ಬ್ರೇಕಿಂಗ್ ನ್ಯೂಸ್
14-05-22 12:04 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 14 : ಯುವತಿ ಮೇಲೆ ಆಸಿಡ್ ದಾಳಿಗೈದು ತಲೆಮರೆಸಿಕೊಂಡು ಪೊಲೀಸರ ಬಲೆಗೆ ಬಿದ್ದ ಆರೋಪಿ ನಾಗೇಶ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು ಈ ವೇಳೆ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಸೆರೆ ಹಿಡಿದಿದ್ದಾರೆ.
ಬೆಂಗಳೂರಿನ ಕೆಂಗೇರಿಯ ಮೇಲ್ಸೇತುವೆ ಬಳಿ ಶುಕ್ರವಾರ ರಾತ್ರಿ ಘಟನೆ ನಡೆದಿದೆ. ತಮಿಳುನಾಡು ಕಡೆಯಿಂದ ನೈಸ್ ರೋಡಲ್ಲಿ ಬೆಂಗಳೂರಿಗೆ ಬರುತ್ತಿದ್ಬದಾಗ ಮೂತ್ರ ವಿಸರ್ಜನೆಗೆ ನಿಲ್ಲಿಸಿ ಅಂತ ಕೇಳಿಕೊಂಡಿದ್ದ. ಆದರೆ ಅನುಮತಿ ಕೊಡದ ಪೊಲೀಸರು, ಬೆಂಗಳೂರು ನಗರದ ಕೆಂಗೇರಿ ಮೇಲ್ಸೇತುವೆ ಬಳಿ ಮೂತ್ರ ವಿಸರ್ಜನೆಗೆ ನಿಲ್ಲಿಸಿದ್ದರು.
ಈ ವೇಳೆ ಆರೋಪಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು ಹಿಡಿಯಲು ಹೋದ ಕಾನ್ಸ್‌ಟೇಬಲ್ ಮಹಾದೇವಯ್ಯ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದಾನೆ. ಕೂಡಲೇ ಗಾಳಿಯಲ್ಲಿ ಗುಂಡು ಹಾರಿಸಿ ಕಾಮಾಕ್ಷಿಪಾಳ್ಯ ಠಾಣೆಯ ಇನ್ಸ್ಪೆಕ್ಟರ್ ಪ್ರಶಾಂತ್ ಎಚ್ಚರಿಕೆ ನೀಡಿದ್ದರು. ಆದರೆ ಇನ್ಸ್ಪೆಕ್ಟರ್ ಎಚ್ಚರಿಕೆಗೂ ಬಗ್ಗದ ನಾಗೇಶ್, ತಪ್ಪಿಸಿಕೊಂಡು ಓಡಲು ಮುಂದಾಗಿದ್ದ. ಹೀಗಾಗಿ ಆರೋಪಿ ನಾಗೇಶ್ ಬಲಗಾಲಿಗೆ ಗುಂಡು ಹೊಡೆದು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
15 ದಿನಗಳಿಂದ ಆರೋಪಿ ನಾಗೇಶ್, ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಸ್ವಾಮೀಜಿ ವೇಷ ಧರಿಸಿ ತಲೆಮರೆಸಿಕೊಂಡಿದ್ದ. ಪೊಲೀಸರು ಈ ಬಗ್ಗೆ ಮಾಹಿತಿ ಪಡೆದು ಮಾರು ವೇಷದಲ್ಲಿ ಹೋಗಿ ಗುರುವಾರ ಬಂಧಿಸಿದ್ದರು. ಅಲ್ಲಿಂದ ಕರೆತರುತ್ತಿದ್ದಾಗಲೇ ತಪ್ಪಿಸಲು ಯತ್ನಿಸಿ ಗುಂಡೇಟು ತಿಂದು ಆಸ್ಪತ್ರೆ ಸೇರಿದ್ದಾನೆ.
The youth, who had made him scarce in a well-planned manner after flinging acid on a 23-year-old woman in Bengaluru last month and seriously injured her, was finally nabbed by the Karnataka Police from Tamil Nadu's Tiruvannamalai city, where he had disguised himself as a religious seer, officials said on Friday Meanwhile, the 23-year-old acid victim has been shifted to general ward following the recovery in her health, 16 days after treatment in Intensive Care Unit (ICU).
05-02-25 06:39 pm
HK News Desk
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
Bangalore RTO, Luxury car tax: ತೆರಿಗೆ ಪಾವತಿಸದ...
04-02-25 11:04 pm
06-02-25 02:21 pm
HK News Desk
Kerala Suicide, Ragging: ಕೇರಳದಲ್ಲಿ 15ರ ಬಾಲಕ ಮ...
04-02-25 10:49 pm
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
Conspiracy, Kumbh stampede: ಮಹಾ ಕುಂಭಮೇಳದಲ್ಲಿ...
03-02-25 02:57 pm
05-02-25 10:51 pm
Mangalore Correspondent
SKG Bank robbery, Kinnigoli, Kotekar Robbery,...
05-02-25 10:43 pm
Musical program Swara Sanidhya, Mangalore; ಫೆ...
05-02-25 07:32 pm
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
Mangalore gun misfire, congress, chittaranjan...
04-02-25 07:47 pm
06-02-25 04:35 pm
HK News Desk
Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ...
06-02-25 12:00 pm
Bangalore crime, Illicit affair: ಶೀಲ ಶಂಕಿಸಿ ನ...
05-02-25 04:29 pm
Ullal Police Station, Mangalore, Crime: ಪಿಎಸ್...
03-02-25 05:46 pm
Bangalore honeytrap case, Crime: ಮದುವೆಗೆ ವಧು...
02-02-25 09:00 pm