ಬ್ರೇಕಿಂಗ್ ನ್ಯೂಸ್
01-05-22 10:13 pm HK Desk News ಕರ್ನಾಟಕ
ಮೈಸೂರು, ಮೇ 1 : ನಾಯಕತ್ವ ಬದಲಾವಣೆಯ ಬಗ್ಗೆ ಹೇಳಿಕೆ ನೀಡಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಹೇಳಿಕೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಟಕಿಯಾಡಿದ್ದಾರೆ. ಬಸವರಾಜ ಬೊಮ್ಮಾಯಿ ಆರೆಸ್ಸೆಸ್ ನವನು ಅಲ್ಲ. ಹೀಗಾಗಿ ಅವನನ್ನು ಬದಲಾಯಿಸಲು ಆರ್ ಎಸ್ ಎಸ್‌ನವರು ಹೊರಟಿದ್ದಾರೆ. ಬಸವರಾಜ ಬೊಮ್ಮಾಯಿ ಜನತಾ ಪರಿವಾರದವನು. ನಮ್ಮ ಜೊತೆಯಲ್ಲೇ ಇದ್ದ. ಆದರೆ ಅವನು ನಮ್ಮ ಪಟ್ಟುಗಳನ್ನು ಕಲಿಯಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಸಂಪೂರ್ಣವಾಗಿ ಸತ್ತುಹೋಗಿದೆ. ಈ ಸರ್ಕಾರ ಜೀವಂತವಾಗಿದೆ ಎಂದೇ ಗೊತ್ತಾಗುತ್ತಿಲ್ಲ. ಬೊಮ್ಮಾಯಿ ಸರ್ಕಾರದಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದಿದೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಭ್ರಷ್ಟಾಚಾರ ವಿಚಾರವಾಗಿ ಜನಾಂದೋಲನ ಮೂಲಕ ಜನರ ಬಳಿಗೆ ಹೋಗಬೇಕು. ಚುನಾವಣೆಯಲ್ಲಿ ಜನರ ಅಭಿಪ್ರಾಯವೇ ಮುಖ್ಯವಾಗುತ್ತದೆ. ಅವರ ಬಳಿಯೇ ನಾವು ಹೋಗಬೇಕು, ಹೀಗಾಗಿ ನಾವು ಜನಾಂದೋಲನ ಮಾಡುತ್ತಿದ್ದೇವೆ ಎಂದು ಹೇಳಿದರು.
ಕಾಂಗ್ರೆಸ್ ಕುಟುಂಬ ರಾಜಕಾರಣದ ಬಗ್ಗೆ ಕೇಳಿದ ಪ್ರಶ್ನೆಗೆ, ಬಿಎಸ್ ವೈಯವರದ್ದು ಕುಟುಂಬ ರಾಜಕಾರಣವಲ್ಲವೇ? ಕುಟುಂಬ ರಾಜಕಾರಣ ಕಾಂಗ್ರೆಸ್ ನಲ್ಲಿದೆ ಎನ್ನುವವರು ಯಡಿಯೂರಪ್ಪ ಮತ್ತು ಅವರ ಮಕ್ಕಳು ಯಾರು ಎಂದು ಪ್ರಶ್ನೆ ಮಾಡಿದ್ದಾರೆ.
ಆಸಿಡ್ ಪ್ರಕರಣ ಒಂದೇ ಅಲ್ಲ, ಅನೇಕ ಪ್ರಕರಣಗಳಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿಫಲರಾಗಿದ್ದಾರೆ. ಅವರ ಸರ್ಕಾರದ ಮಂತ್ರಿಯೇ ಸೆಕ್ಷನ್ 144 ಉಲ್ಲಂಘಿಸಿದ್ದಾರೆ. ಬಿಜೆಪಿಯಲ್ಲಿ ಈಗ ದುರ್ಬಲ ಮುಖ್ಯಮಂತ್ರಿ ಮತ್ತು ಗೃಹ ಸಚಿವರಿದ್ದಾರೆ ಎಂದರು.
There is a whisper of change in state politics again. In the state cabinet, there is doubt as to whether there will be further changes in the leadership of the state BJP. The reason for this is the statement of BJP general secretary BL Santosh. The leadership change is a strength for the BJP. The experiment has been successful in Gujarat. Many wings are emerging for this saying. He made this statement at a meeting of the Southern graduates on Saturday night at a private hotel in the city's private hotel.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm