ಕಾಶ್ಮೀರಿ ಪಂಡಿತರ ಹತ್ಯೆಗೂ, ಗೋರಕ್ಷಕರ ಹಿಂಸೆಗೂ ಹೋಲಿಸಿದ್ದ ನಟಿ ಸಾಯಿ ಪಲ್ಲವಿ ವಿರುದ್ಧ ಪೊಲೀಸ್ ದೂರು 

16-06-22 08:49 pm       HK News Desk   ದೇಶ - ವಿದೇಶ

ಕಾಶ್ಮೀರಿ ಪಂಡಿತರ ಹತ್ಯೆಯನ್ನು ದೇಶದಲ್ಲಿ ಗೋ ರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ಹತ್ಯೆಗೆ ಹೋಲಿಸಿ ಮಾತನಾಡಿದ ಬಹುಭಾಷಾ ನಟಿ ಸಾಯಿಪಲ್ಲವಿ ವಿರುದ್ಧ ಹೈದರಾಬಾದ್‌ನಲ್ಲಿ ಪೊಲೀಸ್ ದೂರು ದಾಖಲಾಗಿದೆ.

ಹೈದರಾಬಾದ್, ಜೂನ್ 16 : ಕಾಶ್ಮೀರಿ ಪಂಡಿತರ ಹತ್ಯೆಯನ್ನು ದೇಶದಲ್ಲಿ ಗೋ ರಕ್ಷಣೆ ಹೆಸರಿನಲ್ಲಿ ನಡೆಯುತ್ತಿರುವ ಹತ್ಯೆಗೆ ಹೋಲಿಸಿ ಮಾತನಾಡಿದ ಬಹುಭಾಷಾ ನಟಿ ಸಾಯಿಪಲ್ಲವಿ ವಿರುದ್ಧ ಹೈದರಾಬಾದ್‌ನಲ್ಲಿ ಪೊಲೀಸ್ ದೂರು ದಾಖಲಾಗಿದೆ.

ನಟಿ ಸಾಯಿ ಪಲ್ಲವಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಬಜರಂಗದಳ ಸದಸ್ಯ ಅಖಿಲ್ ಹೈದರಾಬಾದ್‌ನ ಸುಲ್ತಾನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಗ್ರೇಟ್ ಆಂಧ್ರ ಯೂಟ್ಯೂಬ್ ಚಾನೆಲ್‌ನ ಸಂದರ್ಶನ ಕಾರ್ಯಕ್ರಮದಲ್ಲಿ ನಟಿ ಸಾಯಿ ಪಲ್ಲವಿ, ಕಾಶ್ಮೀರಿ ಭಯೋತ್ಪಾದಕರನ್ನು ಗೋರಕ್ಷಕರಿಗೆ ಹೋಲಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ನಾವು ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಮತ್ತು ದೂರು ನೀಡಲು ಉದ್ದೇಶಿಸಿದ್ದೇವೆ. ನಟಿ ಹಾಗೂ ಚಿತ್ರದ ನಿರ್ದೇಶಕ ವೇಣು ಉಡುಗುಲ ವಿರುದ್ಧವೂ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ದೂರುದಾರರು ಒತ್ತಾಯಿಸಿದ್ದಾರೆ. ದೂರಿನ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿಲ್ಲ.

Actress Sai Pallavi says the genocide of Kashmiri Hindus and a cow smuggler  being beaten are similar crimes

ಸಾಯಿ ಪಲ್ಲವಿ ಹೇಳಿಕೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಯಾಗುತ್ತಿದೆ. ಕೆಲವರು ಸಾಯಿ ಪಲ್ಲವಿ ಪರವಾಗಿ ಟ್ವೀಟ್ ಮಾಡಿದ್ದರೆ, ಮತ್ತೆ ಕೆಲವರು ಸಾಯಿ ಪಲ್ಲವಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೆಲ ಹಿಂದೂ ಸಂಘಟನೆ ಕಾರ್ಯಕರ್ತರು ಟ್ವಿಟರ್‌ನಲ್ಲಿ ಬಾಯ್ಕಾಟ್ ವಿರಾಟಪರ್ವಂ ಎಂದು ಟ್ವೀಟ್ ಮಾಡುತ್ತಿದ್ದಾರೆ. ತೆಲುಗು ಚಿತ್ರ 'ವಿರಾಟ ಪರ್ವಂ' ಪ್ರಚಾರದ ಭಾಗವಾಗಿ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ನಟಿ ಸಾಯಿ ಪಲ್ಲವಿ, 'ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ಕಾಶ್ಮೀರಿ ಪಂಡಿತರ ಹತ್ಯೆಯನ್ನು ತೋರಿಸಲಾಗಿದೆ. ನೀವು ಅದನ್ನು ಧಾರ್ಮಿಕ ಸಂಘರ್ಷ ಎಂದು ನೋಡಿದರೆ, ಹಸುಗಳನ್ನು ಸಾಗಿಸುವ ಮುಸಲ್ಮಾನರ ಮೇಲಿನ ಹಲ್ಲೆ ಘಟನೆಯನ್ನೂ ಹಾಗೇ ನೋಡಬೇಕಲ್ವಾ.‌ ಇತ್ತೀಚಿಗೆ, ಗೋವು ಸಾಗಿಸುತ್ತಿದ್ದ ಮುಸ್ಲಿಂ ವ್ಯಕ್ತಿಯಿಂದ 'ಜೈ ಶ್ರೀರಾಮ್' ಎಂದು ಘೋಷಣೆ ಕೂಗಿಸಿದ್ದಾರೆ. ಹಾಗಾದರೆ ಆಗ ನಡೆದಿದ್ದಕ್ಕೂ ಈಗ ಆಗುತ್ತಿರುವುದಕ್ಕೂ ಏನು ವ್ಯತ್ಯಾಸ?' ಎಂದು ಪ್ರಶ್ನೆ ಮಾಡಿದ್ದರು.

A police complaint has been filed against actor Sai Pallavi in Hyderabad following her remarks during an interview comparing the exodus of Kashmiri Pandits with the present-day violence in the name of cow vigilantism in the country. The complaint was submitted on Wednesday by Akhil, a member of right-wing outfit Bajrang Dal, at the Sultan Bazar police station in Hyderabad demanding action against the actor.