ಬ್ರೇಕಿಂಗ್ ನ್ಯೂಸ್
05-05-22 01:45 pm HK Desk News ಕರ್ನಾಟಕ
ಕಲಬುರಗಿ, ಮೇ 5: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಕರ್ತವ್ಯ ಲೋಪ ಎಸಗಿದ್ದಲ್ಲದೆ, ಅಕ್ರಮಕ್ಕೆ ಸಹಕಾರ ನೀಡಿದ್ದಾರೆ ಎನ್ನಲಾದ ಪೊಲೀಸ್ ಅಧಿಕಾರಿಗಳ ವಿರುದ್ಧ ಚಾಟಿ ಬೀಸಲಾಗಿದೆ. ನೇಮಕಾತಿ ಅಕ್ರಮದಲ್ಲಿ ಪೊಲೀಸ್ ಅಧಿಕಾರಿಗಳ ಶಾಮೀಲಾತಿ ಇಲ್ಲದೆ ಹಗರಣ ನಡೆಯಲು ಸಾಧ್ಯವಿಲ್ಲವೆಂದೇ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಆ ಭಾಗದಲ್ಲಿ ಉಸ್ತುವಾರಿ ಆಗಿದ್ದ ಪೊಲೀಸ್ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದ್ದು ಪರೀಕ್ಷಾ ವಿಭಾಗದ ಇನ್ ಚಾರ್ಜ್ ಆಗಿದ್ದ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದಾರೆ.
ಕಲಬುರಗಿಯಲ್ಲಿ ಪರೀಕ್ಷಾ ನೇಮಕಾತಿ ವಿಭಾಗದ ಉಸ್ತುವಾರಿ ಹೊಂದಿದ್ದ ಡಿವೈಎಸ್ಪಿ ಆರ್.ಆರ್.ಹೊಸಮನಿ ಮತ್ತು ಇನ್ ಸ್ಪೆಕ್ಟರ್ ದಿಲೀಪ್ ಸಾಗರ್ ಅವರನ್ನು ಅಮಾನತು ಮಾಡಲಾಗಿದೆ. ಹೊಸಮನಿ ಫಿಂಗರ್ ಪ್ರಿಂಟ್ ವಿಭಾಗದಲ್ಲಿ ಡಿವೈಎಸ್ಪಿ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ದಿಲೀಪ್ ಸಾಗರ್, ಕಲಬುರ್ಗಿ ಮಹಿಳಾ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದರು. ದೊಡ್ಡ ಮಟ್ಟದ ಅಕ್ರಮ ಆಗಿರುವ ಜ್ಞಾನಜ್ಯೋತಿ ಪರೀಕ್ಷಾ ಕೇಂದ್ರದಲ್ಲಿ ದಿಲೀಪ್ ಸಾಗರ್ ಉಸ್ತುವಾರಿಯಾಗಿದ್ದರು.
ಇದೇ ವೇಳೆ, ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಹಕರಿಸಿದ್ದ ಆರೋಪದಲ್ಲಿ ಬಂಧಿಸಲ್ಪಟ್ಟಿದ್ದ ಶಾಸಕ ಎಂ.ವೈ.ಪಾಟೀಲ್ ಅವರ ಗನ್ ಮ್ಯಾನ್, ಪೊಲೀಸ್ ಪೇದೆ ಹಯ್ಯಾಳಿ ದೇಸಾಯಿಯನ್ನೂ ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಕಳೆದ ಒಂದು ವಾರದ ಹಿಂದೆಯೇ ಸಿಐಡಿಯಿಂದ ಬಂಧಿಸಲ್ಪಟ್ಟಿದ್ದ ಹಯ್ಯಾಳಿ ದೇಸಾಯಿಯನ್ನು ಅಧಿಕಾರಿಗಳು ಡ್ರಿಲ್ ಗೆ ಒಳಪಡಿಸಿದ್ದಾರೆ. ಪ್ರಮುಖ ಆರೋಪಿ ಆರ್.ಡಿ.ಪಾಟೀಲ್ ಮತ್ತು ಮಂಜುನಾಥ್ ಮೇಳಕುಂದಿ ಜೊತೆಗಿನ ಸಂಪರ್ಕ ಮತ್ತು ಹಣದ ವಹಿವಾಟು ನಡೆಸಿರುವ ಖಚಿತ ಸಾಕ್ಷ್ಯ ಸಿಕ್ಕ ಬಳಿಕ ಹಯ್ಯಾಳಿ ದೇಸಾಯಿಯನ್ನು ಪೊಲೀಸ್ ಪೇದೆ ಕರ್ತವ್ಯದಿಂದ ಮುಕ್ತಗೊಳಿಸಲಾಗಿದೆ.
ಇದೇ ಸಂದರ್ಭದಲ್ಲಿ ಅಕ್ರಮ ಪ್ರಕರಣದ ಕಿಂಗ್ ಪಿನ್ ಎನ್ನಲಾಗಿರುವ ಕಾಂಗ್ರೆಸ್ ಮುಖಂಡ ಆರ್.ಡಿ.ಪಾಟೀಲ್ ಜೊತೆ ನಿಕಟ ನಂಟು ಹೊಂದಿದ್ದ ಆರೋಪದಲ್ಲಿ ಲಿಂಗಸುಗೂರು ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿಯನ್ನು ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಸಿಐಡಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಸಾಲಿಯನ್ನು ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ವಿಚಾರಣೆಗೆ ಒಳಪಡಿಸಿದ್ದು ಆರೋಪಿಗಳ ಜೊತೆ ನಂಟು ಸಾಬೀತಾದಲ್ಲಿ ಅಮಾನತು ಶಿಕ್ಷೆ ನೀಡುವ ಸಾಧ್ಯತೆಯಿದೆ. ಈ ಹಿಂದೆ ಅಳಂದ ವಿಭಾಗದಲ್ಲಿ ಡಿವೈಎಸ್ಪಿ ಆಗಿದ್ದ ಮಲ್ಲಿಕಾರ್ಜುನ ಸಾಲಿ, ಕಳೆದ ಎಪ್ರಿಲ್ 30ರಂದು ಲಿಂಗಸುಗೂರು ಡಿವೈಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ್ದರು.
Illegal PSI appointment, unlawful actions to prevent suspension of officers.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm