ಬ್ರೇಕಿಂಗ್ ನ್ಯೂಸ್
10-05-22 08:41 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 10 : ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಸಿಕ್ಕಿಬಿದ್ದಿರುವ ಕೆಎಸ್ ಆರ್ ಪಿ ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್ ಬಿರಾದಾರ್ ಈಗ ಜೈಲು ಹಕ್ಕಿ. ವಿಶೇಷ ಅಂದ್ರೆ, ಮನೇಲಿ ಜೊತೆಗಿರುತ್ತಿದ್ದ ವೈಜನಾಥ್ ಹೆಂಡ್ತಿಯೇ ಜೈಲಿನಲ್ಲಿ ಪತಿಯನ್ನು ಕಾವಲು ಕಾಯುವ ದುರ್ಗತಿ ಬಂದಿದೆ.
ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಕೆಎಸ್‌ಆರ್‌ಪಿ ಅಸಿಸ್ಟೆಂಟ್ ಕಮಾಂಡೆಂಟ್ ವೈಜನಾಥ್ ಬಿರಾದರ್ ಅನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ವಿಚಾರಣೆ ಮುಗಿಸಿ ಕಲಬುರಗಿ ಜೈಲಿಗೆ ಕಳುಹಿಸಿದ್ದಾರೆ. ವೈಜನಾಥ್ ಬಿರಾದರ್ ಪತ್ನಿ ಸುನಂದಾ ರೇವೂರ್ ಕಲಬುರಗಿ ಜೈಲಿನಲ್ಲಿ ಜೈಲರ್ ಆಗಿದ್ದು ಪತಿಯನ್ನು ತನ್ನದೇ ಸುಪರ್ದಿಯ ಜೈಲಿನಲ್ಲಿ ಮುದ್ದೆಯೂಟ ತಿನ್ನಿಸುವ ಗತಿ ಬಂದಿದೆ.
ಪತಿ - ಪತ್ನಿ ಸರಕಾರಿ ಕೆಲಸದಲ್ಲಿದ್ದು ಭರಪೂರ ಸಂಬಳ ಇದ್ದರೂ ವೈಜನಾಥ್ ಬಿರಾದಾರ್ ದುರಾಸೆಯಿಂದಾಗಿ ಇದೀಗ ಪತ್ನಿಯ ಸುಪರ್ದಿಯ ಜೈಲಿನಲ್ಲಿಯೇ ಮುದ್ದೆ ಮುರಿಯುವಂತೆ ಮಾಡಿದೆ. ಕೆಎಸ್ ಆರ್ ಪಿ ಕಮಾಂಡೆಂಟ್ ಆಗಿದ್ದ ವೈಜನಾಥ್, ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿ ಬಂಧನಕ್ಕೆ ಒಳಗಾಗಿರುವ ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಜತೆ ಹತ್ತಿರದ ಸಂಪರ್ಕದಲ್ಲಿದ್ದ. ಪರೀಕ್ಷಾ ಕೇಂದ್ರ ಆಗಿದ್ದ ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ಉಸ್ತುವಾರಿಯಾಗಿದ್ದು ಅಲ್ಲಿ ನಡೆದ ಪಿಎಸ್‌ಐ ಪರೀಕ್ಷೆ ಅಕ್ರಮಕ್ಕೆ ಸಾಥ್ ನೀಡಿದ ಆರೋಪವಿದೆ.
ಸರ್ಕಾರಿ ಪಾಲಿಟೆಕ್ನಿಕ್ ನಲ್ಲಿ ನಡೆದ ಪರೀಕ್ಷೆಯಲ್ಲಿ ಅಕ್ರಮ ಕಂಡುಬಂದ ಬೆನ್ನಲ್ಲೇ ವೈಜನಾಥ್‌ನನ್ನು ಸಿಐಡಿ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ವೇಳೆ ವೈಜನಾಥ್ ತಪ್ಪೊಪ್ಪಿಕೊಂಡಿದ್ದು, ಇದೀಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Husband sent to Jail in PSI scam by his wife who is a Jail Superdent in Bengaluru.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm