ಬ್ರೇಕಿಂಗ್ ನ್ಯೂಸ್
11-05-22 01:39 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 11 : ಮಂಡ್ಯದಲ್ಲಿ ಜೆಡಿಎಸ್ ಕಡೆಯಿಂದ ಮತ್ತೊಂದು ವಿಕೆಟ್ ಪತನಗೊಳ್ಳುವುದು ಖಚಿತವಾಗಿದೆ. ಪಕ್ಷದ ನಾಯಕತ್ವದ ಬಗ್ಗೆ ಬಹಿರಂಗ ಅಸಮಾಧಾನ ಹೊರಹಾಕಿರುವ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಪಕ್ಷ ತೊರೆಯುವ ಸುಳಿವು ನೀಡಿದ್ದಾರೆ. ಇದೇ ವೇಳೆ, ಮರಿತಿಬ್ಬೇಗೌಡ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಮಾಹಿತಿಗಳಿವೆ.
‘ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರ ಧೋರಣೆಯಿಂದಾಗಿ ಕಳೆದ ನಾಲ್ಕು ವರ್ಷಗಳಿಂದ ನಿತ್ಯವೂ ಕಿರುಕುಳ, ಹಿಂಸೆ ಅನುಭವಿಸುತ್ತಿದ್ದೇನೆ’ ಎಂದು ಮರಿತಿಬ್ಬೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಳಪತಿಗಳ ವಿರುದ್ಧ ತಿರುಗಿಬಿದ್ದಿರುವ ಅವರು, ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತ ಹಾಕದಂತೆ ಬೆಂಬಲಿಗರ ಸಭೆಯಲ್ಲಿ ಮನವಿ ಮಾಡಿದ್ದಾರೆ.

ಮರಿತಿಬ್ಬೇಗೌಡ ಅವರು ಈಗಾಗಲೇ ಕಾಂಗ್ರೆಸ್‌ನಲ್ಲಿ ಒಂದು ಹೆಜ್ಜೆ ಇಟ್ಟಿರುವುದು ಸ್ಪಷ್ಟವಾಗಿದೆ. ಅವರ ಪರಿಷತ್ ಸದಸ್ಯತ್ವ ಅವಧಿ 2024ರ ಜೂನ್‌ಗೆ ಮುಗಿಯಲಿದೆ. ಅಲ್ಲಿಯವರೆಗೆ ಕಾಯದೆ ಸದ್ಯದಲ್ಲೇ ರಾಜೀನಾಮೆ ನೀಡಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಈ ಕುರಿತು ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆಯನ್ನೂ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಮಂಡ್ಯದಲ್ಲಿ ಮಾಜಿ ಸಚಿವ ಎಸ್.ಡಿ ಜಯರಾಂ ಪುತ್ರ ಸೇರಿದಂತೆ ಹಲವರು ಬಿಜೆಪಿ ಸೇರ್ಪಡೆಯಾಗಿದ್ದು ಸದ್ಯದಲ್ಲೇ ಘಟಾನುಘಟಿಗಳು ಜೆಡಿಎಸ್ ತೊರೆದು ಕಮಲ ಮುಡಿಯುವ ಸುಳಿವು ನೀಡಿದ್ದಾರೆ. ಇದೇ ವೇಳೆ, ಪರಿಷತ್ ಹಿರಿಯ ಸದಸ್ಯ ತೆನೆ ಪಕ್ಷ ಬಿಟ್ಟು ಕಾಂಗ್ರೆಸ್ ಸೇರುವ ಮಾತುಗಳು ಕೇಳಿಬಂದಿದ್ದು ಒಕ್ಕಲಿಗರ ಮತ್ತು ಜೆಡಿಎಸ್ ಪಾಲಿನ ಭದ್ರಕೋಟೆಯಲ್ಲಿ ಭಾರೀ ಬಿರುಕು ಎದ್ದಿದೆ.
Expressing disappointment over the party affairs, JD(S) member of the Legislative Council Marithibbe Gowda said on Monday that he was disappointed by the attitude of JD(S) leaders H D Deve Gowda and H D Kumaraswamy over the last four years. Expressing disappointment over the party affairs, JD(S) member of the Legislative Council Marithibbe Gowda said on Monday that he was disappointed by the attitude of JD(S) leaders H D Deve Gowda and H D Kumaraswamy over the last four years.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm