ಇನ್ನೆರಡು ದಿನದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ನಿರ್ಧಾರ ; ಮುಖ್ಯಮಂತ್ರಿ

15-05-22 08:11 pm       HK Desk News   ಕರ್ನಾಟಕ

ಇನ್ನೆರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ಈಗಾಗಲೇ ಈ ಬಗ್ಗೆ ಕೇಂದ್ರ ನಾಯಕರ ಗಮನಕ್ಕೆ ತರಲಾಗಿದ್ದು, ಮತ್ತೆ ಫೋನ್ ಮಾಡಿ ಅನುಮತಿ ಕೇಳುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿ, ಮೇ 15: ಇನ್ನೆರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು. ಈಗಾಗಲೇ ಈ ಬಗ್ಗೆ ಕೇಂದ್ರ ನಾಯಕರ ಗಮನಕ್ಕೆ ತರಲಾಗಿದ್ದು, ಮತ್ತೆ ಫೋನ್ ಮಾಡಿ ಅನುಮತಿ ಕೇಳುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಈಗಾಗ್ಲೇ ಕೋರ್ ಕಮಿಟಿ ಮುಗಿದಿದೆ. ಸದ್ಯಕ್ಕೆ ನಾವು ವಿಧಾನ ಪರಿಷತ್ ಮತ್ತು ರಾಜ್ಯಸಭೆ ಚುನಾವಣೆಯ ಬಿಝಿಯಲ್ಲಿದ್ದೇವೆ. ಚುನಾವಣೆಗೆ ತಯಾರಿ ನಡೆಸಬೇಕಾಗಿದೆ ಎಂದು ಹೇಳಿದರು. ಸಂಪುಟ ವಿಸ್ತರಣೆ ಯಾವಾಗ ಎಂದು ಕೇಳಿದ ಪ್ರಶ್ನೆಗೆ, ಕೇಂದ್ರ ನಾಯಕರಿಗೆ ತಿಳಿಸಲಾಗಿದ್ದು, ಇನ್ನೆರಡು ದಿನದಲ್ಲಿ ಶುಭ ಸೂಚನೆ ಬರುವ ನಿರೀಕ್ಷೆಯಿದೆ ಎಂದಿದ್ದಾರೆ.

BJP core panel recommends MLC ticket for Vijayendra | Deccan Herald

ವಿಜಯೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ತೀರಾ ಎಂಬ ಪ್ರಶ್ನೆಗೆ, ಅವರಿಗೆ ವಿಧಾನ ಪರಿಷತ್ ಸೀಟು ಕೊಡುವ ಬಗ್ಗೆ ಕೇಂದ್ರಕ್ಕೆ ಶಿಫಾರಸು ಮಾಡಿದ್ದೇವೆ. ಸಚಿವ ಸ್ಥಾನ ಕೊಡುತ್ತಾರಾ ಅನ್ನುವ ಬಗ್ಗೆ ಕೇಂದ್ರ ನಾಯಕರೇ ತೀರ್ಮಾನಕ್ಕೆ ಬರಲಿದ್ದಾರೆ ಎಂದರು. ಹಲಾಲ್, ಹಿಜಾಬ್ ವಿಚಾರದಲ್ಲಿ ರಾಜ್ಯ ಸರಕಾರ ಉತ್ತಮವಾಗಿ ವ್ಯವಹರಿಸಿದ್ದು, ಇದರಿಂದ ರಾಜ್ಯದಲ್ಲಿ ಬಿಜೆಪಿ ಪರ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

Karnataka Chief Minister Basavaraj Bommai on Sunday stated that a final decision on cabinet expansion would be taken after two days."We are occupied with the Legislative Council and Rajya Sabha elections. The core committee meeting has been conveyed only on Saturday. We will bring the decisions taken in the meeting to the high command and take a call on cabinet expansion," he explained.