ಬ್ರೇಕಿಂಗ್ ನ್ಯೂಸ್
02-05-22 01:22 pm HK Desk News ಕರ್ನಾಟಕ
ಚಿಕ್ಕಬಳ್ಳಾಪುರ, ಮೇ 2 : ಕಾಂಗ್ರೆಸ್ ಪಾರ್ಟಿ ಬಿಟ್ಟು ದೊಡ್ಡ ತಪ್ಪು ಮಾಡಿದೆ ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಹತಾಶ ಭಾವನೆಯಿಂದ ಮಾತನಾಡಿದ್ದಾರೆ.
ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಸಚಿವ ಎಂಟಿಬಿ, ನನ್ನ ಜೀವನದಲ್ಲಿ ಮಾಡಿದ ದೊಡ್ಡ ತಪ್ಪು ಕಾಂಗ್ರೆಸ್ ಪಕ್ಷ ಬಿಟ್ಟಿದ್ದು. ನನ್ನಿಂದ ಸಾರ್ವಜನಿಕರಿಗೆ ಒಳ್ಳೆಯದಾಗಿದೆ. ಜನರಿಗೋಸ್ಕರ ಒಳ್ಳೆಯದು ಮಾಡಬೇಕು ಅಂತ ರಾಜಕೀಯಕ್ಕೆ ಬಂದಿದ್ದೇನೆ. ಆದರೆ ನನ್ನ ನಿರೀಕ್ಷೆ ಈಡೇರಿಲ್ಲ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯಲ್ಲಿ ಮನದಾಳ ಹೇಳಿಕೊಂಡಿದ್ದಾರೆ.
ಮೂರು ವರ್ಷಗಳ ಹಿಂದೆ ಕಾಂಗ್ರೆಸ್ ಬಿಟ್ಟು ಇತರ 16 ಮಂದಿಯ ಜೊತೆ ಬಿಜೆಪಿ ಸೇರಿದ್ದ ಎಂಟಿಬಿ ನಾಗರಾಜ್, ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರಕಾರ ಉರುಳಲು ಕಾರಣವಾಗಿದ್ದರು. ಆನಂತರ ಬಿಜೆಪಿಯಿಂದ ಚುನಾವಣೆಗೆ ನಿಂತು ಸ್ಪರ್ಧಿಸಿ ಗೆದ್ದಿದ್ದರು. ಇದೀಗ ಬಿಜೆಪಿಯಲ್ಲಿ ಹಿರಿಯರು, ಕೆಲಸ ಮಾಡದ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಸ್ಥಾನ ನೀಡಲಾಗುತ್ತೆ ಎನ್ನುವ ಸುದ್ದಿ ಹಬ್ಬಿರುವಾಗಲೇ ಸ್ಥಾನ ಕಳಕೊಳ್ಳುವ ಭೀತಿಯಲ್ಲಿರುವ ಎಂಟಿಬಿ, ಕಾಂಗ್ರೆಸ್ ಬಿಟ್ಟು ತಪ್ಪು ಮಾಡಿದೆ ಎನ್ನುವ ಮೂಲಕ ಹೊರ ರಾಜಕೀಯ ದಾಳ ಉರುಳಿಸಿದ್ದಾರೆ. ಮುಂದಿನ ಚುನಾವಣೆ ಹೊತ್ತಿಗೆ ಎಂಟಿಬಿ ಮತ್ತೆ ಕಾಂಗ್ರೆಸ್ ಸೇರುತ್ತಾರೆಯೇ ಎಂಬ ವದಂತಿ ಹಬ್ಬಲು ಈ ಹೇಳಿಕೆ ಕಾರಣವಾಗಿದೆ.
MTB Nagaraj has made an explosive statement claiming that the Congress party has made a mistake in the BJP.MTB Nagaraju, speaking at Bagepalli in Chikkaballapur, said this was my first mistake in political life. I do not think I should make money in politics. Right now this statement
is hugely viral.
06-02-25 07:55 pm
Bangalore Correspondent
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
06-02-25 05:37 pm
HK News Desk
ಅಮೆರಿಕದಲ್ಲಿ ಅಕ್ರಮ ವಲಸಿಗರ ಗಡೀಪಾರು ; ಪ್ರಧಾನಿ ಮೋ...
06-02-25 02:21 pm
Kerala Suicide, Ragging: ಕೇರಳದಲ್ಲಿ 15ರ ಬಾಲಕ ಮ...
04-02-25 10:49 pm
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
06-02-25 10:16 pm
Mangalore Correspondent
Prasad Attavar, Saloon Attack, Mangalore: ಮಸಾ...
05-02-25 10:51 pm
SKG Bank robbery, Kinnigoli, Kotekar Robbery,...
05-02-25 10:43 pm
Musical program Swara Sanidhya, Mangalore; ಫೆ...
05-02-25 07:32 pm
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
06-02-25 09:32 pm
HK News Desk
Kalaburagi, Reels,weapons, Crime: ಕಲಬುರಗಿ ; ಶ...
06-02-25 04:35 pm
Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ...
06-02-25 12:00 pm
Bangalore crime, Illicit affair: ಶೀಲ ಶಂಕಿಸಿ ನ...
05-02-25 04:29 pm
Ullal Police Station, Mangalore, Crime: ಪಿಎಸ್...
03-02-25 05:46 pm