ಬ್ರೇಕಿಂಗ್ ನ್ಯೂಸ್
02-06-22 10:38 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 2: ಮೋದಿ ಸರಕಾರ ಇತಿಹಾಸದಿಂದ ಪಾಠ ಕಲಿಯುತ್ತಿಲ್ಲ. 1989ರಲ್ಲಿ ಆಗಿನ ಸರಕಾರ ಮಾಡಿದ್ದ ಅಪಚಾರವನ್ನು ಮತ್ತೆ ಮಾಡಲಾಗುತ್ತಿದೆ. ಕಾಶ್ಮೀರದಲ್ಲಿ ಮತ್ತೆ ಹಿಂಸೆ ಮರುಕಳಿಸುತ್ತಿದೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ.
ಕೇಂದ್ರ ಸರಕಾರ ಕಾಶ್ಮೀರಿ ಪಂಡಿತರನ್ನು ಮನುಷ್ಯರಂತೆ ನೋಡುತ್ತಿಲ್ಲ. ಅವರು ಕೇವಲ ಮತದಾರರಾಗಿ ಅಷ್ಟೇ ಕಾಣುತ್ತಿದೆ. 1987ರಲ್ಲಿ ಇದೇ ರೀತಿ ಆಗಿತ್ತು. ಸ್ಥಳೀಯ ರಾಜಕಾರಣಿಗಳು, ಸ್ಥಳೀಯ ನಾಯಕರನ್ನು ಮಾತನಾಡಲು ಬಿಟ್ಟಿರಲಿಲ್ಲ. ಅವರ ಬಾಯಿಗಳನ್ನು ಕಟ್ಟಿಹಾಕಲಾಗಿತ್ತು. ಅದರಿಂದಾಗಿ ಕಾಶ್ಮೀರದಲ್ಲಿ ಉಗ್ರವಾದ ಹೆಚ್ಚಾಗಿತ್ತು. ಅದೇ ರೀತಿಯ ತಪ್ಪನ್ನು ಈಗ ಮೋದಿ ಸರಕಾರ ಮಾಡುತ್ತಿದೆ ಎಂದು ಓವೈಸಿ ಹೇಳಿದ್ದಾರೆ.
1987ರಲ್ಲಿ ನಡೆದ ಚುನಾವಣೆಯ ಪರಿಣಾಮ 1989ರಲ್ಲಿ ಆಗಿತ್ತು. ಕಾಶ್ಮೀರ ಕಣಿವೆಯಲ್ಲಿ ಪ್ರತ್ಯೇಕತಾವಾದ, ಭಯೋತ್ಪಾದನೆ ಹೆಚ್ಚಿದ್ದರಿಂದಾಗಿ ಸಾವು ನೋವು ಆಗಿತ್ತು. ಈ ರೀತಿಯ ನಡೆಯನ್ನು ನಾನು ಖಂಡಿಸುತ್ತೇನೆ ಎಂದು ಒವೈಸಿ ಹೇಳಿದ್ದಾರೆ. ಮೇ ಆರಂಭದಿಂದ ತೊಡಗಿ ಕಾಶ್ಮೀರ ಕಣಿವೆಯಲ್ಲಿ ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಭಯೋತ್ಪಾದಕರು ಕೊಲ್ಲುತ್ತಿದ್ದು, ಸರಣಿಯಂತೆ ಸರಕಾರಿ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿದ್ದಾರೆ. ಪೊಲೀಸರು, ಸರಕಾರಿ ಕಚೇರಿಗಳಲ್ಲಿ ಇರುವ ಕಾಶ್ಮೀರಿ ಪಂಡಿತರನ್ನು ಉಗ್ರರು ಕೊಲ್ಲುತ್ತಿದ್ದಾರೆ. ಇದರಿಂದಾಗಿ ಕಣಿವೆ ಭಾಗದಲ್ಲಿ ಹಾಹಾಕಾರ ಉಂಟಾಗಿದ್ದು, ಕಾಶ್ಮೀರ್ ಫೈಲ್ಸ್ ಚಿತ್ರದ ಭಯಾನಕ ಚಿತ್ರಣ ಮರುಕಳಿಸಿದೆ. ಕಾಶ್ಮೀರದಲ್ಲಿ ಶಾಂತಿ ಸ್ಥಾಪಿಸಲು ಕ್ರಮ ಕೈಗೊಳ್ಳದಿದ್ದರೆ, ಊರು ತೊರೆದು ಹೋಗುವುದಾಗಿ ಪಂಡಿತರು ಬಹಿರಂಗ ಬೆದರಿಕೆ ಹಾಕಿದ್ದಾರೆ.
AIMIM chief Asaduddin Owaisi while talking on the issue of targeted killings in the Kashmir valley, said the central government is repeating the mistakes from 1989.He said, “The Modi government is not learning lessons from history and is making a mistake similar to what was done in 1989.” He told ANI that in 1989 too, political outlets were shut down and politicians of the Kashmir valley were not allowed to speak.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm