ಬ್ರೇಕಿಂಗ್ ನ್ಯೂಸ್
19-05-22 09:35 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 19 : ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಸೃಷ್ಟಿಸುವ ಆತಂಕದ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಮುಂದಿನ ವಾರ ಎನ್‌ಡಿಆರ್‌ಎಫ್ (ಕೇಂದ್ರಿಯ ವಿಪತ್ತು ರಕ್ಷಣಾ ಪಡೆ) ಪಡೆಯ ನಾಲ್ಕು ತಂಡಗಳು ರಾಜ್ಯಕ್ಕೆ ಆಗಮಿಸಲಿದೆ. ಈ ಬಗ್ಗೆ ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ ನೀಡಿದ್ದು, ಮಾನ್ಸೂನ್ ಆಗಮನದ ಒಂದು ವಾರ ಮಂಚೆಯೇ ರಾಜ್ಯಕ್ಕೆ ಆಗಮಿಸಿ, ಕಾರ್ಯಾಚರಣೆಗೆ ಸಿದ್ಧವಾಗಿರಲಿದೆ ಎಂದು ತಿಳಿಸಿದ್ದಾರೆ.
ಎನ್ ಡಿ ಆರ್ ಎಫ್ ಎಲ್ಲೆಲ್ಲಿ ನಿಯೋಜನೆ?
ಎನ್‌ಡಿಆರ್‌ಎಫ್ ನಾಲ್ಕು ತಂಡಗಳ ಪೈಕಿ ಮೊದಲ ತಂಡ ದಕ್ಷಿಣ ಕನ್ನಡ - ಉಡುಪಿ, ಉತ್ತರ ಕನ್ನಡ ಹಾಗೂ ಸುತ್ತಮುತ್ತಲಿನ ಪ್ರದೇಶದ ಅನುಕೂಲಕ್ಕಾಗಿ ನಿಯೋಜನೆ ಮಾಡಲಾಗುತ್ತದೆ. ಎರಡನೇ ತಂಡ ಕೊಡಗು - ಮೈಸೂರು, ಹಾಸನ, ಚಿಕ್ಕಮಗಳೂರು ಭಾಗದಲ್ಲಿ ನಿಯೋಜನೆ ಮಾಡಲಾಗುತ್ತದೆ. ಮೂರನೇ ತಂಡ ಬೆಳಗಾವಿ - ಬಾಗಲಕೋಟ, ವಿಜಯಪುರ ಹಾಗೂ ಸುತ್ತಮುತ್ತಲಿನ ಪ್ರದೇಶದ ಅನುಕೂಲಕ್ಕಾಗಿ ನಿಯೋಜನೆ ಮಾಡಲಾಗುತ್ತದೆ. ನಾಲ್ಕನೇ ತಂಡವನ್ನು ರಾಯಚೂರು - ಯಾದಗಿರಿ, ಬಳ್ಳಾರಿ, ಕಲಬುರ್ಗಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ನಿಯೋಜಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲೂ ಒಂದು ತಂಡ
ಜಿಲ್ಲೆಗಳಲ್ಲಿ ಮಾತ್ರವಲ್ಲದೆ ಬೆಂಗಳೂರಿನಲ್ಲೂ ಒಂದು ಎನ್ಡಿಆರ್ ಎಫ್ ತಂಡ ಕಾರ್ಯಚರಣೆಗೆ ಸಿದ್ಧವಾಗಿರುತ್ತದೆ. ಜತೆಗೆ SDRF ತಂಡಗಳು ಎಲ್ಲ ರೀತಿಯ ಪರಿಸ್ಥಿತಿ ಎದುರಿಸಲು ಸಿದ್ಧವಾಗಿದೆ. ಇದೇ ಸಂದರ್ಭದಲ್ಲಿ ಮಳೆ ಹಾನಿ ಆಗದಂತೆ ಕ್ರಮ ಕೈಗೊಳ್ಳಲು ಸರ್ಕಾರವೂ ಎಲ್ಲ ಸಿದ್ಧತೆಯನ್ನು ಕೈಗೊಳ್ಳುತ್ತಿದೆ ಎಂದು ಆರ್. ಅಶೋಕ್ ತಿಳಿಸಿದರು. ಎಲ್ಲ ಜಿಲ್ಲೆಗಳ ಉಸ್ತುವಾರಿ ಸಚಿವರಿಗೆ ಪತ್ರ ಬರೆದು ಆಯಾ ಜಿಲ್ಲೆಗಳಲ್ಲಿ ಪರಿಶೀಲನಾ ಸಭೆ ನಡೆಸುವಂತೆ ವಿನಂತಿ ಮಾಡುತ್ತೇನೆ. ಇನ್ನು 3-4 ತಿಂಗಳು ಕಾರ್ಯಾಚರಣೆಯ ವೇಗ ಹೆಚ್ಚಿಸಬೇಕು. ಎಲ್ಲೇ ಭೂಕುಸಿತ, ನೆರೆ ಬಂದರೂ ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ ಪರಿಹಾರವನ್ನು ತ್ವರಿತವಾಗಿ ನೀಡಬೇಕು.
ಮನೆಹಾನಿ, ಪ್ರಾಣಹಾನಿ ಉಂಟಾದಾಗ 48 ಗಂಟೆಯಲ್ಲಿ ಪರಿಹಾರ ನೀಡಬೇಕು. ಕಂಟ್ರೋಲ್ ರೂಮ್ ಸದಾ ಆಕ್ಟಿವ್ ಆಗಿರಬೇಕು. ಕಾಳಜಿ ಕೇಂದ್ರದಲ್ಲಿ ಇಲಾಖೆ ಸೂಚಿಸಿದ ಪ್ರಕಾರವೇ ಊಟೋಪಚಾರ ವ್ಯವಸ್ಥೆ ಮಾಡಬೇಕು. ಈಗಿನಿಂದಲೇ ಎಲ್ಲ ರೀತಿಯ ರೂಪುರೇಷೆ ಸಿದ್ಧಪಡಿಸಬೇಕು. ಎಲ್ಲೆಲ್ಲಿ ಭೂಕುಸಿತ ಆಗುವ ಸಾಧ್ಯತೆ ಇದೆಯೋ ಅಲ್ಲಿನ ಜನರ ಮನವೊಲಿಸಿ ಖುದ್ದು ಡಿಸಿಗಳೇ ಸ್ಥಳಾಂತರ ಮಾಡಿಸಬೇಕು. ಪ್ರಾಣಹಾನಿ ಆಗದಂತೆ ತಡೆಯುವುದು ನಮ್ಮ ಮೊದಲ ಆದ್ಯತೆ ಆಗಬೇಕಿದೆ ಎಂದರು.
Four teams of NDRF (Central Disaster Protection Force) will arrive in the state next week as a precautionary measure in the wake of fears of monsoon rains in the state. The Minister of Revenue. Ashok informed him that the arrival of the state would be ready for operation just a week before the arrival of the monsoon.The first of four NDRF teams will be deployed in Dakshina Kannada – Udupi, Uttar Kannada and surrounding areas. The second team will be deployed in Kodagu – Mysore, Hassan and Chikmagalur.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm