ಬ್ರೇಕಿಂಗ್ ನ್ಯೂಸ್
04-06-22 04:18 pm HK News Desk ದೇಶ - ವಿದೇಶ
ಶ್ರೀನಗರ, ಜೂ 04: ಕಾಶ್ಮೀರಿ ಪಂಡಿತರು ಮತ್ತು ವಲಸೆ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಸರಣಿ ಹತ್ಯೆ ಮಾಡುತ್ತಿದ್ದಾರೆ. ಪರಿಣಾಮ 177 ಕಾಶ್ಮೀರಿ ಪಂಡಿತ ಶಿಕ್ಷಕರನ್ನು ಶ್ರೀನಗರದಿಂದ ಇತರೆ ಪ್ರದೇಶಗಳಿಗೆ ವರ್ಗಾವಣೆ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದೆ.
ಭಯೋತ್ಪಾದಕರ ಸರಣಿ ದಾಳಿಯ ಹಿನ್ನೆಲೆ ಕೇಂದ್ರಾಡಳಿತ ಪ್ರದೇಶದಲ್ಲಿ ಭದ್ರತಾ ಪರಿಸ್ಥಿತಿಯನ್ನು ಅವಲೋಕಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಭೆಯ ನಂತರ ಸರ್ಕಾರವು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

2012 ರಲ್ಲಿ ಪ್ರಧಾನಮಂತ್ರಿಗಳ ವಿಶೇಷ ಪ್ಯಾಕೇಜ್ ಅಡಿಯಲ್ಲಿ ಕಾಶ್ಮೀರಿ ಪಂಡಿತರು ಉದ್ಯೋಗಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ ಕಳೆದ ಮೇ 12 ರಂದು ಮಧ್ಯ ಕಾಶ್ಮೀರದ ಬುದ್ಗಾಮ್ ಜಿಲ್ಲೆಯ ಚದೂರ ಪ್ರದೇಶದಲ್ಲಿ ಭಯೋತ್ಪಾದಕರ ಗುಂಡಿಗೆ ರಾಹುಲ್ ಭಟ್ ಹತ್ಯೆಯಾಗಿದ್ದರು.

ಘಟನೆಯಿಂದ ತಲ್ಲಣಗೊಂಡಿದ್ದ ಪಂಡಿತರು, ವರ್ಗಾವಣೆ ಮಾಡಿ ಇಲ್ಲದಿದ್ದರೆ, ಸಾಮೂಹಿಕ ವಲಸೆ ಹೋಗುವ ಬೆದರಿಕೆ ಹಾಕಿ ಪ್ರತಿಭಟನೆಗಳನ್ನು ನಡೆಸುತ್ತಿದ್ದರು. ಭಟ್ ಹತ್ಯೆಯ ನಂತರ ಸುಮಾರು 6,000 ಸಿಬ್ಬಂದಿ ವರ್ಗಾವಣೆ ಕೋರಿ ಮನವಿ ಮಾಡಿದ್ದರು. ಆದರೆ ಸರ್ಕಾರ ಯಾವುದೇ ಕ್ರಮಗಳನ್ನು ತೆಗೆದುಕೊಂಡಿರಲಿಲ್ಲ. ಆದರೆ ನಿಯೋಜಿತ ದಾಳಿಗಳು ಹೆಚ್ಚಿದ ಹಿನ್ನೆಲೆ ಸರ್ಕಾರ ವರ್ಗಾವಣೆ ಮಾಡಲು ಆದೇಶಿಸಿದೆ.

ಗುರುವಾರ ಬ್ಯಾಂಕ್ ಉದ್ಯೋಗಿ ಮತ್ತು ಓರ್ವ ಇಟ್ಟಿಗೆ ಗೂಡು ಕಾರ್ಮಿಕರನ್ನು ಎರಡು ಪ್ರತ್ಯೇಕ ಘಟನೆಗಳಲ್ಲಿ ಹತ್ಯೆ ಮಾಡಲಾಗಿತ್ತು. ಮೇ 1 ರಿಂದ ಕಾಶ್ಮೀರದಲ್ಲಿ ನಡೆಯುತ್ತಿರುವ ಉದ್ದೇಶಿತ ಹತ್ಯೆಗಳಿಗೆ ಬ್ಯಾಂಕ್ ಮ್ಯಾನೇಜರ್ ಎಂಟನೇ ಮತ್ತು ಕಾರ್ಮಿಕ ಒಂಬತ್ತನೇ ಬಲಿಪಶುವಾಗಿದ್ದರು.
ಮಂಗಳವಾರ ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಶಾಲೆಯೊಂದರಲ್ಲಿ ಭಯೋತ್ಪಾದಕರ ಗುಂಡಿಗೆ ಮಹಿಳಾ ಶಿಕ್ಷಕಿಯೊಬ್ಬರು ಬಲಿಯಾಗಿದ್ದಾರೆ. ಮೇ 18 ರಂದು, ಭಯೋತ್ಪಾದಕರು ಉತ್ತರ ಕಾಶ್ಮೀರದ ಬಾರಾಮುಲ್ಲಾದಲ್ಲಿ ವೈನ್ ಶಾಪ್‍ಗೆ ನುಗ್ಗಿ ಗ್ರೆನೇಡ್ ಎಸೆದಿದ್ದರು. ಅಲ್ಲದೇ ಜಮ್ಮು ಪ್ರದೇಶದ ಒಬ್ಬ ವ್ಯಕ್ತಿಯನ್ನು ಕೊಂದಿದ್ದು, ಮೂವರು ಗಾಯಗೊಂಡಿದ್ದರು.
Amid an alarming spike in targeted killings in Kashmir, the government has ordered the transfer of 177 Kashmiri Pandit teachers posted in Srinagar to safer locations following demands to be relocated. The action comes a day after Home Minister Amit Shah chaired a high-level meeting to take stock of the security situation in the restive Union Territory in the wake of a string of attacks targeting the Kashmiri Pandit community and migrants workers.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm