ಬ್ರೇಕಿಂಗ್ ನ್ಯೂಸ್
12-05-22 02:19 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 12 : ಹಿಜಾಬ್ ವಿವಾದ, ಜಾತ್ರೆ ನಿರ್ಬಂಧ, ಆಜಾನ್- ಭಜನೆ ಸಂಘರ್ಷದ ಬೆನ್ನಲ್ಲೇ ರಾಜ್ಯ ಸರಕಾರ 'ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಮಸೂದೆ'ಯನ್ನು ಸುಗ್ರೀವಾಜ್ಞೆ ಮೂಲಕ ಕಾಯ್ದೆ ರೂಪದಲ್ಲಿ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.
ಸುಗ್ರೀವಾಜ್ಞೆ ಹೊರಡಿಸಲು ಯಾವುದೇ ಕಾನೂನು ತೊಡಕು ಇಲ್ಲ ಎಂದು ಕಾನೂನು ಮತ್ತು ಸಂಸದೀಯ ಇಲಾಖೆ ಅಭಿಪ್ರಾಯ ನೀಡಿದೆ. ಹೀಗಾಗಿ, ಗುರುವಾರ (ಮೇ 12) ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲು ಗೃಹ ಇಲಾಖೆ ಟಿಪ್ಪಣಿ ಸಿದ್ಧಪಡಿಸಿದೆ ಎಂದು ಮೂಲಗಳು ತಿಳಿಸಿವೆ.
ಬೆಳಗಾವಿಯಲ್ಲಿ ಕಳೆದ ಡಿಸೆಂಬರ್ ತಿಂಗಳಲ್ಲಿ ನಡೆದ ವಿಧಾನಮಂಡಲ ಅಧಿವೇಶನದ ವೇಳೆ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಮಸೂದೆಯನ್ನು ಮಂಡಿಸಿ ಸರ್ಕಾರ ಅಂಗೀಕಾರ ಪಡೆದಿತ್ತು. ಆದರೆ, ಕಾಂಗ್ರೆಸ್, ಜೆಡಿಎಸ್ ಸದಸ್ಯರ ತೀವ್ರ ವಿರೋಧ ಮತ್ತು ಅಗತ್ಯ ಬಲ ಇಲ್ಲದೇ ಇದ್ದ ಕಾರಣ ವಿಧಾನ ಪರಿಷತ್‌ನಲ್ಲಿ ಮಸೂದೆ ಮಂಡನೆಯಾಗಿರಲಿಲ್ಲ. ಇದೀಗ, ವಿಧಾನಸಭೆಯಲ್ಲಿ ಮಂಡಿಸಿದ್ದ ಮಸೂದೆಯನ್ನೇ ಸುಗ್ರೀವಾಜ್ಞೆ ಮೂಲಕ ರಾಜ್ಯದಲ್ಲಿ ಜಾರಿಗೊಳಿಸಲು ಸರ್ಕಾರ ತೀರ್ಮಾನಿಸಿದೆ. ವಿಧಾನಸಭೆಯಲ್ಲಿ ಮಂಡನೆ ಆಗಿರುವುದರಿಂದ ಆರು ತಿಂಗಳ ಒಳಗೆ ಪರಿಷತ್ ಅನುಮತಿಯನ್ನೂ ಪಡೆಯಬೇಕಿತ್ತು. ಅದು ಸಾಧ್ಯವಾಗದ ಕಾರಣ ಈಗ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿ ಮುಂದಿನ ಆರು ತಿಂಗಳಲ್ಲಿ ಪರಿಷತ್ ಅನುಮತಿ ಪಡೆಯುವ ತಂತ್ರ ಮಾಡಿದೆ.
ಪ್ರಸ್ತಾವಿತ ಕಾಯ್ದೆಯ ಪ್ರಮುಖ ಅಂಶಗಳು
ಆಮಿಷ, ಪ್ರಲೋಭನೆ, ಉದ್ಯೋಗ, ಉಚಿತ ಶಿಕ್ಷಣ, ನಗದು, ಮದುವೆ ಆಗುವುದಾಗಿ ವಾಗ್ದಾನ, ಉತ್ತಮ ಜೀವನ ಶೈಲಿಯ ಭರವಸೆ, ದೈವಿಕ ಸಂತೋಷ, ಒತ್ತಾಯ, ವಂಚನೆ ಮೂಲಕ ಮತಾಂತರ ಮಾಡುವುದನ್ನು ನಿಷೇಧಿಸುವ ಅಂಶ ಈ ಕಾಯ್ದೆಯಲ್ಲಿದೆ. ಯಾವುದೇ ಒಂದು ಧರ್ಮದ ಆಚರಣೆಗಳನ್ನು ಅವಹೇಳನ ಮಾಡುವುದನ್ನೂ ಆಮಿಷ ಎಂದೇ ಪರಿಗಣಿಸಲಾಗಿದೆ. ವ್ಯಕ್ತಿಯೊಬ್ಬ ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಮತಾಂತರವಾದಾಗ ಮಾತ್ರ ಕಾಯ್ದೆ ಅನ್ವಯವಾಗಲಿದೆ. ಆದರೆ, ಯಾವುದೋ ಕಾರಣಕ್ಕೆ ಮತಾಂತರಗೊಂಡು, ಮರಳಿ ಮಾತೃಧರ್ಮಕ್ಕೆ ಬರುವುದಾದರೆ ಈ ಕಾಯ್ದೆ ಅನ್ವಯವಾಗುವುದಿಲ್ಲ. ಯಾವುದೇ ವ್ಯಕ್ತಿಯನ್ನು ಮತಾಂತರ ಮಾಡಿದರೆ ಕಾಯ್ದೆಯಡಿ ದಂಡ ಮತ್ತು ಜೈಲು ಶಿಕ್ಷೆ ವಿಧಿಸಲಾಗುತ್ತದೆ.
Karnataka Chief Minister Basavaraj Bommai said the Cabinet is likely to approve the ordinance move for the anti-conversion bill in its Cabinet meeting today. The Karnataka Protection of Right to Freedom of Religion Bill was passed in the Legislative Assembly in December last year. It is pending passage in the Legislative Council, where the ruling BJP is one short of majority.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm