ಬ್ರೇಕಿಂಗ್ ನ್ಯೂಸ್
01-05-22 02:12 pm HK Desk News ಕರ್ನಾಟಕ
ಮಂಡ್ಯ, ಮೇ 1: ಮೈಸೂರು - ಧಾರವಾಡ ಎಕ್ಸ್‌ಪ್ರೆಸ್ ರೈಲಿನಲ್ಲಿ ಶನಿವಾರ ಮಧ್ಯರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು ಕೂದಲೆಳೆಯಲ್ಲಿ ಭಾರೀ ಅನಾಹುತ ತಪ್ಪಿದೆ.
ಮೈಸೂರಿನಿಂದ ಧಾರವಾಡಕ್ಕೆ ತೆರಳುತ್ತಿದ್ದ ರೈಲು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಮಂದಗೆರೆ ಬಳಿ ಸಾಗುತ್ತಿದ್ದಾಗ ಬೆಂಕಿ ಹೊತ್ತಿಕೊಂಡಿದೆ. ರೈಲು ರಾತ್ರಿ 10.30 ಕ್ಕೆ ಮೈಸೂರಿನಿಂದ ಹೊರಟಿತ್ತು. ರಾತ್ರಿ 12 ಗಂಟೆ ವೇಳೆಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣವೇ ರೈಲು ನಿಲ್ಲಿಸಿದ್ದರಿಂದ ಅನಾಹುತ ತಪ್ಪಿದೆ.
ರೈಲಿನ ಮೂರನೇ ಬೋಗಿಯಲ್ಲಿ ಅಕಸ್ಮಾತ್ ಬೆಂಕಿ ಕಾಣಿಸಿಕೊಂಡಿದ್ದು ಕೂಡಲೇ ಪ್ರಯಾಣಿಕರು ಚೈನ್ ಎಳೆದು ಚಾಲಕನ ಗಮನಕ್ಕೆ ತಂದಿದ್ದಾರೆ. ರೈಲು ಸ್ಲೋ ಆಗುತ್ತಲೇ ಪ್ರಯಾಣಿಕರು ಕೆಳಕ್ಕಿಳಿದಿದ್ದಾರೆ. ಇದರಿಂದ ಅಪಾಯ ಇಲ್ಲದೆ ಪ್ರಯಾಣಿಕರು ಪಾರಾಗಿದ್ದಾರೆ. ಬೋಗಿಯಿಂದ ಕೆಳಗಿಳಿಯುವಾಗ ಕೆಲವು ಪ್ರಯಾಣಿಕರಿಗಷ್ಟೆ ಸಣ್ಣ ಪುಟ್ಟ ಗಾಯಗಳಾಗಿವೆ.
ತಕ್ಷಣವೇ ರೈಲ್ವೇ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಸೇರಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಬೆಂಕಿ ನಂದಿಸಿದ ಬಳಿಕ ರೈಲು ಮತ್ತೆ ಸಂಚಾರ ಆರಂಭಿಸಿದೆ. ಒಂದು ಗಂಟೆಗೂ ಹೆಚ್ಚು ಕಾಲ ರೈಲು ನಿಲುಗಡೆಯಾಗಿದ್ದು ಪ್ರಯಾಣಿಕರು ಆತಂಕಕ್ಕೀಡಾಗಿದ್ದರು.
Several media houses have reported that Mysuru- Dharwad train passengers had miraculous escape after fire broke out in one of the compartment. According to the reports, the train headed to Dharwad from Mysuru was stopped at Mandagere of KR Pet taluk in Mandya district, after passengers raised alarm.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm