ಮುಂಬೈ ; ನಾಲ್ಕು ಅಂತಸ್ತಿನ ಕಟ್ಟಡ ಕುಸಿತ,19 ಜನರ ಸಾವು ! 

29-06-22 11:24 am       HK News Desk   ದೇಶ - ವಿದೇಶ

ವಾಣಿಜ್ಯ ನಗರಿ ಮುಂಬೈನ ಕುರ್ಲ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡ ಕುಸಿತಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ ಎಂದು ಬುಧವಾರ ತಿಳಿದುಬಂದಿದೆ. 

ಮುಂಬೈ, ಜೂ 29: ವಾಣಿಜ್ಯ ನಗರಿ ಮುಂಬೈನ ಕುರ್ಲ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡ ಕುಸಿತಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ ಎಂದು ಬುಧವಾರ ತಿಳಿದುಬಂದಿದೆ. 

ಕುರ್ಲಾದ ನಾಯಕ್ ನಗರ ಸೊಸೈಟಿಯಲ್ಲಿರುವ ವಸತಿ ಕಟ್ಟಡದ ಒಂದು ಭಾಗ ಸೋಮವಾರ ಮಧ್ಯರಾತ್ರಿ ಕುಸಿದು ಬಿದ್ದಿತ್ತು. ಘಟನೆ ಸಂಬಂಧ ಇದೀಗ ಮೃತರ ಸಂಖ್ಯೆ 19ಕ್ಕೆ ಏರಿಕೆಯಾಗಿದ್ದು, ಗಾಯಗೊಂಡಿರುವ 15 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

Building collapse kills 3 people in India's Mumbai city - ABC News

ಈ ನಡುವೆ ಘಟನೆ ಸಂಬಂಧ ಕಟ್ಟಡದ ಮಾಲೀಕ ಹಾಗೂ ದಿಲೀಕ್ ಬಿಸ್ವಾಸ್ ಎಂಬುವವರ ವಿರುದ್ಧ ಮುಂಬೈ ಪೊಲೀಸರು ಐಪಿಸಿ ಸೆಕ್ಷನ್ 302 (2), 308, 337 ಮತ್ತು 34 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Mumbai: 19 dead as building once considered fit for demolition collapses |  Business Standard News

ಘಟನೆ ಸಂಬಂಧ ನಿನ್ನೆಯಷ್ಟೇ ತೀವ್ರ ಸಂತಾಪ ಸೂಚಿಸಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ ರೂ.2 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50 ಸಾವಿರ ನೀಡುವುದಾಗಿ ತಿಳಿಸಿದ್ದರು. 

Building collapse kills three people in Mumbai | HeraldScotland

Uddhav Thackeray Covid News: Maharashtra CM Uddhav Thackeray tests Covid  positive ahead of Congress MLA meeting - The Economic Times

ಇದರಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೂಡ ಮೃತರ ಕುಟುಂಬಕ್ಕೆ ತಲಾ ರೂ.5 ಲಕ್ಷ ಪರಿಹಾರ ಘೋಷಿಸಿದ್ದರು.

Mumbai building collapse: 19 die, 13 injured. CM, rebel MLA announces  financial aid. Details here | Mint

ಬೃಹನ್ಮುಂಬೈ ಮಹಾನಗರ ಪಾಲಿಕೆ ಹಳೆಯ ಕಟ್ಟಡಗಳನ್ನು ತೆರವುಗೊಳಿಸುವಂತೆ ನೋಟಿಸ್ ನೀಡಲಾಗಿದೆ. ನಿವಾಸಿಗಳು ಮನೆಗಳನ್ನು ತೊರೆಯದಿದ್ದರೆ ಇಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ ಎಂದು ಹೇಳಿದರು.

At least 19 people died after a four-storey building in Mumbai’s Kurla collapsed on Monday night. According to the Mumbai Police, an additional 15 people were injured in the incident with rescue operations still going on to retrieve those buried under the debris.