ಬ್ರೇಕಿಂಗ್ ನ್ಯೂಸ್
03-06-22 09:40 pm HK News Desk ದೇಶ - ವಿದೇಶ
ಕಾನ್ಪುರ, ಜೂನ್ 3: ಉತ್ತರ ಪ್ರದೇಶದ ಕಾನ್ಪುರದಲ್ಲಿ ಮುಸ್ಲಿಂ ಸಂಘಟನೆಗಳ ಪ್ರತಿಭಟನೆ ಹಿಂಸೆಗೆ ತಿರುಗಿದೆ. ಇತ್ತೀಚೆಗೆ ಟಿವಿ ಚರ್ಚೆ ಒಂದರಲ್ಲಿ ಬಿಜೆಪಿ ನಾಯಕಿ ನೂಪುರ್ ಶರ್ಮಾ, ಮಹಮ್ಮದ್ ಪೈಗಂಬರ್ ಬಗ್ಗೆ ಆಡಿರುವ ಮಾತುಗಳನ್ನು ಖಂಡಿಸಿ ಮುಸ್ಲಿಂ ಸಂಘಟನೆಗಳು ಕಾನ್ಪುರದಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದವು. ಅದರಂತೆ ಇಂದು ಹರತಾಳ ನಡೆದಿದ್ದು ನಗರದ ಪರೇಡ್ ಚೌಕ್ ನಲ್ಲಿ ಎಲ್ಲ ಅಂಗಡಿಗಳನ್ನು ಮುಚ್ಚಿಸಲು ಒಂದು ಗುಂಪು ಮುಂದಾಗಿತ್ತು.
ಈ ವೇಳೆ, ಮಾತಿಗೆ ಮಾತು ಬೆಳೆದು ಎರಡು ಗುಂಪುಗಳು ಸೇರಿ ಪರಸ್ಪರ ಕಲ್ಲು ತೂರಾಟ ನಡೆಸಿವೆ. ಶುಕ್ರವಾರ ಮಧ್ಯಾಹ್ನ ಮಸೀದಿಗೆ ಬಂದಿದ್ದ ಮುಸ್ಲಿಮರ ಒಂದು ಗುಂಪು ಅಲ್ಲಿಂದಲೇ ಬೀದಿಗೆ ಇಳಿದಿತ್ತು. ಪರೇಡ್ ಚೌಕ್ ಮಾರುಕಟ್ಟೆ ಬಳಿ ಜನರು ಸೇರುತ್ತಲೇ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಇದೇ ವೇಳೆ, ನೂಪುರ್ ಶರ್ಮಾ ವಿರುದ್ಧ ಮಹಾರಾಷ್ಟ್ರದ ಪುಣೆ ಮತ್ತು ದಕ್ಷಿಣ ಮುಂಬೈನಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಗ್ಯಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆಯಾದ ವಿಚಾರದ ಬಗೆ ಟಿವಿ ಚರ್ಚೆಯಲ್ಲಿ ಪಾಲ್ಗೊಂಡಿದ್ದ ನೂಪುರ್ ಶರ್ಮಾ, ಇಸ್ಲಾಂ ಬಗ್ಗೆ ಪುಸ್ತಕದಲ್ಲಿ ಉಲ್ಲೇಖವಾಗಿರುವ ಅಂಶಗಳನ್ನು ಆಧರಿಸಿ ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ಟೀಕಿಸಿದ್ದರು. ಮಸೀದಿಯಲ್ಲಿ ಸಿಕ್ಕಿದ್ದು ಶಿವಲಿಂಗ ಅಲ್ಲ ಅನ್ನುವ ವಾದಕ್ಕೆ ಪ್ರತಿಯಾಗಿ ಹೇಳಿಕೆ ಕೊಟ್ಟಿದ್ದ ನೂಪುರ್ ಶರ್ಮಾ ಬಗ್ಗೆ ಭಾರೀ ಆಕ್ರೋಶ ಕೇಳಿಬಂದಿತ್ತು. ಜಾಲತಾಣದಲ್ಲಿ ಶರ್ಮಾ ಬಗ್ಗೆ ಅವಹೇಳನ ಮಾಡಿದ್ದಲ್ಲದೆ, ಮನೆಗೆ ನುಗ್ಗಿ ರೇಪ್ ಮಾಡುತ್ತೇವೆ. ಮನೆಯವರನ್ನು ಕೊಲ್ಲುತ್ತೇವೆ ಎಂದು ಆಕೆಗೆ ಬೆದರಿಕೆ ಹಾಕಲಾಗಿದೆ. ಈ ರೀತಿ ಬೆದರಿಕೆ ಒಡ್ಡಿದವರ ಸ್ಕ್ರೀನ್ ಶಾಟ್ ತೆಗೆದು ನೂಪುರ್ ಶರ್ಮಾ ದೆಹಲಿ ಪೊಲೀಸರಿಗೆ ಟ್ವೀಟ್ ಮಾಡಿದ್ದಾರೆ.
Hundreds clashed in Kanpur after a Muslim organization called to shut down shops at the Parade Market - one of the biggest wholesale markets in the city - over the alleged comments made by BJP leader Nupur Sharma about Prophet Mohammed in a televised debate.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm