ಬ್ರೇಕಿಂಗ್ ನ್ಯೂಸ್
13-05-22 01:40 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 13 : ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿ ಇಲ್ಲದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸೇರಿದಂತೆ ಯಾವುದೇ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸುವುದಿಲ್ಲ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕೆಂಬ ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಇಕ್ಕಟ್ಟಿಗೆ ಸಿಲುಕಿರುವ ರಾಜ್ಯ ಸರ್ಕಾರವು, ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸದೆ ಎದುರಿಸುವ ಪ್ರಶ್ನೆಯೇ ಇಲ್ಲ ಎಂಬ ನಿಲುವಿಗೆ ಬಂದಿದ್ದು, ಈ ಬಗ್ಗೆ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಕಾನೂನು ತಜ್ಞರ ಜತೆ ಸಭೆ ನಡೆಸಿದ್ದು ಇದರ ಮಾಹಿತಿಯನ್ನು ಸಚಿವ ಸಂಪುಟ ಸಭೆಯ ಬಳಿಕ ಸಚಿವ ಜೆ.ಸಿ.ಮಾಧುಸ್ವಾಮಿ ನೀಡಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ಸ್ಥಳೀಯ ಸಂಸ್ಥೆಯ ಚುನಾವಣೆ ಕುರಿತು ಚರ್ಚೆ ನಡೆಸಿಲ್ಲ. ಆದರೆ, ಮುಖ್ಯಮಂತ್ರಿಗಳ ಜತೆ ಪ್ರತ್ಯೇಕ ಸಭೆ ನಡೆಸಿ ಚರ್ಚಿಸಲಾಗಿದೆ. ಹಿಂದುಳಿದ ವರ್ಗಕ್ಕೆ ಈ ಹಿಂದಿನ ಮೀಸಲಾತಿ ಅನ್ವಯವಾದರೂ ಸರಿ ಅಥವಾ ಹೊಸದಾಗಿ ಸರ್ಕಾರ ರೂಪಿಸುತ್ತಿರುವ ಮೀಸಲಾತಿ ಅನ್ವಯವಾದರೂ ಸರಿ, ಮೀಸಲಾತಿ ಕಲ್ಪಿಸಿಯೇ ಚುನಾವಣೆ ನಡೆಸಲು ಅವಕಾಶ ನೀಡುವಂತೆ ಸುಪ್ರೀಂಕೋರ್ಟ್ ಗೆ ಮನವಿ ಮಾಡುತ್ತೇವೆ ಎಂದರು.

ಮೀಸಲಾತಿ ನಿಗದಿ ಮಾಡುವ ಸಂಬಂಧ ನ್ಯಾ.ಭಕ್ತವತ್ಸಲಂ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದೆ. 3-4 ತಿಂಗಳಲ್ಲಿ ವರದಿ ನೀಡಲಿದೆ. ಸುಪ್ರೀಂ ಆದೇಶ ಹಿನ್ನೆಲೆಯಲ್ಲಿ ವರದಿಯನ್ನು ಆದಷ್ಟು ಬೇಗ ನೀಡುವಂತೆ ತಿಳಿಸಲಾಗಿದೆ. ಸಮಿತಿಯು ವರದಿ ನೀಡಲು ಸಮಯ ತೆಗೆದುಕೊಳ್ಳುವುದರಿಂದ ಮೂರು ತಿಂಗಳಾದರೂ ಕಾಲಾವಕಾಶ ನೀಡುವಂತೆ ನ್ಯಾಯಾಲಯವನ್ನು ಕೋರಲು ತೀರ್ಮಾನಿಸಲಾಗಿದೆ. 1983ರಿಂದ ಹಿಂದುಳಿದ ವರ್ಗಕ್ಕೆ ಮೀಸಲಾತಿ ಕಲ್ಪಿಸಲಾಗುತ್ತಿದೆ. ಮೀಸಲಾತಿ ಇಲ್ಲದೆ ಚುನಾವಣೆ ಎದುರಿಸಲು ಸಾಧ್ಯವಿಲ್ಲ.
ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳು ಮತ್ತು ಒಬಿಸಿ ಸಂಘಟನೆಗಳು ಸಲ್ಲಿಸಿರುವ ಎರಡು ಅಥವಾ ಮೂರು ಅರ್ಜಿಗಳು ಮೇ 17 ರಂದು ಕರ್ನಾಟಕ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದ್ದು, ಸರ್ಕಾರವು ತನ್ನ ಮುಂದಿನ ಕ್ರಮ ಕೈಗೊಳ್ಳುವ ಆದೇಶಕ್ಕಾಗಿ ಕಾತರದಿಂದ ಕಾಯುತ್ತಿದೆ ಎಂದರು. ಮಧ್ಯಪ್ರದೇಶ, ಮಹಾರಾಷ್ಟ್ರ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಆದರೆ, ರಾಜ್ಯದ ವಿಚಾರಕ್ಕೆ ಬಂದರೆ ಕೆಲವು ತಾಂತ್ರಿಕ ಸಮಸ್ಯೆಗಳು ಎದುರಾಗಿವೆ ಎಂದಿದ್ದಾರೆ.
The government is considering moving the Supreme Court seeking three months’ time to fix reservations for other backward castes (OBCs) by studying their political backwardness, Law Minister J C Madhuswamy said on Thursday.“We have also asked Justice Bhaktavatsala to submit a report at the earliest,” he said, referring to the committee formed under the retired HC judge to study the political backwardness of the OBCs.
08-10-26 08:00 pm
HK News Staffer
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
HD Kumaraswamy, DK Shivakumar: ಡಿಕೆಶಿ ಸಿಎಂ ಆಗ...
07-10-26 09:16 pm
ಬೆಂಗಳೂರು ನಗರದಲ್ಲಿ ಐದು ಕಮಿಷನರೇಟ್ ; ವಿಭಜನೆಗೆ ಸಚ...
06-10-26 10:46 pm
10-10-26 10:31 pm
HK News Staffer
ಸಿಇಸಿ ವಿರುದ್ಧ ದೆಹಲಿ, ಮುಂಬೈನಲ್ಲಿ ಭಾರೀ ಪ್ರತಿಭಟನ...
10-10-26 07:33 pm
ನಂದಿಗ್ರಾಮ, ರೇಜಿನಗರದಲ್ಲಿ ಬಿಜೆಪಿಗೆ ಭರ್ಜರಿ ಜಯ ;...
09-10-26 11:04 pm
ಸರ್ಕಾರಿ ಸಂಸ್ಥೆಯಿಂದ ಕೋಟ್ಯಂತರ ದೇಣಿಗೆ ; ಪಿಣರಾಯಿ...
09-10-26 05:40 pm
Prakash Raj, Dhruv Rathee: SIR ರದ್ದತಿಗೆ ಬೆಂಗಳ...
08-10-26 08:03 pm
10-10-26 09:27 pm
HK News Staffer
Sowjanya, Mangalore, Justice: ಬೆಳ್ತಂಗಡಿಯಲ್ಲಿ...
10-10-26 09:17 pm
ಕರ್ನಾಟಕ ಕಬಡ್ಡಿ ಪ್ರೀಮಿಯರ್ ಲೀಗ್ ; ಉತ್ತರ ಕನ್ನಡ ಸ...
10-10-26 05:09 pm
ಮೂಡುಶೆಡ್ಡೆ ; ಮುಸ್ಲಿಮರ ದಫನಕ್ಕೆ 2 ಎಕರೆ ಪಿಲಿಕುಳದ...
10-10-26 03:21 pm
Nana patekar: ಮಂಗಳೂರು, ಉಡುಪಿಯೊಂದಿಗೆ ನಾನಾ ಪಾಟೇ...
08-10-26 04:30 pm
10-10-26 02:27 pm
HK News Staffer
ಮೃಗಾಲಯಕ್ಕೆ ಗಂಡನೊಂದಿಗೆ ಬಂದ ನವವಿವಾಹಿತೆ: ಪತಿ ಬೈಕ...
09-10-26 08:41 pm
Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡ...
09-10-26 05:37 pm
ಕೊರಿಯರ್ ನಲ್ಲಿ ಪಂಜಾಬಿನಿಂದ ಮಂಗಳೂರಿಗೆ ಎಂಡಿಎಂಎ ಪೂ...
09-10-26 03:25 pm
Nisha Raphael, POCSO: 11 ವರ್ಷದ ಬಾಲಕನ ಮೇಲೆ ಲೈಂ...
09-10-26 03:23 pm