ಬ್ರೇಕಿಂಗ್ ನ್ಯೂಸ್
21-05-22 04:38 pm HK News Desk ಕರ್ನಾಟಕ
ಮೈಸೂರು, ಮೇ 21 : ಈ ಬಾರಿ ಯೋಗ ದಿನಾಚರಣೆಗೆ ಪ್ರಧಾನಿ ನರೇಂದ್ರ ಮೋದಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸುತ್ತಿದ್ದಾರೆ ಎನ್ನುವ ಮಾಹಿತಿಯಿದ್ದು ಜಿಲ್ಲಾಡಳಿತ ಸಿದ್ಧತೆಯಲ್ಲಿ ತೊಡಗಿದೆ.
ಪ್ರಧಾನಿ ನೇತೃತ್ವದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಈ ಬಾರಿ ಮೈಸೂರು ಅಥವಾ ಕಾಶ್ಮೀರದ ಲಡಾಕ್ ನಲ್ಲಿ ನಡೆಯುವುದು ಬಹುತೇಕ ಫೈನಲ್ ಆಗಿತ್ತು. ಮೈಸೂರು ಯೋಗ ಹಬ್ ಆಗಿರುವುದರಿಂದ ಮೋದಿ ಅವರು ಅಂತಿಮವಾಗಿ ಮೈಸೂರಿಗೆ ಬರುವುದನ್ನು ಖಚಿತಪಡಿಸಿದ್ದಾರೆ.
ಈ ಬಾರಿ ಜೂನ್ 21ರ ಅಂತಾರಾಷ್ಟ್ರೀಯ ಯೋಗ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೈಸೂರಿಗೆ ಕರೆಸಲು ಸಂಸದ ಪ್ರತಾಪಸಿಂಹ ಖುದ್ದು ದೆಹಲಿಗೆ ತೆರಳಿದ್ದರು. ಕೇಂದ್ರದ ಆಯುಷ್ ತಂಡವೂ ಏ.29ರಂದು ಮೈಸೂರಿಗೆ ಭೇಟಿ ನೀಡಿ ಅಗತ್ಯ ವ್ಯವಸ್ಥೆಗಳನ್ನು ಪರಿಶೀಲಿಸಿ ಹೋಗಿತ್ತು. ಭದ್ರತಾ ಅಧಿಕಾರಿಗಳಿಂದಲೂ ಗ್ರೀನ್ ಸಿಗ್ನಲ್ ಸಿಕ್ಕ ಬಳಿಕ ಮೋದಿ ಮೈಸೂರಿಗೆ ಬರುವುದನ್ನು ಖಚಿತ ಪಡಿಸಿದ್ದಾರೆ ಎನ್ನಲಾಗುತ್ತಿದೆ.
![]()
2015ರಿಂದ ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನವಾಗಿ ವಿಶ್ವಸಂಸ್ಥೆ ಘೋಷಣೆ ಮಾಡಿದ ಬಳಿಕ ಆಯುಷ್ ಸಚಿವಾಲಯವು ದೇಶಾದ್ಯಂತ ಕಾರ್ಯಕ್ರಮ ನಡೆಸುತ್ತಾ ಬಂದಿದೆ. ಪ್ರಧಾನಿ ಮೋದಿ ಅವರು ಪ್ರತಿವರ್ಷ ಒಂದೊಂದು ರಾಜ್ಯದ ನಗರಕ್ಕೆ ತೆರಳಿ ಯೋಗಾಸನಗಳನ್ನು ಮಾಡುವ ಮೂಲಕ ಯೋಗದ ಮಹತ್ವವನ್ನು ಜಗತ್ತಿಗೆ ಸಾರುವ ಕೆಲಸ ಮಾಡುತ್ತಿದ್ದಾರೆ. 2015ರಲ್ಲಿ ದೆಹಲಿಯ ರಾಜಪಥದಲ್ಲಿ ಮೋದಿ ಯೋಗ ಸಂದೇಶ ಸಾರಿದ್ದರು. 2016ರಲ್ಲಿ ಚಂಡೀಗಢ, 2017ರಲ್ಲಿ ಲಕ್ನೋ, 2018ರಲ್ಲಿ ಉತ್ತರಾಖಂಡದ ಡೆಹ್ರಾಡೂನ್, 2019ರಲ್ಲಿ ಜಾರ್ಖಂಡಿನ ರಾಂಚಿಯಲ್ಲಿ ಪ್ರಧಾನಿ ನೇತೃತ್ವದಲ್ಲಿ ಯೋಗ ದಿನಾಚರಣೆ ನಡೆದಿತ್ತು. ನರೇಂದ್ರ ಮೋದಿ ಸ್ವತಃ ಯೋಗಾಸನಗಳನ್ನು ಮಾಡಿ ಯೋಗದ ಮಹತ್ವ ಪ್ರಚುರಪಡಿಸಿದ್ದರು. ಕಳೆದ ಎರಡು ವರ್ಷದಲ್ಲಿ ಕೋವಿಡ್ ಕಾರಣದಿಂದ ಯಾವ ರಾಜ್ಯದಲ್ಲೂ ಯೋಗ ದಿನಾಚರಣೆ ನಡೆದಿರಲಿಲ್ಲ.

ಮೈಸೂರಿನಲ್ಲಿ ಯೋಗ ಫೆಡರೇಶನ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಸಲು ಸಿದ್ಧತೆ ಮಾಡಿಕೊಂಡಿವೆ. ಅರಮನೆ ಎದುರು ಅಥವಾ ರೇಸ್‌ಕೋರ್ಸ್‌ನಲ್ಲಿ ಕಾರ್ಯಕ್ರಮ ನಡೆಸಲು ಜಿಲ್ಲಾಡಳಿತ ಉದ್ದೇಶಿಸಿದೆ. ಆದರೆ, ಒಂದೂವರೆ ಲಕ್ಷ ಜನರನ್ನು ಸೇರಿಸುವ ಗುರಿ ಇಟ್ಟುಕೊಳ್ಳಲಾಗಿದೆ.
Prime Minister Narendra Modi will be part of the International Yoga Day celebrations in Mysuru on June 21.Union Ayush Department told Karnataka Chief Secretary P Ravi Kumar that all necessary arrangements be made for PM's visit. The Ministry of Ayush is the nodal Ministry for observation of the International Day of Yoga every year.
22-09-26 08:58 pm
HK News Staffer
ಅರಣ್ಯ ಇಲಾಖೆ ಎಂದರೆ ಜನರಿಗೆ ಕಷ್ಟ ಕೊಡುವ ಇಲಾಖೆ ; ನ...
22-09-26 08:30 pm
ಎಡಪಂಥೀಯ ಉಗ್ರವಾದ ಹೆಸರಲ್ಲಿ 'ಮಿಷನರಿ ಚಟುವಟಿಕೆ' ;...
21-09-26 12:58 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
22-09-26 08:32 pm
HK News Staffer
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
22-09-26 09:00 pm
HK News Staffer
ಅತಿ ವೇಗದ ಚಾಲನೆ ; ಮರೋಳಿಯಲ್ಲಿ ಹೈಟೆನ್ಶನ್ ವಿದ್ಯುತ...
22-09-26 07:05 pm
ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ: ಶವ...
22-09-26 06:59 pm
ಪೆರ್ನೆಯಲ್ಲಿ ಇಬ್ಬರು ಮಕ್ಕಳ ಬಾವಿಗೆ ಎಸೆತ ಪ್ರಕರಣ :...
22-09-26 02:57 pm
ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತಕ್ಕೆ ಟ್ರಾಪ್ ಆದ ಬಜ್ಪ...
21-09-26 08:21 pm