ಬ್ರೇಕಿಂಗ್ ನ್ಯೂಸ್
09-05-22 07:38 pm Bengalore Correspondnt ಕರ್ನಾಟಕ
ಬೆಂಗಳೂರು, ಮೇ 9: ಆಜಾನ್ ಹೆಸರಲ್ಲಿ ಸಮಾಜದಲ್ಲಿ ವಿಷ ಬೀಜ ಬಿತ್ತುವವರು ಭಯೋತ್ಪಾದಕರು. ಎರಡು ಧರ್ಮಗಳ ನಡುವೆ ವಿಷ ಬಿತ್ತಿ ಸಮಾಜದಲ್ಲಿ ದ್ವೇಷ ಹರಡುವ ಮಂದಿಯನ್ನು ದೇಶದ್ರೋಹ ಕಾಯ್ದೆಯಡಿ ಬಂಧಿಸಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದ್ದಾರೆ.
ಸಮಾಜದಲ್ಲಿ ದ್ವೇಷ ಬಿತ್ತುವುದನ್ನು ಬಂಧಿಸುವ ಬದಲು ಬಿಜೆಪಿ ಸರಕಾರ ಸಮರ್ಥನೆ ಮಾಡುತ್ತಿದೆ. ಸರಕಾರದ ವೈಫಲ್ಯ ಮುಚ್ಚಿ ಹಾಕಲು ಇಂತಹ ಸಮಾಜ ವಿರೋಧಿ ಕೃತ್ಯಗಳನ್ನು ಬಿಜೆಪಿ ಬೆಂಬಲಿಸುತ್ತಿದೆ. ಆಮೂಲಕ ಜ್ವಲಂತ ವಿಚಾರಗಳು ಜನರು ಚರ್ಚೆ ಮಾಡದಂತೆ ಮಾಡುವ ಪ್ರಯತ್ನ. ಬಿಜೆಪಿ ಮಂದಿ ಆರೆಸ್ಸೆಸ್ ಕೈಗೊಂಬೆಗಳಾಗಿದ್ದಾರೆ. ಸಂಘ ಪರಿವಾರ ಹೇಳಿದಂತೆ ನಡೆಯುತ್ತಿದ್ದಾರೆ. ದ್ವೇಷ ಹರಡುವ ಮಂದಿಯನ್ನು ಮೊದಲು ಬಂಧಿಸಬೇಕು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಶ್ರೀರಾಮ ಸೇನೆಯ ವರಿಷ್ಠ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಮಸೀದಿಗಳ ಆಜಾನ್ ವಿರೋಧಿಸಿ ಅಭಿಯಾನ ನಡೆಸಲಾಗುತ್ತಿದ್ದು ದೇವಸ್ಥಾನ, ಮಂದಿರಗಳ ಆವರಣದಲ್ಲಿ ಆಜಾನ್ ಕೂಗುವ ಸಂದರ್ಭದಲ್ಲೇ ಧ್ವನಿವರ್ಧಕ ಬಳಸಿ ಹನುಮಾನ್ ಚಾಲೀಸಾ ಪಠಣ ಹಾಕಲಾಗುತ್ತಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ಆದೇಶ ಇದ್ದರೂ, ರಾಜ್ಯ ಸರಕಾರ ಪಾಲನೆ ಮಾಡದೇ ಇರುವುದರಿಂದ ಹಿಂದು ಸಂಘಟನೆಗಳು ಒತ್ತಡ ಹೇರುವ ಪ್ರಯತ್ನ ಮಾಡುತ್ತಿದೆ. ಆದರೆ ಈ ನಡೆಯನ್ನು ಕಾಂಗ್ರೆಸ್ ಖಂಡಿಸಿದ್ದು, ಇದೀಗ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಪರೋಕ್ಷವಾಗಿ ಹಿಂದು ಸಂಘಟನೆಗಳ ನಾಯಕರನ್ನು ಭಯೋತ್ಪಾದಕರು ಎಂದು ಜರೆದಿದ್ದಾರೆ.
ಇದೇ ವೇಳೆ, ರಾಜ್ಯದ ಹಲವು ಕಡೆ ಶ್ರೀರಾಮ ಸೇನೆ ಮತ್ತು ಇತರ ಹಿಂದು ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಆಜಾನ್ ಸಂದರ್ಭದಲ್ಲಿ ಅಭಿಯಾನದ ಹೆಸರಲ್ಲಿ ಸಂಘರ್ಷಕ್ಕೆ ದಾರಿಯಾಗುತ್ತದೆ ಎಂದು ಹೇಳಿ ಪೊಲೀಸರು ಬಲ ಪ್ರಯೋಗ ಮಾಡಿದ್ದಾರೆ. ಆದರೆ, ಪ್ರಮೋದ್ ಮುತಾಲಿಕ್ ಮಾತ್ರ ಹಿಂದು ಸಂಘಟನೆಗಳ ಅಭಿಯಾನ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.
The Opposition leader in the Legislative Council B.K. Hariprasad on Monday courted controversy when he said that those who are campaigning against Azaan are terrorists.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am