ಜನತಾ ಪರಿವಾರದ ಹಿರಿಯ ಮುಖಂಡ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ ; ಅಮಿತ್ ಷಾ ನೇತೃತ್ವದಲ್ಲಿ ಕೇಸರಿ ಪಾಳಯಕ್ಕೆ 

03-05-22 02:28 pm       Bangalore Correspondent   ಕರ್ನಾಟಕ

ಜನತಾ ಪರಿವಾರದ ಹಿರಿಯ ಮುಖಂಡ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. 

ಬೆಂಗಳೂರು, ಮೇ 3 : ಜನತಾ ಪರಿವಾರದ ಹಿರಿಯ ಮುಖಂಡ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. 

ತಾಜ್ ವೆಸ್ಟೆಂಡ್ ಹೋಟೆಲ್​ನಲ್ಲಿ ಅಮಿತ್ ಷಾ ಅವರೇ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಸೇರ್ಪಡೆ ಮಾಡಿದರು. ಈ ವೇಳೆ, ಮಾತನಾಡಿದ ಬಸವರಾಜ ಹೊರಟ್ಟಿ, ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ. ಬಿಜೆಪಿಗೆ ಬರುವುದು ಒಳ್ಳೆಯದು ಎಂದು ಅಮಿತ್ ಶಾ ಹೇಳಿದರು. ಜೆಡಿಎಸ್ ಬಗ್ಗೆ ನನಗೆ ಒಳ್ಳೆಯ ಅಭಿಪ್ರಾಯವಿದೆ. ಆದರೆ ಮತದಾರರ ಅಭಿಪ್ರಾಯದಂತೆ ಬಿಜೆಪಿ ಸೇರ್ಪಡೆಯಾಗುತ್ತಿದ್ದೇನೆ ಎಂದು ತಿಳಿಸಿದರು.

K'taka Legislative Council Chairman Basavraj Horatti meets Shah, to join  BJP - The Federal

ಬಿಜೆಪಿಗೆ ಹೊಸ ಮುತ್ಸದ್ಧಿ ಬಂದಿದ್ದಾರೆ.. 

ಹೊರಟ್ಟಿ ಸೇರ್ಪಡೆ ಬಗ್ಗೆ ಮಾತನಾಡಿದ ಸಚಿವ ಆರ್. ಅಶೋಕ್, 7 ಬಾರಿ ಎಂಎಲ್‌ಎ ಆಗಿ ಹಲವು ಹುದ್ದೆಗಳನ್ನ ನಿಭಾಯಿಸಿದ ಹೊರಟ್ಟಿಯವರು ಸರಳ ಸಜ್ಜನ ರಾಜಕಾರಣಿ. ಇವರಿಂದ ಬಿಜೆಪಿಗೆ ಒಂದು ವರ್ಚಸ್ಸು ಬರುತ್ತದೆ. ಎಸ್‌ಎಂ ಕೃಷ್ಣರಂತವರು ಬಂದಿದ್ದಾರೆ. ಇವತ್ತು ಮತ್ತೊಬ್ಬ ಮುತ್ಸದ್ಧಿ ಪಕ್ಷ ಸೇರಿದ್ದಾರೆ. ಮುಂದಿನ ಚುನಾವಣೆಗೆ ಇದು ದಿಕ್ಸೂಚಿ. ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಬರಬೇಕು ಅಂತಾ ಜನತಾ ಪರ್ವ ಶುರು ಮಾಡಿದ್ದಾರೆ ಎಂದರು.

Revenue Minister R Ashoka tests negative, celebrates birthday in  Chikkamagaluru

ಇದೇ ತಿಂಗಳ 11ಕ್ಕೆ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ. ಪರಿಷತ್ ಚುನಾವಣೆಯಲ್ಲಿ ಮುಂದಿನ ಬಾರಿ ಹೊರಟ್ಟಿ ಅವರೇ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ. 

Karnataka CM asks officials to expedite disposal of SCs/STs atrocity cases  | Cities News,The Indian Express

Opposition slams Union Minister Pralhad Joshi over NEET remark amid Ukraine  crisis

If God should care for everything, why have CM?' | Deccan Herald

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವರಾದ ಅರಗ ಜ್ಞಾನೆಂದ್ರ, ಆರ್ ಅಶೋಕ್, ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮತ್ತು ಇತರರು ಉಪಸ್ಥಿತರಿದ್ದರು.

Legislative Council chairman and JD(S) leader Basavaraj Horatti on Tuesday joined the BJP in the presence of Union home minister Amit Shah in Bengaluru. After joining the BJP, Horatti said that he will be resigning as Council chairman. "I have good opinion about JD(S), but due to changed situation and voters' belief, I have joined the BJP. I will be resigning as Legislative Council Chairman on May 11."