ಬ್ರೇಕಿಂಗ್ ನ್ಯೂಸ್
17-05-22 05:19 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 17 : ಬೆಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ನೇಮಕವಾದ ಸಿ.ಎಚ್.ಪ್ರತಾಪ್ ರೆಡ್ಡಿ ಅವರು ನಿರ್ಗಮಿತ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರಿಂದ ಮಂಗಳವಾರ ಅಧಿಕಾರ ಹಸ್ತಾಂತರಿಸಿದರು. 1991ನೇ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಪ್ರತಾಪ ರೆಡ್ಡಿ ಆಂಧ್ರಪ್ರದೇಶದ ಗುಂಟೂರು ಜಿಲ್ಲೆ ಮೂಲದವರು. ಬೆಂಗಳೂರು ನಗರದ 35ನೇ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.
ಈ ಹಿಂದೆ ಕಲಬುರಗಿ, ವಿಜಯಪುರ, ಮುಂಬೈ, ಬೆಂಗಳೂರು ಸಿಬಿಐ ಘಟಕ ಹಾಗೂ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಎಡಿಜಿಪಿಯಾಗಿ ಕರ್ತವ್ಯ ನಿರ್ವಹಿಸಿರುವ ಅನುಭವ ಅವರಿಗಿದೆ. ಇದಕ್ಕು ಮುನ್ನ ರಾಜ್ಯ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿಯಾಗಿ ಪ್ರತಾಪ ರೆಡ್ಡಿ ಕಾರ್ಯ ನಿರ್ವಹಿಸುತ್ತಿದ್ದರು.
ಬೆಂಗಳೂರಿನಲ್ಲಿ ಈ ಹಿಂದೆ ಎಸಿಪಿಯಾಗಿದ್ದಾಗ ಸೈಬರ್ ಸೆಕ್ಯೂರಿಟಿ ವಿಂಗ್ ಸಲಹೆಗಾರರಾಗಿ ಪ್ರತಾಪ್ ರೆಡ್ಡಿ ಕಾರ್ಯ ನಿರ್ವಹಿಸಿದ್ದರು. 1994ರಲ್ಲಿ ಮುಖ್ಯಮಂತ್ರಿಗಳ ಪದಕಕ್ಕೂ ಭಾಜನರಾಗಿದ್ದರು. ಕೆಲ ಕಾಲ ಸೈಬರ್ ಸೆಕ್ಯೂರಿಟಿ ವಿಭಾಗದ ನಿರ್ದೇಶಕರಾಗಿದ್ದರು. ತಾಂತ್ರಿಕ ಕಾರ್ಯಾಚರಣೆಗಳಲ್ಲಿ ಪರಿಣತಿ ಹೊಂದಿರುವ ವಿರಳ ಐಪಿಎಸ್ ಅಧಿಕಾರಿಗಳಲ್ಲಿ ಇವರೂ ಒಬ್ಬರಾಗಿದ್ದಾರೆ. ಸಿಬಿಐ ಅಧಿಕಾರಿಯಾಗಿದ್ದ ವೇಳೆ ಬೆಂಗಳೂರು, ಮುಂಬೈ ಸೇರಿದಂತೆ ವಿವಿಧ ಕಡೆಗಳಲ್ಲಿ ಬ್ಯಾಂಕಿಂಗ್, ಸೈಬರ್ ವಂಚನೆ ಪ್ರಕರಣಗಳನ್ನು ಪತ್ತೆ ಮಾಡಿದ್ದರು.
ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಬಳಿಕ 2020ರ ಆಗಸ್ಟ್ನಲ್ಲಿ ನಗರ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದ ಕಮಲ್ ಪಂತ್ ಎರಡು ದಿನಗಳ ಹಿಂದೆ ನೇಮಕಾತಿ ವಿಭಾಗದ ಡಿಜಿಪಿಯಾಗಿ ವರ್ಗಾವಣೆಗೊಂಡಿದ್ದರು. ಕೆ.ಜಿ.ಹಳ್ಳಿ- ಡಿ.ಜೆ.ಹಳ್ಳಿ ಗಲಭೆ ಪ್ರಕರಣ, ಡ್ರಗ್ಸ್ ಪ್ರಕರಣಗಳಲ್ಲಿ ಕಮಲ್ ಪಂತ್ ಪ್ರಮುಖ ಪಾತ್ರ ವಹಿಸಿದ್ದರು.
Senior IPS officer CH Pratap Reddy, who was the Additional Director General of Police (ADGP), Law & Order, has been appointed as the Police Commissioner of Bengaluru. DGP Kamal Pant, who had a long stint in the most coveted post, has been transferred and posted as DGP (Recruitment). An IPS officer of the 1991 batch, Pratap Reddy, who hails from Guntur in Andhra Pradesh, started his career as assistant SP at Arasikere in Hassan and has served as SP of Bijapur (now Vijayapura) and Gulbarga (now Kalaburagi) districts.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm