ಬ್ರೇಕಿಂಗ್ ನ್ಯೂಸ್
29-04-22 01:33 pm Bengalore Correspondnt ಕರ್ನಾಟಕ
ಬೆಂಗಳೂರು, ಎ.29: ಪಿಎಸ್‌ಐ ನೇಮಕಾತಿ ಹಗರಣದ ಕಿಂಗ್‌ಪಿನ್ ಎನ್ನಲಾದ ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ ಬೆನ್ನಲ್ಲೇ ಕಲಬುರ್ಗಿ ಜಿಲ್ಲೆಯ ಪಿಎಸ್‌ಐ ನೇಮಕಾತಿ ಪ್ರಕ್ರಿಯೆಯನ್ನು ಪೂರ್ತಿ ರದ್ದುಗೊಳಿಸಿ ರಾಜ್ಯ ಸರಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ.
ಇದೇ ವೇಳೆ, ಆರೋಪಿಗಳನ್ನು ಹೊರತುಪಡಿಸಿ ಉಳಿದವರಿಗೆ ಮರು ಪರೀಕ್ಷೆ ನಡೆಸಲಾಗುವುದು ಎಂದು ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು, ರಾಜಕಾರಣಿಗಳು ಯಾರೇ ಇರಲಿ ಎಷ್ಟೇ ಪ್ರಭಾವಿಗಳು ಇದ್ದರೂ ಕಠಿಣ ಕ್ರಮ ತೆಗೆದುಕೊಳ್ತೀವಿ. ಅವರನ್ನು ಹೆಡೆಮುರಿ ಕಟ್ತೀವಿ ಎಂದು ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಒಟ್ಟು 54,289 ಮಂದಿ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಇದರಲ್ಲಿ ಅಕ್ರಮದಲ್ಲಿ ಆಪಾದಿತರು ಎಂದು ಪರಿಗಣಿಸಲ್ಪಟ್ಟವರನ್ನು ಬಿಟ್ಟು , ಉಳಿದವರಿಗೆ ಮರು ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮದ ಆರೋಪಗಳ ಕುರಿತು ವಿಧಾನ ಪರಿಷತ್ ಕಲಾಪದಲ್ಲಿ ಪ್ರತಿಕ್ರಿಯಿಸಿದ್ದ ಗೃಹ ಸಚಿವರು, ಪಿಎಸ್‌ಐ ಲಿಖಿತ ಪರೀಕ್ಷೆಯಲ್ಲಿ ಬ್ಲೂಟೂತ್ ಉಪಕರಣಗಳನ್ನು ಬಳಸಿ ಸಹಾಯ ಮಾಡುತ್ತಿದ್ದ ಅಕ್ರಮ ಕೂಟದ ಮೇಲೆ ದಾಳಿ ನಡೆಸಿ ಹಲವರನ್ನು ಬಂಧಿಸಲಾಗಿದೆ ಎಂದಿದ್ದರು. ಆದರೆ ಸಚಿವರು ಹೇಳಿದಂತೆ ಅ.3, 2021ರಂದು ನಡೆದ ಪಿಎಸ್‌ಐ ಲಿಖಿತ ಪರೀಕ್ಷೆ ವೇಳೆ ಯಾವುದೇ ದಾಳಿ ನಡೆದಿರಲಿಲ್ಲ. ಬದಲಾಗಿ ಅ.24ರಂದು ನಡೆದ ಕಾನ್ಸ್‌ಟೇಬಲ್ ಪರೀಕ್ಷೆಯ ಮುನ್ನಾದಿನ (ಅ.23, 2021) ಕಲಬುರಗಿ ಹಾಗೂ ಬೆಳಗಾವಿ ವಿಭಾಗದಲ್ಲಿ ದಾಳಿ ನಡೆದಿತ್ತು. ಎಲೆಕ್ಟ್ರಾನಿಕ್ ಸಾಧನ, ಬ್ಲೂಟೂತ್ ಬಳಸಿ ಪರೀಕ್ಷೆಯಲ್ಲಿ ನಕಲು ಮಾಡುವ ಯತ್ನಕ್ಕಿಳಿದಿದ್ದ 9 ಜನರನ್ನು ಕಲಬುರಗಿಯಲ್ಲಿ ಪೊಲೀಸರು ಬಂಧಿಸಿದ್ದರು. ಲಾಡ್ಜ್‌ವೊಂದರಲ್ಲಿ ತಂಗಿದ್ದ ಇವರ ಮೇಲೆ ದಾಳಿ ನಡೆಸಿದಾಗ, ಬ್ಲೂಟೂತ್ ಡಿವೈಸ್, ಮೈಕ್ರೋಫೋನ್ ಮತ್ತು ಸಿಮ್ ಕಾರ್ಡುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈ ಬಗ್ಗೆ ಸದನದಲ್ಲಿ ಉತ್ತರಿಸುವಾಗ ಗೃಹಸಚಿವರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ವಾಸ್ತವಾಂಶದ ಮಾಹಿತಿ ನೀಡದೆ ದಾರಿ ತಪ್ಪಿಸುವ ಯತ್ನ ನಡೆಸಿದ್ದರು ಎಂಬಿತ್ಯಾದಿ ಮಾತುಗಳು ಕೇಳಿ ಬಂದಿದ್ದವು. ಆನಂತರ ಪ್ರಕರಣ ಸಿಐಡಿಗೆ ಒಪ್ಪಿಸಿ ಆರೋಪಿಗಳ ಬಂಧನ ಆಗುತ್ತಲೇ ಹಗರಣ ಬಯಲಿಗೆ ಬಂದಿತ್ತು.
The state government has announced a major decision to cancel the PSI recruitment process in Calabargi district following the arrest of BJP leader Divya Sargari, the Kingpin of the PSI recruitment scandal.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm