ಬ್ರೇಕಿಂಗ್ ನ್ಯೂಸ್
29-05-22 03:34 pm HK News Desk ದೇಶ - ವಿದೇಶ
ಬೀದರ್, ಮೇ 29 : ಬೀದರಿನಿಂದ ಪುಣ್ಯಕ್ಷೇತ್ರ ಅಯೋಧ್ಯೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ ಉತ್ತರ ಪ್ರದೇಶದ ಲಖಿಂಪುರ ಖೇರಿ ಬಳಿ ಭೀಕರ ಅಪಘಾತಕ್ಕೀಡಾಗಿದ್ದು ಏಳು ಮಂದಿ ದಾರುಣ ಸಾವಿಗೀಡಾಗಿದ್ದಾರೆ.
ಲಖೀಂಪುರ ಖೇರಿ ಮತ್ತು ಮೋತಿಪುರ ಜಿಲ್ಲೆಗಳ ನಡುವಿನ ಪ್ರದೇಶವಾದ ನೌನಿಹಾಲ್ ಎಂಬಲ್ಲಿನ ಖೇರಿ-ನನ್‌ಪಾರಾ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಟೆಂಪೋ ಟ್ರಾವೆಲರ್ (ಕೆಎ 03-ಎಎ-7654) ಮತ್ತು ಟ್ರಕ್ (ಯುಪಿ 21-ಸಿಟಿ-4120) ನಡುವೆ ಇಂದು ಬೆಳಗ್ಗಿನ ಜಾವ ಅಪಘಾತ ನಡೆದಿದ್ದು ಏಳು ಮಂದಿ ಸಾವು ಕಂಡಿದ್ದಾರೆ.
ಕರ್ನಾಟಕದ ಬೀದರ್ ಜಿಲ್ಲೆಗೆ ಸೇರಿದ ಒಟ್ಟು 16 ಜನರು ಟೆಂಪೋ ಟ್ರಾವೆಲರ್ಸ್ ನಲ್ಲಿ ಅಯೋಧ್ಯೆಯ ರಾಮನ ದರ್ಶನಕ್ಕೆ ತೆರಳುತ್ತಿದ್ದರು.
ದುರ್ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದಾರೆ. ಗಾಯಾಳು 9 ಜನರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಬಹ್ರೈಚ್ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಎಸ್‌ಪಿ ಭೇಟಿ ನೀಡಿದ್ದು ಗಾಯಾಳುಗಳ ಗುರುತು ಪತ್ತೆಗೆ ಮಾರ್ಗದರ್ಶನ ನೀಡಿದ್ದಾರೆ. ಮೋತಿಪೂರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Seven of Bidar killed in a ghastly accident at Uttarpradesh as they were on the way to a religious place. Among seven been killed nine are said to be critical.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 07:15 pm
Mangalore Correspondent
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
Paakashala Resturant, Mangalore: ಮಂಗಳೂರಿನಲ್ಲು...
05-05-25 11:22 am
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm