ಬ್ರೇಕಿಂಗ್ ನ್ಯೂಸ್
02-05-22 03:09 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 2 : ಪಿಎಸ್‌ಐ ಹುದ್ದೆ ಅಕ್ರಮದಲ್ಲಿ ಪ್ರಭಾವಿ ಸಚಿವರೊಬ್ಬರ ಹೆಸರು ಕೇಳಿಬಂದಿದೆ. ಸಚಿವರ ತಮ್ಮನೇ ಅಭ್ಯರ್ಥಿಯೊಬ್ಬನಿಂದ 80 ಲಕ್ಷ ರೂ. ಹಣ ಪಡೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಸಿಐಡಿ ತನಿಖೆಯ ವೇಳೆ ಅಭ್ಯರ್ಥಿಯೇ ಈ ಬಗ್ಗೆ ಮಾಹಿತಿ ನೀಡಿದ್ದಾನೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್, ಅಕ್ರಮದಲ್ಲಿ ಮುಖ್ಯಮಂತ್ರಿ ರೇಸ್ ನಲ್ಲಿರುವ ಸಚಿವರೊಬ್ಬರ ಹೆಸರು ಕೇಳಿಬಂದಿದೆ ಎಂದು ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಪ್ರಕರಣದಲ್ಲಿ ಪ್ರಭಾವಿ ಸಚಿವರೊಬ್ಬರ ಹೆಸರು ಕೇಳಿಬಂದಿದೆ. ಆ ಮಂತ್ರಿ ಅಥವಾ ಅವರ ತಮ್ಮ ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ನಾನು ಹೇಳಲ್ಲ. ಅವರ ಸಂಬಂಧಿಕರು ಭಾಗಿಯಾಗಿದ್ದಾರೆ. ನನಗೆ ಬಂದಿರುವ ಮಾಹಿತಿ ಪ್ರಕಾರ ಆ ಸಚಿವರು ಸಿಎಂ ರೇಸ್ ನಲ್ಲಿದ್ದಾರೆ. ಅವರು ಸಿಎಂ ರೇಸ್ ನಲ್ಲಿರುವುದರಿಂದ ಅವರ ಹೆಸರನ್ನು ಬಹಿರಂಗವಾಗಿ ಹೇಳದಂತೆ ಕೆಲವರು ನನ್ನ ಬಳಿ ಹೇಳಿದ್ದಾರೆ. ಆದರೆ ಆ ಸಚಿವರು ಸಿಐಡಿ ತನಿಖೆಗೆ ಮುಂದಾದಾಗ ಸ್ವತಃ ಕರೆ ಮಾಡಿ ತನಿಖೆ ನಡೆಸದಂತೆ ಅಧಿಕಾರಿಗಳಿಗೆ ತಡೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಬದ್ಧತೆ ಇದ್ದರೆ ಪ್ರಕರಣದ ಸಂಪೂರ್ಣ ತನಿಖೆಗೆ ಆದೇಶ ನೀಡಲಿ ಎಂದು ಆಗ್ರಹಿಸಿದರು.
ಇದು ಸಿಎಂ ಬಸವರಾಜ್ ಬೊಮ್ಮಾಯಿ ಕಾಲದಲ್ಲಾದ ಅಕ್ರಮವಲ್ಲ. ಅಥವಾ ಸಿಎಂ ಬೊಮ್ಮಾಯಿ ಅವರು ಕೂಡ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲ್ಲ. ಪ್ರಕರಣದಲ್ಲಿ ಭಾಗಿಯಾದ ಅಭ್ಯರ್ಥಿಗಳ ಪೋಸ್ಟಿಂಗ್ ಕೂಡ ಆಗಿದೆ. ಮಾಹಿತಿ ಪ್ರಕಾರ ಮಾಗಡಿಯ ಮೂವರು ಅಭ್ಯರ್ಥಿಗಳು ಇದ್ದಾರೆ. ಪೋಸ್ಟಿಂಗ್ ಆದ ಅಭ್ಯರ್ಥಿಗಳನ್ನು ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದಾರೆಯೇ ? ಯಾಕೆ ನಡೆಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ರಾಮನಗರದ ಉಸ್ತುವಾರಿ ಸಚಿವರು ನಮಗೆ ಗಂಡಸ್ತನದ ಪ್ರಶ್ನೆ ಮಾಡಿದ್ದರು. ಸಿಎಂ ಬೊಮ್ಮಾಯಿ ಎದುರಲ್ಲೇ ಇಂತಹ ಮಾತುಗಳನ್ನು ಆಡಿದ್ದರು. ನಾವ್ಯಾರು ಗಂಡಸರಲ್ಲ, ಆ ಸಚಿವರೊಬ್ಬರೇ ಗಂಡಸರು. ನಾನು, ನನ್ನ ತಮ್ಮ, ಅನಿತಾ ಕುಮಾರಸ್ವಾಮಿಯವರು ರಾಮನಗರದಲ್ಲಿ ಅವರ ಗಂಡಸ್ತನ ನೋಡಿ ಗಡ ಗಡ ನಡುಗುತ್ತಿದ್ದೇವೆ. ತಾಕತ್ತಿರುವ ಸಚಿವರು ಪಿಎಸ್‌ಐ ಅಕ್ರಮ ತನಿಖೆ ವಿಚಾರದಲ್ಲಿ ತಾಕತ್ತು ತೋರಿಸಲಿ ಎಂದು ಸಚಿವ ಅಶ್ವತ್ಥನಾರಾಯಣ ಹೆಸರು ಹೇಳದೆಯೇ ಡಿಕೆಶಿ ಸವಾಲು ಹಾಕಿದ್ದಾರೆ.
Karnataka PSI Exam scam, Minister Ashwath Narayan name has been revealed during the enquiry. Minister dr ashwath narayan rejects to talk about allegations of ugrappa
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm