ಬಿಟ್ ಕಾಯಿನ್ ಹಗರಣ ತನಿಖೆಯಾದಲ್ಲಿ ರಾಜ್ಯಕ್ಕೆ ಮೂರನೇ ಸಿಎಂ ಬರಲಿದ್ದಾರೆ, ಹಲವರು ಕಂಬಿ ಸೇರಲಿದ್ದಾರೆ ; ಪ್ರಿಯಾಂಕ ಖರ್ಗೆ ಪುನರುಚ್ಚಾರ 

02-05-22 09:16 pm       HK Desk News   ಕರ್ನಾಟಕ

 ಬಿಟ್ ಕಾಯಿನ್ ಪ್ರಕರಣದ ತನಿಖೆ ಚುರುಕುಗೊಂಡರೆ ರಾಜ್ಯಕ್ಕೆ 3ನೇ ಸಿಎಂ ಸಿಗಲಿದ್ದಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಪುನರುಚ್ಚರಿಸಿದ್ದಾರೆ. 

ಮೈಸೂರು, ಮೇ 2 : ಬಿಟ್ ಕಾಯಿನ್ ಪ್ರಕರಣದ ತನಿಖೆ ಚುರುಕುಗೊಂಡರೆ ರಾಜ್ಯಕ್ಕೆ 3ನೇ ಸಿಎಂ ಸಿಗಲಿದ್ದಾರೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಪುನರುಚ್ಚರಿಸಿದ್ದಾರೆ. 

ಬಿಟ್ ಕಾಯಿನ್ ಪ್ರಕರಣದಲ್ಲಿ ಯಾವುದೇ ರೀತಿಯ ತನಿಖೆ ನಡೆಯುತ್ತಿಲ್ಲ. ಅಂದೂ ಹೇಳಿದ್ದೆ, ಇಂದೂ ಹೇಳುತ್ತಿದ್ದೇನೆ.‌ ಬಿಟ್ ಕಾಯಿನ್ ಹಗರಣದ ಬಗ್ಗೆ ಪಾರದರ್ಶಕ ತನಿಖೆಯಾದರೆ ನಮ್ಮ ರಾಜ್ಯಕ್ಕೆ ಬಿಜೆಪಿಯಿಂದ 3ನೇ ಮುಖ್ಯಮಂತ್ರಿ ಸಿಗಲಿದ್ದಾರೆ. ಹಲವರು ಕಂಬಿಯೊಳಗೆ ಹೋಗಲಿದ್ದಾರೆ ಎಂದು ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ‌

Bitcoin is now official currency in Central African Republic | Crypto News  | Al Jazeera

ಪಿಎಸ್ಐ ತನಿಖೆ ಕಲಬುರ್ಗಿಗೆ ಸೀಮಿತಗೊಳಿಸಬೇಡಿ ! 

ಪಿಎಸ್‌ಐ ಪರೀಕ್ಷೆ ಹಗರಣದ ತನಿಖೆ ಕಲಬುರ್ಗಿಗೆ ಮಾತ್ರ ಸೀಮಿತವಾಗಬಾರದು. ಸರ್ಕಾರ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸದೆ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದೆ. ಈವರೆಗೂ ಒಂದೇ ಪರೀಕ್ಷಾ ಸೆಂಟರ್ ವಿರುದ್ಧ ಎಫ್.ಐ.ಆರ್. ಮಾಡಿದ್ದಾರೆ. ಬೇರೆ ಬೇರೆ ಪರೀಕ್ಷಾ ಕೇಂದ್ರಗಳ ಮೇಲೆ ತನಿಖೆಯಾಗಬೇಕು. ಬೆಂಗಳೂರಿನ ಪರೀಕ್ಷಾ ಕೇಂದ್ರಗಳ ಮೇಲೆ ತನಿಖೆಯಾಗಬೇಕು. ಪರೀಕ್ಷೆ ಬರೆದ ಅಭ್ಯರ್ಥಿಗಳು ಹಲವು ಪರೀಕ್ಷಾ ಕೇಂದ್ರಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ ತನಿಖೆ ಮಾತ್ರ ನಡೆಯುತ್ತಿಲ್ಲ ಎಂದು ಪ್ರಿಯಾಂಕ ಖರ್ಗೆ ಆಕ್ಷೇಪಿಸಿದ್ದಾರೆ. 

full information about psi exam scam in Karnataka | Explained: ಏನಿದು PSI  Exam Scam? ಇದರ ಆಳ, ಅಗಲ ಏನು? ಈವರೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ– News18 Kannada

ಮರು ಪರೀಕ್ಷೆ ಮಾಡಬೇಕೆಂದಿರುವ ಸರ್ಕಾರಕ್ಕೆ ಈವರೆಗೂ ಎಲ್ಲೆಲ್ಲಿ ಅಕ್ರಮ ಆಗಿದೆ ಎನ್ನುವುದನ್ನು ಪತ್ತೆ ಮಾಡಲು ಸಾಧ್ಯವಾಗಿಲ್ಲ. ಆಯ್ಕೆಯಾದ 545 ಮಂದಿ ಒಎಂಆರ್ ಶೀಟ್ ತರಿಸಿಕೊಂಡಿದ್ದು  ಯಾಕೆ..? ಇಲ್ಲಿ ಸರ್ಕಾರದ ದಡ್ಡತನ ಎದ್ದು ಕಾಣುತ್ತಿದೆ. 300 ಜನರು ಅಕ್ರಮವಾಗಿ ಪ್ರವೇಶ ಮಾಡಿದ್ದಾರೆ ಎಂದು ಅವರೇ ಹೇಳಿದ್ದಾರೆ. ಆದರೆ ಸರ್ಕಾರ ಇಲ್ಲಿಯವರೆಗೆ ಎಷ್ಟು ಜನರನ್ನು ಅರೆಸ್ಟ್ ಮಾಡಿದ್ದಾರೆ. ಒಂದೆರಡು ಕಿಂಗ್ ಪಿನ್ ಸಿಕ್ಕರೆ ಅಲ್ಲಿಗೇ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಅದಕ್ಕೆ ನಾವು ಅವಕಾಶ ಕೊಡಲ್ಲ ಎಂದು ಶಾಸಕ ಪ್ರಿಯಾಂಕ ಖರ್ಗೆ ಹೇಳಿದರು.

There is a lot going on in the state of volume reconstruction. Many unimaginable developments are taking place in the BJP itself. Meanwhile, former minister Priyanka Kharg has given a shocking statement. "If the investigation into the BitCoin case expedites, the state will get a third CM," Congress MLA Priyank Kharg said. Basavaraja Bommai has made a statement that he will get a new CM.