ಬ್ರೇಕಿಂಗ್ ನ್ಯೂಸ್
15-06-22 01:13 pm HK News Desk ದೇಶ - ವಿದೇಶ
ನವದೆಹಲಿ, ಜೂನ್ 15: ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಸತತ ಮೂರನೇ ದಿನವೂ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಸೋದರಿ ಪ್ರಿಯಾಂಕ ಗಾಂಧಿ ಜೊತೆಗೆ ಇಡಿ ಕಚೇರಿಗೆ ಆಗಮಿಸಿದ ರಾಹುಲ್, ವಿಚಾರಣಾ ಕೊಠಡಿಗೆ ತೆರಳಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ, ವಿರೋಧದ ನಡುವೆಯೇ ಇಡಿ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.
ಮಂಗಳವಾರ ರಾಹುಲ್ ಗಾಂಧಿಯನ್ನು ಸತತ ಹತ್ತು ಗಂಟೆಗಳ ಕಾಲ ಕುಳ್ಳಿರಿಸಿ, ಇಡಿ ಅಧಿಕಾರಿಗಳು ಪ್ರಶ್ನಿಸಿದ್ದಾರೆ. ವಿವಿಧ ಪ್ರಶ್ನೆಗಳನ್ನು ಮುಂದಿಟ್ಟು ಹೇಳಿಕೆ ದಾಖಲು ಮಾಡಿದ್ದಾರೆ. ಇದೇ ವೇಳೆ, ದೆಹಲಿಯ ಕಾಂಗ್ರೆಸ್ ಕಚೇರಿ ಸೇರಿದಂತೆ ಹಲವು ಕಡೆ ದೇಶದ ವಿವಿಧ ರಾಜ್ಯಗಳ ಕಾಂಗ್ರೆಸ್ ನಾಯಕರು ಆಗಮಿಸಿ ಪ್ರತಿಭಟನೆಗೆ ಮುಂದಾಗಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಎಐಸಿಸಿ ಕಚೇರಿ ಆವರಣದಲ್ಲಿ ಸೆಕ್ಷನ್ 144 ಹೇರಲಾಗಿದ್ದು ಕಾರ್ಯಕರ್ತರು ಪ್ರತಿಭಟನೆ ನಡೆಸುವುದಕ್ಕೆ ಅವಕಾಶ ನೀಡಿಲ್ಲ. ಹೀಗಾಗಿ ಅಲ್ಲಿಗೆ ವಿವಿಧ ರಾಜ್ಯಗಳಿಂದ ಆಗಮಿಸುತ್ತಿರುವ ಸಂಸದರನ್ನು ಪೊಲೀಸರು ಅರ್ಧ ದಾರಿಯಲ್ಲೇ ತಡೆದು ಹಿಂದಕ್ಕೆ ಕಳಿಸುತ್ತಿದ್ದಾರೆ. ಇದೇ ವೇಳೆ, ಅಕ್ಬರ್ ರೋಡ್ ನಿಂದ ಇಡಿ ಕಚೇರಿಗೆ ಪ್ರತಿಭಟನಾ ಧರಣಿ ನಡೆಸಲು ತಯಾರಿ ನಡೆಸಿದ್ದ ಮಹಿಳಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಹಿಳಾ ಪೊಲೀಸರು ಸುತ್ತವರಿದು ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದು ಬಸ್ಸಿನಲ್ಲಿ ತುಂಬಿಸಿ ಒಯ್ದಿದ್ದಾರೆ.
ರಾಹುಲ್ ಗಾಂಧಿಯನ್ನು ಇಡಿ ಅಧಿಕಾರಿಗಳು ವಿಚಾರಣೆಗೆ ಕರೆದು ಕಿರುಕುಳ ನೀಡುತ್ತಿರುವುದಕ್ಕೆ ಮುಂದೆ ಬೆಲೆ ತೆರಬೇಕಾಗಬಹುದು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ನಾವು ನಮ್ಮ ಪಕ್ಷದ ಕಚೇರಿಗೆ ತೆರಳುವುದಕ್ಕೂ ಪೊಲೀಸರು ಅನುಮತಿ ನೀಡುತ್ತಿಲ್ಲ. ನಾವು ಇಬ್ಬರು ಮುಖ್ಯಮಂತ್ರಿಗಳಿದ್ದೇವೆ, ಪಕ್ಷದ ಕಚೇರಿಗೆ ತೆರಳಲು ಬಿಡಿ ಎಂದರೂ ಪೊಲೀಸರು ಕೇಳುತ್ತಿಲ್ಲ ಎಂದು ಛತ್ತೀಸ್ ಗಢ ಸಿಎಂ ಭೂಪೇಶ್ ಬಾಘೇಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಹುಲ್ ವಿಚಾರಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ಹೈಡ್ರಾಮಾ ನಡೆಸಿದ್ದಾರೆ.
After over 20 hours of grilling, Rahul Gandhi is back at the Enforcement Directorate (ED) office for the 3rd straight day of questioning.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 08:10 pm
HK News
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm