ಬ್ರೇಕಿಂಗ್ ನ್ಯೂಸ್
24-05-22 10:14 pm HK News Desk ದೇಶ - ವಿದೇಶ
ಹೈದರಾಬಾದ್, ಮೇ 24: ದಲಿತ ಸಂಘಟನೆಗಳ ಒತ್ತಾಯಕ್ಕೆ ಮಣಿದು ಆಂಧ್ರಪ್ರದೇಶದ ಜಗನ್ ಮೋಹನ್ ರೆಡ್ಡಿ ಸರಕಾರ ಕೋಣಸೀಮಾ ಜಿಲ್ಲೆಗೆ ಬಿ.ಆರ್.ಅಂಬೇಡ್ಕರ್ ಕೋಣಸೀಮಾ ಎಂದು ಮರು ನಾಮಕರಣ ಮಾಡಲು ನಿರ್ಧರಿಸಿದ್ದನ್ನು ವಿರೋಧಿಸಿ ಜಿಲ್ಲಾ ಕೇಂದ್ರ ಅಮಲಾಪುರ ನಗರದಲ್ಲಿ ಭಾರೀ ಪ್ರತಿಭಟನೆ ನಡೆದಿದೆ. ಈ ವೇಳೆ, ಉದ್ರಿಕ್ತ ಪ್ರತಿಭಟನಾಕಾರರು ಸಾರಿಗೆ ಸಚಿವ ಪಿನ್ಪೈ ವಿಶ್ವರೂಪ ಅವರ ಮನೆಗೆ ಬೆಂಕಿ ಹಚ್ಚಿದ್ದಾರೆ. ಸಚಿವರಿಗೆ ಸೇರಿದ ಮೂರು ಕಾರುಗಳಿಗೂ ಬೆಂಕಿ ಹಾಕಿದ್ದಾರೆ.
ಪ್ರತಿಭಟನಾಕಾರರು ಹಿಂದೆ ಇರುವಂತೆಯೇ ಜಿಲ್ಲೆಯ ಹೆಸರನ್ನು ಉಳಿಸಬೇಕೆಂದು ಒತ್ತಾಯಿಸಿ ಮೆರವಣಿಗೆ ನಡೆಸಿದ್ದಾರೆ. ಪೊಲೀಸರು 144 ಸೆಕ್ಷನ್ ವಿಧಿಸಿದ್ದರೂ, ಅದನ್ನು ಉಲ್ಲಂಘಿಸಿ ಧರಣಿ ನಡೆಸಿದ್ದಾರೆ. ಈ ವೇಳೆ, ಪೊಲೀಸರ ಮೇಲೆ ಕಲ್ಲು ತೂರಾಟವೂ ನಡೆದಿದ್ದು, ಹಲವು ಕಡೆ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ನಗರದಲ್ಲಿರುವ ಸಾರಿಗೆ ಸಚಿವರ ಮನೆ, ವಾಹನಗಳಿಗೆ ಬೆಂಕಿ ಹಾಕಿದ್ದಾರೆ.
ಉದ್ರಿಕ್ತರನ್ನು ಚದುರಿಸಲು ಪೊಲೀಸರು ಲಘು ಲಾಠಿಚಾರ್ಜ್ ನಡೆಸಿದ್ದಾರೆ. ಈ ವೇಳೆ, ಪೊಲೀಸರ ಮೇಲೆ ಕಲ್ಲು ತೂರಿದ್ದು ಡಿಎಸ್ಪಿ ಮಾಧವ ರೆಡ್ಡಿ ಮತ್ತು ಎಸ್ಪಿ ಗನ್ ಮೇನ್ ಗಾಯಗೊಂಡಿದ್ದಾರೆ. ಗೃಹ ಸಚಿವ ತಾನೇತಿ ವನಿತಾ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಈ ರೀತಿಯ ಹಿಂಸೆಯನ್ನು ಖಂಡಿಸುತ್ತೇನೆ. ಜಿಲ್ಲೆಗೆ ಮರು ನಾಮಕರಣ ಮಾಡುವ ಬಗ್ಗೆ ಎಲ್ಲ ಪಕ್ಷಗಳ ಸಹಮತ ಇದೆ. ಜನತೆ ಶಾಂತಿ ಕಾಪಾಡಬೇಕು. ಘಟನೆಯಲ್ಲಿ 20 ಮಂದಿ ಪೊಲೀಸರು ಗಾಯಗೊಂಡಿದ್ದಾರೆ ಎಂದಿದ್ದಾರೆ.
ಸಾರಿಗೆ ಸಚಿವ ಪಿನ್ಪೈ ವಿಶ್ವರೂಪಂ ಅಮಲಾಪುರಂ ವಿಧಾನಸಭೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಅವರ ಕ್ಷೇತ್ರದಲ್ಲಿಯೇ ಜನರು ಬೀದಿಗೆ ಇಳಿದಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಕೋಣಸೀಮಾ ಜಿಲ್ಲೆಯ ಹೆಸರನ್ನು ಭೀಮರಾವ್ ರಾಮ್ ಜಿ ಅಂಬೇಡ್ಕರ್ ಕೋಣಸೀಮಾ ಎಂಬುದಾಗಿ ನಾಮಕರಣ ಮಾಡಲು ನಿರ್ಧಾರ ತೆಗೆದುಕೊಂಡಿದ್ದರು. ಅಮಲಾಪುರಂ ಈ ಜಿಲ್ಲೆಯ ಕೇಂದ್ರ ಸ್ಥಾನವಾಗಿದ್ದು, ಅದೇ ಪ್ರದೇಶದಲ್ಲಿ ಈಗ ಹಿಂಸೆ ಭುಗಿಲೆದ್ದಿದೆ.
The home of state Transport Minister Pinipe Viswarup was set ablaze by locals as tensions prevailed in Andhra Pradesh's Amalapuram town where hundreds protested against the state's decision to rename a district after BR Ambedkar. The minister's family were rescued from the house by the police.A rally was planned to the district Collector’s office in Amalapuram on May 24, Tuesday. The protesters, despite police curbs, demonstrated against the state government’s proposal to rename the district as BR Ambedkar Konaseema district.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm