ಬ್ರೇಕಿಂಗ್ ನ್ಯೂಸ್
23-05-22 08:25 pm HK News Desk ದೇಶ - ವಿದೇಶ
ದಾವೋಸ್, ಮೇ 23 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಿಜರ್ಲ್ಯಾಂಡ್ ನ ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಪಾಲ್ಗೊಂಡು ಹೂಡಿಕೆದಾರರನ್ನು ಆಕರ್ಷಿಸಲು ಪ್ರಮುಖ ಕಂಪನಿ ಪ್ರತಿನಿಧಿಗಳ ಜೊತೆ ಮಾತುಕತೆ ನಡೆಸಿದ್ದಾರೆ. ಗಲ್ಫ್ ರಾಷ್ಟ್ರಗಳಲ್ಲಿ ಪ್ರಖ್ಯಾತಿ ಪಡೆದಿರುವ ಲುಲು ಗ್ರೂಪ್ ಇಂಟರ್ ನ್ಯಾಷನಲ್ ಕಂಪನಿಯ ನಿರ್ದೇಶಕ ಎ.ವಿ.ಅನಂತರಾಮನ್ ಅವರೊಂದಿಗೆ ಸಿಎಂ ಮಾತುಕತೆ ನಡೆಸಿದ್ದು ಕರ್ನಾಟಕದಲ್ಲಿ ಹೂಡಿಕೆ ಮಾಡುವ ಕುರಿತು ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.
ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು ಎರಡು ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿದ್ದು, ನಾಲ್ಕು ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಿದೆ. ಈ ಮೂಲಕ 10 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಗೆ ರಾಜ್ಯ ಸರಕಾರ ನಿರೀಕ್ಷೆ ಇಟ್ಟುಕೊಂಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಜ್ಯೂಬಿಲಿಯಂಟ್ ಗ್ರೂಪ್, ಹಿಟಾಚಿ ಹಾಗೂ ಸೀಮನ್ಸ್ ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಿದ್ದಾರೆ.
ಕರ್ನಾಟಕದಲ್ಲಿ ಫಾರ್ಮಾ ಮತ್ತು ಎಫ್.ಎಂ.ಸಿ.ಜಿ ವಲಯದಲ್ಲಿ ಹೂಡಿಕೆಯ ಅವಕಾಶಗಳನ್ನು ಹೆಚ್ಚಿಸುವಂತೆ ಮುಖ್ಯಮಂತ್ರಿ ಕಂಪನಿ ಪ್ರತಿನಿಧಿಗಳಿಗೆ ಮನವಿ ಮಾಡಿದ್ದಾರೆ. ಧಾರವಾಡದಲ್ಲಿ ಎಫ್.ಎಂ.ಸಿ.ಜಿ ವಲಯದಲ್ಲಿ ಹೂಡಿಕೆಗೆ ವಿಶೇಷ ಪ್ಯಾಕೇಜ್ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದರು.
ಜ್ಯೂಬಿಲಿಯಂಟ್ ಫುಡ್ ವರ್ಕ್ಸ್ ವತಿಯಿಂದ ಹೊಸತಾಗಿ ಆಹಾರ ಸಾಮಗ್ರಿ ತಯಾರಿ ಘಟಕ ಪ್ರಾರಂಭಿಸಲು ಹಾಗೂ ಜ್ಯೂಬಿಲಿಯಂಟ್ ಬಯೋಸಿಸ್ ದೇವನಹಳ್ಳಿಯಲ್ಲಿ 10 ಎಕರೆ ಪ್ರದೇಶದಲ್ಲಿ ಆರ್ ಅಂಡ್ ಡಿ ಸೆಂಟರ್ ಸ್ಥಾಪಿಸಲು ತೀರ್ಮಾನಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ 9000 ಜನರು ಜುಬಿಲಿಯಂಟ್ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದಾರೆ.
ಹಿಟಾಚಿ ಎನರ್ಜಿ ಸಂಸ್ಥೆಯ ಮುಖ್ಯಸ್ಥರೊಂದಿಗೆ ನಡೆದ ಮಾತುಕತೆ ಸಂದರ್ಭದಲ್ಲಿ ಕಂಪನಿ ಪ್ರತಿನಿಧಿಗಳು ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಘಟಕಗಳ ಸ್ಥಾಪನೆಗೆ ಒಲವು ತೋರಿದ್ದಾರೆ.
ಬೆಂಗಳೂರಿನಲ್ಲಿ ಎರಡು ಪ್ರತ್ಯೇಕ ಯೋಜನೆಗಳನ್ನು ಸೀಮೆನ್ಸ್ ಸಂಸ್ಥೆ ಕೈಗೆತ್ತಿಕೊಳ್ಳುವ ನಿರೀಕ್ಷೆಯಿದೆ. ಮ್ಯಾಗ್ನೆಟಿಕ್ ಇಮೇಜಿಂಗ್ ಮತ್ತು ಡಯಾಗ್ನಾಸ್ಟಿಕ್ಸ್ ಮೇಲೆ ಕೇಂದ್ರೀಕೃತವಾದ ಆರ್ ಅಂಡ್ ಡಿ ಆರೋಗ್ಯ ಯೋಜನೆಯಡಿ ವೈದ್ಯಕೀಯ ಸಲಕರಣೆಗಳನ್ನು ಉತ್ಪಾದಿಸುವ ಘಟಕವನ್ನು ಬೊಮ್ಮಸಂದ್ರದಲ್ಲಿ ಸ್ಥಾಪಿಸಲು ಯೋಜಿಸಲಾಗಿದೆ. ಈ ಘಟಕ ಇದೇ ಸೆಪ್ಟೆಂಬರ್ ನಲ್ಲಿ ಶಂಕುಸ್ಥಾಪನೆ ನೆರವೇರಿಸಲು ಮುಂದಾಗಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿಗಳನ್ನು ಸಂಸ್ಥೆ ಆಹ್ವಾನಿಸಿದೆ. ಬೆಂಗಳೂರಿನಲ್ಲಿ ಸೀಮನ್ಸ್ ಸಂಸ್ಥೆ 2500 ಇಂಜಿನಿಯರ್ ಗಳನ್ನು ಹೊಂದಿದೆ.
ಬಿಯಾಂಡ್ ಬೆಂಗಳೂರು ಯೋಜನೆಯಡಿ ತುಮಕೂರು, ಹುಬ್ಬಳ್ಳಿ- ಧಾರವಾಡ ಮತ್ತು ಮೈಸೂರು ನಗರಗಳಲ್ಲಿಯೂ ಹೂಡಿಕೆ ಮಾಡುವ ಕುರಿತು ರಾಜ್ಯ ಸರ್ಕಾರ ಮತ್ತು ಸೀಮನ್ಸ್ ಸಂಸ್ಥೆ ಮಾತುಕತೆ ನಡೆಸಿದೆ.
ರಾಜ್ಯದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆಯ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.
Karnataka Chief Minister Basavaraj Bommai left for Davos on Sunday to participate in the world economic forum (WEF) , encouraged by reports of Karnataka topping in the FDI numbers for the fourth quarter. The southern state topped in the FDI chart in the first three quarters of the last fiscal year, too. The chief minister said in a tweet that Karnataka has once again bagged the highest share of FDI inflow, most of which in the computer hardware and software sector, at 53% of India's share followed by Delhi and Maharashtra at 17% each.
20-01-25 07:00 pm
HK News Desk
Hassan Suicide, Online Gaming: ಅಮ್ಮಾ ನನ್ನನ್ನು...
20-01-25 04:24 pm
ಕೇಸರಿ ಮನೆಯಲ್ಲಿ ಬಣ ಬಡಿದಾಟ ಜೋರು ; ಯತ್ನಾಳ್ ಬಣದ ಎ...
19-01-25 08:30 pm
ಮುಡಾ ಸೈಟ್ ಹಗರಣ ; 300 ಕೋಟಿ ಮೌಲ್ಯದ 142 ಆಸ್ತಿಗಳನ...
18-01-25 05:05 pm
ಗದಗ ; ಪ್ರೀತಿಸಲು ಪೀಡಿಸುತ್ತಿದ್ದ ಇಬ್ಬರು ಯುವಕರು,...
16-01-25 05:30 pm
19-01-25 08:17 pm
HK News Desk
Israel War: ಕಡೆಗೂ ಕದನ ವಿರಾಮ ಘೋಷಿಸಿದ ಇಸ್ರೇಲ್ ;...
19-01-25 06:35 pm
ಮಂಗಳೂರಿನ ಕುದುರೆಮುಖ ಕಬ್ಬಿಣ ಅದಿರು ಕಂಪನಿ ಎನ್ಎಂಡಿ...
18-01-25 06:20 pm
Vijay Kiran Anand 2025: ಮಹಾ ಕುಂಭ ಮೇಳದ ಮುಖ್ಯ ಉ...
16-01-25 09:01 pm
Actor Saif Ali Khan attack stabbed: ಬಾಲಿವುಡ್...
16-01-25 04:24 pm
20-01-25 11:05 pm
Mangalore Correspondent
Mangalore, Ivan dsouza, CM Siddaramaiah: ಬಹು...
20-01-25 06:00 pm
International Kite Festival 2025, Thannirbhav...
18-01-25 09:27 pm
Mangalore Dinesh Gundu Rao, belthandy: ತಾಲೂಕು...
18-01-25 06:16 pm
CM Siddaramaiah, multicultural fest, Mangalor...
17-01-25 11:10 pm
20-01-25 10:18 pm
HK News Desk
Mangalore Kotekar Bank Robbery, Three Arreste...
20-01-25 07:19 pm
Mangalore Kotekar Robbery, Davanagere: ಮಂಗಳೂರ...
20-01-25 05:20 pm
Mysuru Robbery, Bidar Mangalore, Crime; ಬೀದರ್...
20-01-25 01:25 pm
Bidar Bank Robbery, bihar gang, Update: ಬೀದರ್...
19-01-25 07:52 pm