ಬ್ರೇಕಿಂಗ್ ನ್ಯೂಸ್
10-05-22 04:17 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 10 : ಕಳೆದ ಬಾರಿ ಮೈತ್ರಿ ಸರಕಾರ ಕೆಡವಿ, ಬಿಜೆಪಿ ಸರಕಾರ ರಚಿಸಲು ಕಾರಣವಾಗಿದ್ದ ಪೈಕಿ ಕೆಲವರು ಮತ್ತೆ ಕಾಂಗ್ರೆಸ್ ಬಾಗಿಲು ಬಡಿಯುವ ಸಾಧ್ಯತೆ ಕಂಡುಬಂದಿದೆ. ಇದೇ ವೇಳೆ, ಬಿಜೆಪಿ ಸರಕಾರ ರಚನೆ ಸಂದರ್ಭದಲ್ಲಿ ಯಡಿಯೂರಪ್ಪ ಜೊತೆಗೆ ಗುರುತಿಸಿಕೊಂಡಿದ್ದ ಪಕ್ಷೇತರ ಶಾಸಕ ಎಚ್.ನಾಗೇಶ್ ದಿಢೀರ್ ಆಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿ ಕುತೂಹಲ ಮೂಡಿಸಿದ್ದಾರೆ.
ಬೆಂಗಳೂರಿನ ಶಿವಾನಂದ ವೃತ್ತದ ಸಮೀಪ ಇರುವ ಸಿದ್ದರಾಮಯ್ಯ ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿದ ಮುಳಬಾಗಿಲು ಪಕ್ಷೇತರ ಶಾಸಕ ಎಚ್.ನಾಗೇಶ್ ಮಾಧ್ಯಮಗಳಿಗೆ ಆಹಾರವಾಗಿದ್ದಾರೆ. ಈ ವೇಳೆ, ಮಾಧ್ಯಮದ ಪ್ರಶ್ನೆಗೆ ನಾಗೇಶ್ ಸ್ಪಷ್ಟ ಉತ್ತರ ನೀಡಿಲ್ಲ.
ಪ್ರಸ್ತುತ ಸರ್ಕಾರದಲ್ಲಿ ಬಿಜೆಪಿ ಜೊತೆ ಕೈಜೋಡಿಸಿರುವ ಹೆಚ್.ನಾಗೇಶ್ ಹಿಂದೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. ಜೆಡಿಎಸ್ ಬೆಂಬಲದೊಂದಿಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ನಾಗೇಶ್ ಕೆಲ ತಿಂಗಳ ಅವಧಿಗೆ ಮಾತ್ರ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಸಂದರ್ಭ ಇವರನ್ನು ಕೈಬಿಡಲಾಗಿತ್ತು.
2019ರಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ಸಂದರ್ಭ ನಾಗೇಶ್ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದರು. ಈ ಸಂದರ್ಭದಲ್ಲಿ ಅಬಕಾರಿ ಸಚಿವರಾಗಿ ಅವರಿಗೆ ಖಾತೆ ನೀಡಲಾಗಿತ್ತು. ಆನಂತರ 2021ರಲ್ಲಿ ಸಚಿವ ಸಂಪುಟ ವಿಸ್ತರಣೆ ಸಂದರ್ಭ ಅವರನ್ನು ಕೈಬಿಡಲಾಗಿತ್ತು. ನಂತರ ರಚನೆಯಾದ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ ಅವರಿಗೆ ಅವಕಾಶ ಸಿಕ್ಕಿಲ್ಲ.
ಕಾಂಗ್ರೆಸ್ ಸೇರುವ ಇಂಗಿತ
ಇದೀಗ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ಗೆ ಪರ್ಯಾಯವಾಗಿ ಕಾಂಗ್ರೆಸ್ ಪ್ರಬಲವಾಗುತ್ತಿದ್ದು, ಈ ಭಾಗದ ಪ್ರಭಾವಿ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪಕ್ಷಕ್ಕೆ ಸೇರುವ ಒಲವು ವ್ಯಕ್ತಪಡಿಸಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ಜೊತೆಗೆ ಸಿದ್ದರಾಮಯ್ಯ ಭೇಟಿಯಾಗಿ ಚರ್ಚಿಸಿದ್ದಾರೆ. ಈ ಸಂದರ್ಭ ಕಾಂಗ್ರೆಸ್ ಸೇರುವ ಇಂಗಿತ ವ್ಯಕ್ತಪಡಿಸಿದ್ದು, ಇದಕ್ಕೆ ಸಿದ್ದರಾಮಯ್ಯ ಪಕ್ಷದ ನಾಯಕರ ಜೊತೆ ಚರ್ಚಿಸಿ ಸೂಕ್ತ ಸಂದರ್ಭದಲ್ಲಿ ತೀರ್ಮಾನ ತಿಳಿಸುವುದಾಗಿ ಭರವಸೆ ನೀಡಿದ್ದಾರೆ ಎಂಬ ಮಾಹಿತಿ ಇದೆ.
ಕ್ಷೇತ್ರದ ಜನ ಹೇಳಿದಂತೆ ನಿರ್ಧಾರ
ಸಿದ್ದರಾಮಯ್ಯ ಭೇಟಿ ಬಳಿಕ ಪಕ್ಷೇತರ ಶಾಸಕ ಹೆಚ್.ನಾಗೇಶ್ ಮಾತನಾಡಿ, ವರುಣಾ ಕ್ಷೇತ್ರದ ಕೆಲಸದ ನಿಮಿತ್ತ ಬಂದಿದ್ದೆ. ನಮ್ಮ ಸಂಬಂಧಿಯೊಬ್ಬರ ಕೆಲಸ ಆಗುವುದಿತ್ತು. ಹಾಗಾಗಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಭೇಟಿಗೆ ಬಂದೆ. ಅವರಿಲ್ಲ, ಹೀಗಾಗಿ ವಾಪಸ್ ಹೋಗ್ತಿದ್ದೇನೆ. ಪ್ರತಿಪಕ್ಷ ನಾಯಕರಲ್ವೇ, ಗೌರವ ಕೊಡಲು ಬಂದಿದ್ದೆ. ನಾನು ಬಿಜೆಪಿ ಜೊತೆಯೇ ಗುರ್ತಿಸಿಕೊಂಡಿದ್ದೇನೆ. ನೊಡೋಣ, ಇನ್ನೂ ಚುನಾವಣೆಗೆ ಸಮಯವಿದೆ. ಕ್ಷೇತ್ರದ ಜನ ಏನ್ ಹೇಳ್ತಾರೆ ಅದರಂತೆ ಮಾಡುತ್ತೇನೆ ಎಂದು ಕಾಂಗ್ರೆಸ್ ಸೇರ್ಪಡೆ ಬಗ್ಗೆ ದ್ವಂದ್ವ ಹೇಳಿಕೆ ನೀಡಿದ್ದಾರೆ.
The suspicion of non-party MLA H Nagesh is now back in the political sphere as he ties up with the BJP. It is doubtful that H Nagesh, who is a minister in the BSY government, met Siddaramaiah. H. Nagesh, Bangarapet MLA Narayanaswamy, had come to meet Siddaramaiah. That being said, there has been talk of Congress joining.
28-11-24 05:04 pm
Bangalore Correspondent
MLA Gaviyappa, DK Shivakumar: ಯಾವುದೇ ಕಾರಣಕ್ಕೂ...
26-11-24 10:46 pm
Shivamogga, Monkey fever, Dinesh Gundu Rao: ಮ...
26-11-24 10:23 pm
BJP, Vijayendra: ಉಪ ಚುನಾವಣೆ ಸೋಲು ; ಪಕ್ಷದ ಕಾರ್...
26-11-24 06:56 pm
MLA Gaviyappa, Congress: ಗ್ಯಾರಂಟಿ ಸ್ಕೀಂನಿಂದಾಗ...
26-11-24 06:11 pm
27-11-24 02:00 pm
HK News Desk
ರಸ್ತೆ ಬದಿ ಮಲಗಿದ್ದ ಅಲೆಮಾರಿ ಗುಂಪಿನ ಮೇಲಿಂದ ಹರಿದ...
27-11-24 12:36 pm
ಕ್ಯುಆರ್ ಕೋಡ್ ಸಹಿತ ಹೊಸ ನಮೂನೆಯ ಪ್ಯಾನ್ 2.0 ಜಾರಿ...
26-11-24 09:43 pm
BJP Devendra Fadnavis, Eknath Shinde: ಮಹಾರಾಷ್...
26-11-24 07:32 pm
ಪ್ರವಾಸೋದ್ಯಮ ಇಲಾಖೆಗೆ ನಿಗದಿಪಡಿಸಿದ್ದ ದರ್ಶನ ಟಿಕೆಟ...
23-11-24 11:07 pm
28-11-24 06:05 pm
Mangalore Correspondent
VHP, Mangalore, Bangladesh: ಬಾಂಗ್ಲಾದೇಶದಲ್ಲಿ ಹ...
28-11-24 03:24 pm
Belthangady suicide, Crime, Mangalore; ನಂಬಿಸಿ...
28-11-24 02:13 pm
Mangalore, Anupam Agarwal, Ramanatha Rai: ರಸ್...
28-11-24 01:56 pm
ಸ್ಪೀಕರ್ ಆಗಿ ಹತ್ತು ದೇಶ ಸುತ್ತಿದ ಯುಟಿ ಖಾದರ್ ; ಜ...
28-11-24 01:25 pm
27-11-24 03:36 pm
HK News Desk
Mangalore, Robbery, Crime : ಕೊಲ್ಯದ ಜಾಯ್ ಲ್ಯಾಂ...
27-11-24 01:11 pm
Mangalore crime, ACP Dhanya Nayak, Drugs: ಎಸಿ...
26-11-24 03:10 pm
ಹುಬ್ಬಳ್ಳಿ ದರೋಡೆ ಪ್ರಕರಣದಲ್ಲಿ ಮಂಗಳೂರು ನಂಟು ; ಉಳ...
25-11-24 06:17 pm
Honeytrap Bangalore, Crime, Udupi: ಪ್ರೊಫೆಸರ್...
24-11-24 04:33 pm