ಬ್ರೇಕಿಂಗ್ ನ್ಯೂಸ್
18-05-22 11:31 am Bangalore Correspondent ಕರ್ನಾಟಕ
ಬೆಂಗಳೂರು, ಮೇ 18 : ಸಿಲಿಕಾನ್ ಸಿಟಿಯಲ್ಲಿ ಮಂಗಳವಾರ ರಾತ್ರಿ ವರುಣ ಅಬ್ಬರಿಸಿದ್ದಾನೆ. ಸತತ ಮೂರು ಗಂಟೆಗೂ ಹೆಚ್ಚು ಕಾಲ ಸುರಿದ ಭಾರೀ ಮಳೆಗೆ ರಸ್ತೆಗಳೆಲ್ಲಾ ನೀರು ತುಂಬಿಕೊಂಡು ನದಿಗಳಾಗಿದ್ದು ವಾಹನಗಳು ತೇಲಾಡುವ ಸ್ಥಿತಿ ಉಂಟಾಗಿತ್ತು.
ಗುಡುಗು, ಸಿಡಿಲಿನೊಂದಿಗೆ ರಾತ್ರಿ 8 ರಿಂದ 10 ಗಂಟೆ ವರೆಗೂ ನಿರಂತರ ಮಳೆಯಾಗಿದ್ದು ಬೆಂಗಳೂರು ನಗರದ ಜನರು ಬೆಚ್ಚಿ ಬಿದ್ದಿದ್ದಾರೆ.
ರಸ್ತೆಗಳು ಜಲಾವೃತಗೊಂಡ ಕಾರಣ ವಾಹನ ಸವಾರರು ಪರದಾಡಿದ್ದಾರೆ. ಕಾರುಗಳು ಮಳೆ ನೀರಿನಲ್ಲಿ ಅರ್ಧಕ್ಕೆ ಮುಳುಗಡೆಯಾಗಿ ಕೆಟ್ಟು ನಿಲ್ಲುವಂತಾಗಿತ್ತು. ನಾಯಂಡಹಳ್ಳಿ, ಶೇಷಾದ್ರಿಪುರಂ, ಯಶವಂತಪುರ ಭಾಗದಲ್ಲಿ ರಸ್ತೆಗಳು ನೀರಿನಿಂದ ಆವೃತವಾಗಿತ್ತು.
ಭಾರತೀಯ ಹವಾಮಾನ ಇಲಾಖೆ ರಾಜ್ಯದಲ್ಲಿ ಇನ್ನೂ 5 ದಿನ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗಲಿದ್ದು, ರಾಜಧಾನಿ ಬೆಂಗಳೂರಲ್ಲೂ ಮಳೆಯ ಆರ್ಭಟ ಮುಂದುವರೆಯಲಿದೆ.
ರಸ್ತೆಯಲ್ಲಿ ಕೆಟ್ಟು ನಿಂತ ಕಾರುಗಳು
ರಾತ್ರಿ ವೇಳೆ ದಿಢೀರ್ ಸುರಿದ ಮಳೆಗೆ ನಾಯಂಡಹಳ್ಳಿ ಜಂಕ್ಷನ್‌ನಲ್ಲಿ ರಸ್ತೆಯ ತುಂಬೆಲ್ಲಾ ನೀರು ತುಂಬಿಕೊಂಡಿತ್ತು. ಭಾರೀ ಮಳೆಗೆ ರಾಜಕಾಲುವೆ ತುಂಬಿ ಹರಿದು ರಸ್ತೆಯೇ ರಾಜಕಾಲುವೆಯಾಗಿತ್ತು. ರಸ್ತೆಯಲ್ಲಿ ಸಾಗುತ್ತಿದ್ದ ಕಾರುಗಳು ಕೆಟ್ಟು ನಿಂತಿದ್ದರಿಂದ ಸಾರ್ವಜನಿಕರು ಸೇರಿ ದೂಡಿ ದಾಟಿಸುತ್ತಿದ್ದರು. ಚಾಲಕರೇ ಕಾರನ್ನು ತಳ್ಳುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಯಶವಂತ ಪುರದಲ್ಲೂ ಭಾರೀ ಮಳೆಯಾದ ಪರಿಣಾಮದಿಂದಾಗಿ ಬಸ್ ನಿಲ್ದಾಣ ಬಳಿಯ ಅಂಡರ್ ಪಾಸ್‌ನಲ್ಲಿ ಮಳೆ ನೀರು ಸಂಗ್ರಹವಾಗಿತ್ತು. ಜನರು ಮಳೆಯಿಂದ ರಕ್ಷಣೆ ಪಡೆಯಲು ಫ್ಲೈ ಓವರ್ ಕೆಳಗೆ ನಿಂತಿದ್ದರು. ಯಶವಂತಪುರ, ಮತ್ತಿಕೆರೆ ಸುತ್ತ-ಮುತ್ತ ಮಳೆ ಅವಾಂತರವನ್ನೇ ಸೃಷ್ಟಿಸಿದೆ.
Heavy rains lashed Bengaluru on Tuesday evening which led to waterlogging in many parts of the city. The torrential rains, which were accompanied by lightning and thunder, started in the evening and intensified by night. It caused traffic snarls in Hebbal, Silk Board. Mysuru Road and Bommnahalli.Vehicles were stuck in the traffic for hours as some areas witnessed knee-deep water. Social media was flooded with the clips of inundated roads.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm