗಿ ಮತ್ತು ಪರಿಣಾಮಕಾರಿಯಾಗಿ ಆಯೋಜಿಸಲು ರಾಜ್ಯ ಮಟ್ಟದ ಕಂಬಳ ಅಸೋಸಿಯೇಷನ್ ರಚಿಸಬೇಕು. ಇದಕ್ಕೆ ಕ್ರೀಡಾ ಇಲಾಖೆಯ ಅನುಮೋದನೆ, ರಾಜ್ಯ ಸರಕಾರದಿಂದ ಅನುದಾನ ಪಡೆಯಬೇಕು. ಬಳಿಕ ಎಲ್ಲ ಜಿಲ್ಲಾ ಮತ್ತು ಸ್ಥಳೀಯ ಕಂಬಳ ಸಮಿತಿಗಳನ್ನು ರಾಜ್ಯ ಮಟ್ಟದ ಅಸೋಸಿಯೇಷನ್ ನಲ್ಲಿ ನೋಂದಾಯಿಸಿ ಪ್ರತ್ಯೇಕ ಬೈಲಾ ರಚಿಸಿ ಸ್ಥಳೀಯ ಕಂಬಳ ಸಮಿತಿಗಳಿಗೆ ಹಣ ಬಿಡುಗಡೆ ಮಾಡಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

ವಿಧಾನ ಪರಿಷತ್ತಿನಲ್ಲಿ ನಡೆದ ಚರ್ಚೆಗೆ ಪೂರಕವಾಗಿ ಸಭಾಪತಿಯವರ ಅಧ್ಯಕ್ಷತೆಯಲ್ಲಿ ಎ.19ರಂದು ಸಭೆ ನಡೆದಿದ್ದು ಕಂಬಳ ಅಸೋಸಿಯೇಷನ್ ರಚನೆಗೆ ಮಹತ್ವದ ನಿರ್ಧಾರಕ್ಕೆ ಬರಲಾಗಿದೆ. ಇದರಿಂದ ಕಂಬಳ ಕ್ರೀಡೆಗೆ ಹೊಸ ಆಯಾಮ ಸಿಕ್ಕಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಹೇಳಿದ್ದಾರೆ.

Plan for implementation of State level kambala association, Manjunath Bhandary name makes sound