ಬ್ರೇಕಿಂಗ್ ನ್ಯೂಸ್
10-05-22 10:22 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 10 : ಇದೇ ತಿಂಗಳ ಮೇ 21 ಮತ್ತು 22 ರಂದು ಶಿಕ್ಷಕ ಹುದ್ದೆ ನೇಮಕಾತಿಗೆ ಪರೀಕ್ಷೆ ನಡೆಸಲಾಗುವುದು. ಈ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ ಇರಲ್ಲ. ಯಾವುದೇ ಊಹಾಪೋಹಗಳಿಗೆ ಯಾರೂ ಕಿವಿಗೊಡಬೇಡಿ. ಸಮಾಜ ವಿಜ್ಞಾನ ವಿಷಯದಲ್ಲಿ 1:50 ಇದೆ. ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಾಗಿದೆ. 1,06,083 ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ರಾಜ್ಯದ 435 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುವುದು. ಚಿಕ್ಕೋಡಿಯಲ್ಲಿ ಹೆಚ್ಚು ಕೇಂದ್ರಗಳಿವೆ. ಸುಮಾರು 11 ಸಾವಿರ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಹೀಗಾಗಿ ಅಲ್ಲಿ ಕೇಂದ್ರ ಜಾಸ್ತಿ ಮಾಡಲಾಗಿದೆ ಎಂದರು.

ಪರೀಕ್ಷಾ ಕೇಂದ್ರದ ಬಗ್ಗೆ ಬಹಳಷ್ಟು ಮುಂಜಾಗ್ರತೆ ವಹಿಸಿದ್ದೇವೆ. ಉನ್ನತ ಅಧಿಕಾರಿಗಳ ಜೊತೆಗೆ ಸಭೆ ಮಾಡಿದ್ದೇವೆ. ಯಾವುದೇ ಕಾರಣಕ್ಕೂ ಎಲೆಕ್ಟ್ರಾನಿಕ್ ವಸ್ತುಗಳನ್ನ ಪರೀಕ್ಷಾ ಕೇಂದ್ರಕ್ಕೆ ತರುವಂತಿಲ್ಲ. ಒಂದು ಗಂಟೆ ಒಳಗೆ ಪರೀಕ್ಷಾ ಕೇಂದ್ರಗಳಿಗೆ ಬರಬೇಕು. ಅರ್ಧ ಗಂಟೆಗೆ ಮುಂಚಿತವಾಗಿ ಕೊಠಡಿಗೆ ಬರಬೇಕು. ಪ್ರತಿ ಕೊಠಡಿಯಲ್ಲೂ ಗಡಿಯಾರ, ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗುವುದು. ಒಂದು ರೂಮ್ನಲ್ಲಿ 20 ಜನರು ಮಾತ್ರ ಇರ್ತಾರೆ. ಯಾವುದೇ ಗೊಂದಲಕ್ಕೀಡಾಗದೆ ಪರೀಕ್ಷೆ ಬರೆಯಬೇಕು ಎಂದು ತಿಳಿಸಿದರು.
ಸೂಕ್ಷ್ಮ ಕೇಂದ್ರಗಳಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡ್ತೀವಿ. ಪ್ರತಿ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು, ಸಿಇಒ, ಎಸ್ಪಿಗಳ ನೇತೃತ್ವದಲ್ಲಿ ಕಮಿಟಿ ಮಾಡಲಾಗಿದೆ. ಪರೀಕ್ಷೆ ಜವಾಬ್ದಾರಿ ಈ ಕಮಿಟಿ ನೋಡುತ್ತದೆ. ಪರೀಕ್ಷೆಗೆ ಖಾಸಗಿ ಶಾಲಾ ಕೊಠಡಿಗಳನ್ನ ತೆಗೆದುಕೊಳ್ತೀವಿ. ಆ ಶಾಲೆಯನ್ನ ಶಿಕ್ಷಣ ಇಲಾಖೆ ನಿಯಂತ್ರಣಕ್ಕೆ ತೆಗೆದುಕೊಳ್ಳಲಾಗುತ್ತದೆ ಮತ್ತು ಅದೇ ಶಾಲೆಯ ಶಿಕ್ಷಕರನ್ನು ಪರೀಕ್ಷೆಗಳಿಗೆ ಬಳಸಿಕೊಳ್ಳುವುದಿಲ್ಲ. ಪ್ರತಿ ಕೇಂದ್ರಕ್ಕೂ ತಹಶೀಲ್ದಾರ್ ಮೇಲ್ಪಟ್ಟ ಅಧಿಕಾರಿಗಳನ್ನ ನೇಮಕ ಮಾಡಲಾಗುವುದು. ಪರೀಕ್ಷಾ ಕೇಂದ್ರದಲ್ಲಿ 144 ಸೆಕ್ಷನ್ ಇರಲಿದೆ. ಪೊಲೀಸ್ ಇಲಾಖೆ ಸಂಪೂರ್ಣ ಹದ್ದಿನ ಕಣ್ಣು ಇಟ್ಟಿದೆ ಎಂದು ವಿವರಿಸಿದರು.
The examinations, which are scheduled to be held on May 21 and May 22, will be conducted in 435 centres across different districts in the state. Following the controversial PSI (Police Sub-Inspector) recruitment scam, the competitive exams for teachers for 11,000 jobs in different districts will now be conducted under strong vigilance, Karnataka Primary and Secondary Education minister B C Nagesh said Tuesday.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm