ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್‌ ಸ್ಫೋಟ ;  8 ಮಂದಿ ದುರ್ಮರಣ

04-06-22 09:51 pm       HK News Desk   ದೇಶ - ವಿದೇಶ

ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯ ಬಾಯ್ಲರ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ 8 ಮಂದಿ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ.

Photo credits : ANI news

ಲಕ್ನೋ, ಜೂನ್ 4: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯ ಬಾಯ್ಲರ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ 8 ಮಂದಿ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ.

ಮುಖ್ಯಮಂತ್ರಿಗಳು ಜಿಲ್ಲಾಡಳಿತಕ್ಕೆ ಆದೇಶ ನೀಡಿದ್ದು ತಕ್ಷಣ ಸ್ಥಳಕ್ಕೆ ಭೇಟಿ ಕೊಡುವಂತೆ ತಿಳಿಸಲಾಗಿದೆ. ಸಂತ್ರಸ್ತರಿಗೆ ಬೇಕಾದ ಎಲ್ಲ ರೀತಿಯ ನೆರವನ್ನು ತಕ್ಷಣ ನೀಡಬೇಕಾಗಿ ಸೂಚಿಸಲಾಗಿದೆ," ಎಂದು ಹಿಂದಿಯಲ್ಲಿ ಟ್ವೀಟ್‌ ಮಾಡಲಾಗಿದೆ.

8 killed, 15 injured in factory fire in India | The Independent

8 Killed in Explosion at Factory of Uttar Pradesh News-Pipa | News PiPa

Eight killed,15 injured in boiler explosion at factory in UP's Hapur |  udayavani

ಈ ಘಟನೆ 'ಹೃದಯ ವಿದ್ರಾವಕ' ಎಂದು ಪ್ರಧಾನಿ ನರೇಂದ್ರ ಮೋದಿ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬದವರಿಗೆ ಅವರು ಸಂತಾಪ ಸೂಚಿಸಿದ್ದಾರೆ. "ಉತ್ತರ ಪ್ರದೇಶದ ಹಾಪುರದ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ ಅಪಘಾತ ಹೃದಯ ವಿದ್ರಾವಕವಾಗಿದೆ. ಈ ದುರಂತದಲ್ಲಿ ಜೀವ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸಂತಾಪಗಳನ್ನು ಸಲ್ಲಿಸುತ್ತೇನೆ. ಗಾಯಾಳುಗಳ ಚಿಕಿತ್ಸೆಯಲ್ಲಿ ರಾಜ್ಯ ಸರ್ಕಾರ ಸಕ್ರಿಯವಾಗಿ ತೊಡಗಿಕೊಂಡಿದ್ದು, ಎಲ್ಲ ಸಂಭಾವ್ಯ ಸಹಾಯಗಳನ್ನು ನೀಡಲಿದೆ" ಎಂದು ಟ್ವೀಟ್ ಮಾಡಿದ್ದಾರೆ.

At least 8 workers died and 19 were injured when a boiler exploded at a chemical factory in western Uttar Pradesh's Hapur district on Saturday afternoon, police said.They said there were 30 people in the affected area in the factory in the UPSIDC industrial area in Dholana, around 80 km from the national capital, when the incident occurred.