ಬ್ರೇಕಿಂಗ್ ನ್ಯೂಸ್
25-06-22 04:08 pm HK News Desk ದೇಶ - ವಿದೇಶ
ಪಾಟ್ನಾ, ಜೂನ್ 25: ಬಿಹಾರದ ಅರಾರಿಯಾ ಜಿಲ್ಲೆಯ ಲಕ್ಷ್ಮೀನಾರಾಯಣ ದೇವಸ್ಥಾನಕ್ಕೆ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿ, ಅಲ್ಲಿದ್ದ ದೇವರ ಮೂರ್ತಿಯನ್ನು ಭಗ್ನಗೊಳಿಸಿರುವ ಘಟನೆ ನಡೆದಿದೆ. ಅಲ್ಲದೆ, ದೇಗುಲದ ಒಳಗೆ ಇಸ್ಲಾಮಿಕ್ ಧ್ವಜವನ್ನು ನೆಟ್ಟಿದ್ದಾರೆ.
ಅರಾರಿಯಾ ಜಿಲ್ಲೆಯ ರಾಮಪುರ್ ಕೋದಾರಕಟ್ಟಿ ಪಂಚಾಯತ್ ಏರಿಯಾದಲ್ಲಿ ಘಟನೆ ನಡೆದಿದ್ದು, ಮಂಗಳವಾರ ರಾತ್ರಿ ದೇವಸ್ಥಾನಕ್ಕೆ ನುಗ್ಗಿದ ದುಷ್ಕರ್ಮಿಗಳು ವಿಗ್ರಹವನ್ನು ಭಗ್ನಗೊಳಿಸಿ, ಅಲ್ಲಿ ನೆಟ್ಟಿದ್ದ ಕೇಸರಿ ಧ್ವಜವನ್ನು ಕೆಡವಿ ಹಾಕಿದ್ದಾರೆ. ದೇವಸ್ಥಾನದ ಒಳಗಿದ್ದ ಶೇಷನಾಗ ವಿಗ್ರಹವನ್ನು ಭಗ್ನ ಮಾಡಿದ್ದಾರೆ.

ಬುಧವಾರ ರಾತ್ರಿ ಸ್ಥಳೀಯರು ದೇವಸ್ಥಾನಕ್ಕೆ ತೆರಳಿದ್ದಾಗ ಘಟನೆ ಬೆಳಕಿಗೆ ಬಂದಿತ್ತು. ಕೂಡಲೇ ಪೊಲೀಸರು ಬಂದು ತನಿಖೆ ಕೈಗೆತ್ತಿಕೊಂಡಿದ್ದಾರೆ. ಸ್ಥಳೀಯ ಪಂಚಾಯತ್ ಪ್ರತಿನಿಧಿಗಳು ಘಟನೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದು ಭಾವನೆಗಳನ್ನು ಘಾಸಿಗೊಳಿಸುವ ಉದ್ದೇಶದಿಂದಲೇ ಈ ಕೃತ್ಯ ನಡೆಸಲಾಗಿದೆ ಎಂದು ಪಂಚಾಯತ್ ಪ್ರತಿನಿಧಿ ರಾಜೇಶ್ ಕುಮಾರ್ ಸಿಂಗ್ ಹೇಳಿದ್ದಾರೆ. ಪೊಲೀಸರು ಅಪರಿಚಿತರ ಕೃತ್ಯದ ಬಗ್ಗೆ ಎಫ್ಐಆರ್ ದಾಖಲಿಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಇದೇ ವೇಳೆ, ಜಿಲ್ಲೆಯನ್ನು ಪ್ರತಿನಿಧಿಸುವ ಲೋಕಸಭಾ ಸದಸ್ಯ, ಬಿಜೆಪಿ ಮುಖಂಡ ಪ್ರದೀಪ್ ಕುಮಾರ್ ಸಿಂಗ್, ಆರೋಪಿಗಳ ಬಂಧನಕ್ಕೆ 24 ಗಂಟೆಗಳ ಗಡುವು ವಿಧಿಸಿದ್ದಾರೆ.
On Thursday, a group of unidentified persons attacked the Lakshmi Narayan temple in the Araria district of Bihar and vandalized the temple idol. The group who attacked the temple and damaged the idol also hoisted the Islamic flag inside the temple.According to the reports, the incident happened in a village in the Rampur Kodarkatti panchayat area where the miscreants attacked the temple on Tuesday night and dismantled the Hindu religious symbol and saffron flag posed inside the temple. They also vandalized the idol of ‘Sheshnag’ and hoisted the Islamic flag which was later taken down.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm